ಬಳ್ಳಾರಿ | ಚುನಾವಣೆಗೆ ಮುನ್ನವೇ ಪದವೀಧರರನ್ನು ಸೆಳೆಯುವ ಯತ್ನ; ಪ್ರತ್ಯೇಕ ಮತ ಬ್ಯಾಂಕ್‌ ಸೃಷ್ಟಿ

Date:

ಈಶಾನ್ಯ ಪದವೀಧರರ ಮತಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಧಿಕೃತ ಗೆಜೆಟ್ ನೊಟಿಫಿಕೇಶನ್ ಹೊರಡಿಸದೆ ಇದ್ದರೂ, ಬಳ್ಳಾರಿ ಜಿಲ್ಲೆಯಲ್ಲಿನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಸಂಘ ಸಂಸ್ಥೆಗಳು ಈಶಾನ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪದವೀಧರರ ಮನೆ ಮನೆಗೆ ತೆರಳಿ ಮತದಾರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಿ ಗುರುತಿನ ಚೀಟಿಗೆ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿ ಪದವೀಧರರನ್ನು ಸೆಳೆಯಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ.

ಮುಂಬರುವ ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ಮತದಾನದ ಗುರುತಿನ ಚೀಟಿಗೆ ಹೆಸರು ಸೇರ್ಪಡೆ ಮಾಡಲು ಪದವೀಧರರಿಂದ ಪದವಿ ಪೂರ್ಣಗೊಳಿಸಿದವರಿಗೆ ನೋಂದಣಿಗೆ ಆಧಾರ್ ಕಾರ್ಡ್, ಪದವೀಧರರ ಅಂತಿಮ ವರ್ಷದ ಅಂಕಪಟ್ಟಿ ಮತದಾರರ ಗುರುತಿನ ಚೀಟಿ ಹಾಗೂ ಎರಡು ಭಾವಚಿತ್ರಗಳನ್ನು ಪಡೆಯುತ್ತಿದ್ದಾರೆ.

“ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು, ಸಂಘ ಸಂಸ್ಥೆಗಳ ಮುಖಂಡರು ತಮ್ಮ ತಮ್ಮ ಬೆಂಬಲಿಗರಿಂದ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪದವೀಧರರಿಗೆ ಪದವೀಧರ ಕ್ಷೇತ್ರದ ಮತ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳುವಂತೆ ಚುನಾವಣೆ ಗುರುತಿನ ಚೀಟಿ ಮಾಡಿಸಿ ಕೊಡುವುದಾಗಿ ಪದವೀಧರರ ಹತ್ತಿರ ಅಗತ್ಯ ದಾಖಲೆಗಳನ್ನು ಕಲೆ ಹಾಕುವ ಮೂಲಕ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಪ್ರತ್ಯೇಕ ವೋಟ್ ಬ್ಯಾಂಕ್ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ” ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಅವಹೇಳನ; ಅರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

“ರಾಜ್ಯ ಸರ್ಕಾರ ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಗೆಜೆಟ್ ನೊಟಿಫಿಕೇಶನ್ ಹೊರಡಿಸಿಲ್ಲ. ಒಂದು ವೇಳೆ ಹೊರಡಿಸಿದರೂ ಪ್ರತ್ಯೇಕ ಮಾರ್ಗಸೂಚಿಗಳನ್ನು ತಿಳಿಸುತ್ತದೆ. ಹಾಗೂ ಚುನಾವಣೆ ಆಯೋಗದ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಸಮಯವಕಾಶ ನೀಡುತ್ತದೆ. ಬಳ್ಳಾರಿಯಲ್ಲಿ ಪದವೀಧರರ ನೋಂದಣಿ ಹೆಸರಿನಲ್ಲಿ ರಾಜಕಾರಣಿಗಳು ಪದವೀಧರರಿಂದ ಅಗತ್ಯ ದಾಖಲೆ ಪಡೆಯುತ್ತಿದ್ದಾರೆ. ಪ್ರತ್ಯೇಕ ಮತ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ” ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...