ಬಳ್ಳಾರಿ | ಸಂಜೀವನ ಕೋಟೆಯಲ್ಲಿ ಕರಡಿ ದಾಳಿ; ರೈತನಿಗೆ ಮಾರಣಾಂತಿಕ ಗಾಯ

Date:

Advertisements

ಬಳ್ಳಾರಿ ತಾಲೂಕಿನ ಸಂಜೀವನ ಕೋಟೆ ಗ್ರಾಮದಲ್ಲಿ ಜಾನುವಾರಿಗಳಿಗೆ ಹುಲ್ಲು ಕೊಯ್ಯಲು ಜಮೀನಿಗೆ ಹೊರಟಿದ್ದ ರೈತನ ಮೇಲೆ ಕರಡಿಗಳು ದಾಳಿ ನಡೆಸಿ ಮಾರಣಾಂತಿಕವಾಗಿ ಗಾಯಗೊಳಿಸಿವೆ.

ರಾಜ (55) ಕರಡಿ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿ. ಮುಂಜಾನೆ ಹೊಲದ ಕಡೆ ಹೊರಟಿದ್ದವನ ಮೇಲೆ ಕುಂಬಾರ ಕುಂಟೆ ಪ್ರದೇಶದಲ್ಲಿ ಮರಿ ಕರಡಿಯೊಂದು ದಾಳಿ ನಡೆಸಿದೆ. ಪಕ್ಕದಲ್ಲಿದ್ದ ತಾಯಿ ಕರಡಿ ಸಹ ಈತನ ಮೇಲೆ ಮುಗಿಬಿದ್ದು ಮುಖಮೂತಿ ತಲೆಯನ್ನು ಕಚ್ಚಿ ಮಾಂಸ ಕಂಡವನ್ನು ಕಿತ್ತುಹಾಕಿವೆ. ಸ್ವಲ್ಪ ದೂರದಲ್ಲಿದ್ದ ಸಾರ್ವಜನಿಕರು ಕರಡಿ ದಾಳಿ ಮಾಡುತ್ತಿರುವುದನ್ನ ನೋಡಿ ಓಡಿ ಬಂದು ಓಡಿಸಿದ್ದಾರೆ.

ಗಂಭೀರ ಹಾಗೂ ಮಾರಣಾಂತಿಕವಾಗಿ ಗಾಯಗೊಂಡ ರೈತನನ್ನು ನಗರದ ಬಿಎಂಅರ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಡಿ ದಾಳಿಗೊಳಗಾದ ವ್ಯಕ್ತಿ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: ಬಳ್ಳಾರಿ | ಬಗರು ಹುಕುಂ ಭೂಮಿ ಅರ್ಜಿಗಳ ಶೀಘ್ರ ವಿಲೇವಾರಿ ಮಾಡಿ: ದಸಂಸ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X