ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

Date:

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ ಕಾರ್ಯಕ್ಕೆ ಅಂಗನವಾಡಿ ನೌಕರರನ್ನು ನಿಯೋಜಿಸಲಾಗಿದ್ದು, ಬಳ್ಳಾರಿಯ ಆಶಾ ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು, ಇತರ ಸಿಬ್ಬಂದಿ ಸೇರಿದಂತೆ 1.20ಲಕ್ಷ ಮಂದಿಯನ್ನು ‘ಗ್ಯಾರಂಟಿ ಸ್ವಯಂ ಸೇವಕ’ ರನ್ನಾಗಿ ನಿಯೋಜಿಸಲಾಗಿದೆ.. ಫೆಬ್ರುವರಿ 26ರಿಂದ ಸಮೀಕ್ಷೆ ಆರಂಭವಾಗಿದ್ದು, 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೊಬೈಲ್ ಅಪ್ಲಿಕೇಷನ್ ಆಧಾರಿತ ಸಮೀಕ್ಷೆ ಇದಾಗಿದ್ದು, ಅಂಗನವಾಡಿ ನೌಕರರು ನಿಗದಿಪಡಿಸಿದ ಮನೆಗಳಿಗೆ ತೆರಳಿ ಐದು ಗ್ಯಾರಂಟಿಗಳ ಕುರಿತು ಪ್ರತಿಯೊಬ್ಬರ ಬಳಿ 35ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿ, ಉತ್ತರ ದಾಖಲಿಸಿಕೊಳ್ಳಬೇಕು.

ಸಮಗ್ರ ಶಿಶು ಅಭಿವೃದ್ಧಿಯ ಯೋಜನೆಯ ಕೆಲಸಗಳ ಜೊತೆ ಸಮೀಕ್ಷೆಯನ್ನೂ ನಡೆಸುವಂತೆ ಸರ್ಕಾರ ಸೂಚಿಸಿದೆ. ಆದರೆ, ಇದರಿಂದ ನಮ್ಮ ಮೂಲ ಕೆಲಸಕ್ಕೆ ತೊಂದರೆಯಾಗುತ್ತಿದೆ ಎಂದು ಅಂಗನವಾಡಿ ನೌಕರು ತಮ್ಮ ಅಳಲು ಹೊರಹಾಕುತ್ತಿದ್ದಾರೆ.

ಬೆಳಗ್ಗೆ 10ರವರೆಗೆ ಸಮೀಕ್ಷೆ, ನಂತರ ಕೆಲಸಕ್ಕೆ ಹಾಜರಾಗಬೇಕು. ಸಂಜೆ 5ರಿಂದ ಮತ್ತೇ ಸಮೀಕ್ಷೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಲ್ಲಿ ಇನ್ನೂ ಹಲವರಿಗೆ ಸ್ಮಾರ್ಟ್‌ಫೋನ್‌ ಬಳಕೆ ಗೊತ್ತಿಲ್ಲ ಇವರುಗಳಿಗೆ ಸಮೀಕ್ಷೆ ಕಾರ್ಯ ಕಷ್ಟ. ಗ್ಯಾರಂಟಿಗಳಿಂದ ವಂಚಿತರು ಹೋದಲ್ಲೇಲ್ಲಾ ಕಿರಿಕಿರಿ ಮಾಡುತ್ತಾರೆ. ಅವರುಗಳಿಗೆ ಉತ್ತರಿಸಲಾಗದೇ ಹಲವು ಸಮಸ್ಯೆ, ಸವಾಲು ಎದುರಿಸಬೇಕಾಗಿದೆ ಎಂದು ಮಾಧ್ಯಮದವರ ಮುಂದೆ ಅಂಗನವಾಡಿ ನೌಕರರು ಬೇಸರ ತೋಡಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...