ಬಳ್ಳಾರಿ ನಗರದಲ್ಲಿ ಇನ್ಮುಂದೆ ಫ್ಲೆಕ್ಸ್, ಬ್ಯಾನರ್‌ಗಳನ್ನು ಪ್ರಿಂಟ್ ಮಾಡಿದರೂ, ಫ್ಲೆಕ್ಸ್ ಬ್ಯಾನರ್‌ಗಳನ್ನು ಕಟ್ಟಿದವರ ಮೇಲೆ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆಯ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರ ನಿರ್ದೇಶನದ ಮೇರೆಗೆ ಪಾಲಿಕೆಯ ಆರೋಗ್ಯ ಅಧಿಕಾರಿಗಳ ತಂಡ ನಗರದಲ್ಲಿರುವ ಆರು ಫ್ಲೆಕ್ಸ್ ಬ್ಯಾನರ್ ಪ್ರಿಂಟರ್ಸ್ ಮೇಲೆ ದಾಳಿ ನಡೆಸಿ ಅಂದಾಜು ನೂರು ಕೆಜಿಯಷ್ಟು ಫ್ಲೆಕ್ಸ್ ಪ್ರಿಂಟಿಂಗ್ ಶೀಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
“ಮಹಾನಗರ ಪಾಲಿಕೆ ಆಯುಕ್ತ ಖಲೀಲ್ ಸಾಬ್ ಅವರ ನೇತೃತ್ವದಲ್ಲಿ ಫ್ಲೆಕ್ಸ್ ಬ್ಯಾನರ್ ಪ್ರಿಂಟರ್ಸ್ ಮಾಲೀಕರೊಂದಿಗೆ ಸಭೆ ನಡೆಸಿ ಮುಂದಿನ ದಿನಗಳಲ್ಲಿ ನಿಷೇಧಿಸಿದ ಬ್ಯಾನರ್ ಪ್ರಿಂಟಿಂಗ್ ನಿಲ್ಲಿಸದಿದ್ದಲ್ಲಿ ದಂಡ ವಿಧಿಸಿ ಟ್ರೇಡ್ ಲೈಸನ್ಸ್ ಕ್ಯಾನ್ಸಲ್ ಮಾಡಲಾಗುತ್ತದೆ” ಎಂದು ಎಚ್ಚರಿಸಿದ್ದಾರೆ.
ನಗರದಲ್ಲಿ ಎಲ್ಲೆಂದರಲ್ಲಿ 70ರಿಂದ 80ಕಡೆ ಹಾಕಲಾಗಿದ್ದ ಅನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆಯನ್ನೂ ಕೂಡ ನಡೆಸಿದ್ದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಅರಿವು ಮೂಡಿಸಿ ನಂತರ ಕಾನೂನು ಕ್ರಮಕ್ಕೆ ಮುಂದಾಗಿ, ಸುಧೀರ್ ಕುಮಾರ್ ಮುರೊಳ್ಳಿ
“ನಗರದಲ್ಲಿ ಇತ್ತೀಚೆಗೆ ಫ್ಲೆಕ್ಸ್ ಬ್ಯಾನರ್‌ಗಳ ಹಾವಳಿ ಹೆಚ್ಚಾಗಿದ್ದು, ತಡವಾಗಿ ಆದರೂ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ನಗರದಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಂಡಿರುವುದು ಶ್ಲಾಘನೀಯ” ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.