ಬಳ್ಳಾರಿ | ಬಿಡಿಸಿಸಿ ಬ್ಯಾಂಕ್‌ನಲ್ಲಿ ಅವ್ಯವಹಾರ ಆರೋಪ; ಪಿಎಸಿ ಸದಸ್ಯರ ಆಕ್ರೋಶ

Date:

ಬಳ್ಳಾರಿಯ ಹೊಸಪೇಟೆ ಬಿಡಿಸಿಸಿ ಬ್ಯಾಂಕ್ ಮತ್ತು ಚಿಕ್ಕಜೋಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣಕಾಸು ಅವ್ಯವಹಾರದ ಆರೋಪ ಕೇಳಿಬಂದಿದೆ.

- Advertisement -

2019ರಲ್ಲಿ ಬ್ಯಾಂಕ್ ಕಟ್ಟಡ ನಿರ್ಮಾಣಕ್ಕಾಗಿ 15 ಲಕ್ಷ ರೂ. ಸಾಲವನ್ನು ಬಿಡಿಸಿಸಿ ಬ್ಯಾಂಕ್‌ನಿಂದ ಪಡೆದು, 15 ವರ್ಷಗಳಲ್ಲಿ ಕಂತು ಪಾವತಿಸುವಂತೆ ಒಪ್ಪಂದ ಮಾಡಿಕೊಂಡಿದ್ದರೂ, ಹೊಸ ಕಟ್ಟಡ ನಿರ್ಮಿಸದೆ ಹಳೆ ಕಟ್ಟಡವನ್ನೇ ಗಾರೆ ತೆಗೆದು ಸಿಮೆಂಟ್ ಪ್ಲಾಸ್ಟಿಂಗ್ ಮಾಡಿ ಸುಳ್ಳು ಲೆಕ್ಕ ನೀಡಿ ಹಣ ವಂಚನೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಂಘದ ಸದಸ್ಯರು ಖರ್ಚು ವೆಚ್ಚದ ವಿವರ ನೀಡುವಂತೆ ಬ್ಯಾಂಕ್‌ಗೆ ಮನವಿ ಸಲ್ಲಿಸಿದರೂ, ಅಧಿಕಾರಿಗಳು ಲೆಕ್ಕ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಸದಸ್ಯರು ಆರೋಪಿಸಿದ್ದಾರೆ. ಕಟ್ಟಡ ಕಾಮಗಾರಿಯನ್ನು ಟೆಂಡರ್ ಕರೆಯದೆ ಸ್ವತಃ ನಡೆಸಿಕೊಂಡು, ನಿಯಮ ಉಲ್ಲಂಘನೆ ಮಾಡಿದ ವಿಚಾರವೂ ಬಯಲಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ, ಸಂಘದ ಸದಸ್ಯರು ಸಂಬಂಧಪಟ್ಟ ಇಲಾಖೆಗೆ ಹಾಗೂ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಲು ಸಿದ್ಧರಾಗಿದ್ದಾರೆ. ಇತ್ತ, ಹೊಸಪೇಟೆ ಕೇಂದ್ರ ಕಚೇರಿಯಲ್ಲಿಯೂ ಇತ್ತೀಚೆಗೆ ನೂರಾರು ಕೋಟಿ ಸೈಬರ್ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬಳ್ಳಾರಿ | ಜೂಜು ಅಡ್ಡೆಗಳ ಮೇಲೆ ಪೊಲೀಸ್ ದಾಳಿ; 1136 ಮಂದಿ ವಿರುದ್ದ ಪ್ರಕರಣ ದಾಖಲು

ಅಖಂಡ ಬಳ್ಳಾರಿ ಜಿಲ್ಲಾ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ತಿಪ್ಪೇಸ್ವಾಮಿ ವಿರುದ್ಧ ಕುರಿಹಟ್ಟಿ ಓಬಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ರಾಜೀನಾಮೆ ಆಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.

ಕುರಿಹಟ್ಟಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಕನಡಕು ಸಣ್ಣ ಮಾರಣ್ಣ, ರೈತ ಮುಖಂಡ ಮಡಕಲಕಟ್ಟೆ ಕೃಷ್ಣಪ್ಪ, ಗುರುಲಿಂಗಣ್ಣ, ಕುರಿಹಟ್ಟಿ ವಿಶ್ವನಾಥ್ ಹಾಗೂ ಎಂ.ಬಿ. ಅಯ್ಯನಹಳ್ಳಿ ರಂಗಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...