ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-2026ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಹಾಗೂ ಶುಚಿತ್ವ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರು, ಇಲ್ಲಿಗೆ 9ನೇ ತರಗತಿಗೆ ಸೇರಿಸಲು ಜಿಲ್ಲೆಯಿಂದ 04 ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬಳ್ಳಾರಿ | ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ 6 ಮತ್ತು 7ನೇ ತರಗತಿಯ ಅಂಕಪಟ್ಟಿಯೊಂದಿಗೆ ಮಾ.25 ರೊಳಗಾಗಿ ಇದೇ ಕಚೇರಿ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
