ಬಳ್ಳಾರಿ | ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ ನೀಡಲು ಜಿಲ್ಲಾಧಿಕಾರಿಗೆ ಎಐಕೆಕೆಎಂಎಸ್ ಮನವಿ

Date:

Advertisements

ಪ್ರಸ್ತುತ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿ ಜಲ್ಲಾಧಿಕಾರಿಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್)‌ ಮನವಿ ಸಲ್ಲಿಸಿತು.

ಸದ್ಯ ಒಂದು ಕ್ವಿಂಟಲ್ ಮೆಣಸಿನಕಾಯಿ ₹8,000 ದಿಂದ ₹10,000 ವರೆಗೆ ಖರೀದಿಯಾಗುತ್ತಿದೆ. ಇಷ್ಟು ಕಡಿಮೆ ಬೆಲೆಯಿಂದ ರೈತರಿಗೆ ಲಾಭವಿರಲಿ, ಹಾಕಿದ ಬಂಡವಾಳವೂ ಬರುತ್ತಿಲ್ಲ. ಇದನ್ನು ಪರಿಗಣಿಸಿ ಕೂಡಲೇ ಮೆಣಸಿನಕಾಯಿ ಕ್ವಿಂಟಲ್‌ಗೆ ₹25,000 ಹಾಗೂ ಬ್ಯಾಡಗಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹50,000 ಬೆಂಬಲ ಬೆಲೆ ನೀಡಬೇಕು ಎಂದು ನಗರದ ಗಾಂಧಿ ಭವನದಿಂದ ಪ್ರತಿಭಟನೆ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಮಾತನಾಡಿ, “ಕೇಂದ್ರ ಸರ್ಕಾರವು ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ ನೀಡಲು ಮುಂದಾಗುತ್ತಿಲ್ಲ. ವಾಣಿಜ್ಯ ಬೆಳೆಯಾದ ಕಾರಣ ಇದು ಎಂಎಸ್‌ಪಿ ಅಡಿಯಲ್ಲಿ ಸೇರುವುದಿಲ್ಲವೆಂದು ಕಾರಣ ನೀಡಿ ಬೆಂಬಲ ಬೆಲೆ ನೀಡದೆ, ನಿರಾಕರಿಸುತ್ತಿದೆ. ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಬಹುತೇಕ ರೈತರು ಮೆಣಸಿನಕಾಯಿ ಬೆಳೆದಿದ್ದಾರೆ. ಬಳ್ಳಾರಿಯ ಭಾಗಶಃ ಮೆಣಸಿನಕಾಯಿ ಬೆಳೆಯು ಬ್ಯಾಡಗಿಯ ಮಾರುಕಟ್ಟೆಗೆ ಹೋಗಿ ಮಾರಾಟವಾಗುತ್ತಿದೆ. ಇದರಿಂದ ಪ್ರಯಾಣದ ವೆಚ್ಚವೂ ಸಹ ಹೆಚ್ಚಾಗುತ್ತಿದೆ. ಅದ್ದರಿಂದ, ಕೇಂದ್ರ, ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ಘೋಷಿಸಬೇಕು” ಎಂದು‌ ಒತ್ತಾಯಿಸಿದರು.

Advertisements

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, ‘ಮೆಣಸಿನಕಾಯಿ ಬೆಳೆಗೆ ತಗುಲುವ ಕಪ್ಪು ಮಚ್ಚೆ ರೋಗಕ್ಕೆ ಔಷಧ ಕಂಡುಹಿಯಬೇಕು. ಬೀಜ, ರಸಗೊಬ್ಬರ ಮತ್ತು ಕೀಟನಾಶಕದ ಬೆಲೆ ನಿಯಂತ್ರಿಸಬೇಕು. ಸರ್ಕಾರವೇ ಔಷಧ ವಿತರಣಾ ಕೇಂದ್ರ ತೆರೆಯಬೇಕು. ಇಲ್ಲದಿದ್ದರೆ ಮಾ. 4 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ’ ಎಂದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ನಾನು ಪ್ರಾಮಾಣಿಕ, ಪಕ್ಷ ಬಿಡುವ ಮಾತೇ ಇಲ್ಲ: ಮಾಜಿ ಸಚಿವ ಶ್ರೀರಾಮುಲು

ಈ ವೇಳೆ ಕೂಳೂರು ಬಸಣ್ಣ, ಸೋಮಸಮುದ್ರ ಹೊನ್ನೂರಪ್ಪ, ಜಿಲ್ಲಾ ಸಮಿತಿ ಸದಸ್ಯ ಮಂಗಪ್ಪ, ಧನರಾಜ್, ಗೋಪಾಲ್, ಕಾಸಿಂ ಸಾಬ್, ಮಲ್ಲಪ್ಪ, ರೈತ ಮುಖಂಡ ಕಲ್ಲುಕಂಬ ಪಂಪಾಪತಿ, ರೈತರಾದ ರಾಮಕೃಷ್ಣ, ವೀರೇಶ್ ಗೌಡ, ತಿಮ್ಮಪ್ಪ, ಮೋವಿಂದ್, ಗಂಗಾಧರ, ಎಂಕಾತ್, ಗಾದಿಲಿಂಗಪ್ಪ, ಮಂಜುನಾಥ ಗೌಡ, ರಾಮನ ಗೌಡ, ರಾಜಶೇಖರ್ ರೆಡ್ಡಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X