ಬಳ್ಳಾರಿ | ಮಾರಕಾಸ್ತ್ರದಿಂದ ಹಲ್ಲೆ; ಪೊಲೀಸ್‌ ಪೇದೆ ಸಾವು

Date:

  • ಪೊಲೀಸ್‌ ವಸತಿ ಗೃಹದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಪೇದೆ
  • ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್‌ ಕಾನ್ಸ್‌ಟೇಬಲ್‌ ಸಾವು

ಸಶಸ್ತ್ರ ಮೀಸಲು ಪಡೆ (ಡಿಎಆರ್) ಪೊಲೀಸ್ ಕಾನ್ಸ್‌ಟೇಬಲ್ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಮೃತ ಪೇದೆ ಜಾಫರ್ ಎಂದು ತಿಳಿದುಬಂದಿದೆ. ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸ್‌ ವಸತಿ ಗೃಹದಲ್ಲಿ ಬುಧವಾರ ರಾತ್ರಿ ಜಾಫರ್ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕಿವಿಯಲ್ಲಿ ರಕ್ತಸ್ರಾವವಾಗುತ್ತಿತ್ತು. ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಂಧಿನಗರ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಾಫರ್‌ ಅವರು 2009ರಲ್ಲಿ ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಆಗಿ ನೇಮಕವಾಗಿದ್ದರು. ಅವರು 2ನೇ ಮದುವೆಯಾಗಿದ್ದರು. 2ನೇ ಪತ್ನಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ ಮೊದಲ ಹೆಂಡತಿ ಮುಸ್ಲಿಂ, ಎರಡನೇ ಹೆಂಡತಿ ಹಿಂದು ಧರ್ಮಕ್ಕೆ ಸೇರಿದವರು ಎಂಬ ಮಾಹಿತಿ ಲಭ್ಯವಾಗಿದೆ. ಮೊದಲ ಹೆಂಡತಿಯನ್ನು ತವರು ಮನೆಯಲ್ಲಿ ಬಿಟ್ಟಿದ್ದ ಜಾಫರ್ ಕಳೆದ ಕೆಲವು ದಿನಗಳ ಹಿಂದೆ 2ನೇ ಪತ್ನಿಯೊಂದಿಗೂ ಜಗಳ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ. ಕೌಟುಂಬಿಕ ಕಲಹದಿಂದಲೇ ಹಲ್ಲೆ ಮತ್ತು ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.

ಗಾಂಧಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮೆರವಣಿಗೆ ವೇಳೆ ಎಲ್‌ಇಡಿ ಪರದೆ ಬಿದ್ದು ಒಬ್ಬರಿಗೆ ಗಾಯ; ಆಸ್ಪತ್ರೆಗೆ ಸಚಿವರ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ...

ಬಾಗಲಕೋಟೆ | ಲೋಕಸಭೆ ಚುನಾವಣೆಗೆ ಮಲ್ಲಿಕಾರ್ಜುನ ಎಚ್ ಟಿ ನಾಮಪತ್ರ ಸಲ್ಲಿಕೆ

ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ...

ಗದಗ | ಮೇ 7ರಂದು ಮತದಾನದ ಹಬ್ಬದಲ್ಲಿ ಭಾಗಿಯಾಗಿ ಮತ ಚಲಾಯಿಸಿ; ಎಸ್ ಕೆ ಇನಾಮದಾರ

ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇ...

ಯಾದಗಿರಿ | 40 ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ; ಕ್ರಮಕ್ಕೆ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ...