ಬಳ್ಳಾರಿ | ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ; ಯುವಕನ ಬಂಧನ

Date:

ಶಾಸಕ ಭರತ್ ರೆಡ್ಡಿ ಕಚೇರಿಗೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶವೊಂದು ಬಂದಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.

- Advertisement -

ಬಾಂಬ್ ಇರಿಸಿದ ಬೆದರಿಕೆ ಹಾಕಿರುವ ಬಂಧಿತ ಯುವಕ 10ನೇ ವಾರ್ಡ್, ಅಂದ್ರಾಳ್ ಗ್ರಾಮದ ಸಂತೋಷ್ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಭರತ್ ರೆಡ್ಡಿ ಕಚೇರಿಗೆ ಬಾಂಬ್ ಇರಿಸಿರುವುದಾಗಿ ಸೋಮವಾರ ತಡರಾತ್ರಿ ಬೆಂಗಳೂರಿನಲ್ಲಿದ್ದ ಶಾಸಕರ ವಾಟ್ಸಪ್ ನಂಬರ್‌ಗೆ ಸಂದೇಶ ಬಂದಿದೆ. ಇದನ್ನು ಗಮನಿಸಿದ ಶಾಸಕ ಕೂಡಲೇ ಗಾಂಧಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಚ್ಚೆತ್ತ ಪೊಲೀಸರು ಬಳ್ಳಾರಿಯಲ್ಲಿರುವ ಶಾಸಕ ಭರತ್ ರೆಡ್ಡಿ ಅವರ ಕಚೇರಿಯನ್ನು ಪರಿಶೀಲನೆ ನಡೆಸಿ ಬಳಿಕ ಬೆದರಿಕೆ ಸಂದೇಶ ಬಂದಿರುವ ವಾಟ್ಸಪ್ ನಂಬರ್ ಟ್ರೇಸ್ ಮಾಡಿ ಬಳ್ಳಾರಿಯ ರೂಪನಗುಡಿ ರಸ್ತೆಯ ಸಂತೋಷ್ ಎಂಬ ಯುವಕನ್ನು ಬಂಧಿಸಿದ್ದಾರೆ.

WhatsApp Image 2025 03 18 at 7.29.25 PM

ಉನ್ನತ ವ್ಯಾಸಂಗ ಮಾಡಿದರೂ ಕೆಲಸವಿಲ್ಲದೇ ಮನೆಯಲ್ಲೇ ಇದ್ದ ಸಂತೋಷ್ ಸೋಮವಾರ ತಡರಾತ್ರಿ ಕುಡಿದ ಮತ್ತಿನಲ್ಲಿ ಬಳ್ಳಾರಿ ಶಾಸಕ ಭರತ್ ರೆಡ್ಡಿ ಅವರ ವಾಟ್ಸಪ್ ನಂಬರ್‌ಗೆ ಈ ಸಂದೇಶವನ್ನು ಕಳುಹಿಸಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಅಲ್ಲದೆ ಯುವಕನನ್ನು ಪರಿಶೀಲಿಸಿದ ಪೊಲೀಸರಿಗೆ ಯುವಕ ಕುಡಿದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇದನ್ನೂ ಓದಿ: ಬಳ್ಳಾರಿ | ಮಾನವ ಕಲ್ಯಾಣ ಕಾರ್ಯವು ವಿಶ್ವಮಾನ್ಯವಾದುದು: ಪ್ರೊ. ಎಂ ಮುನಿರಾಜು

ಸಂತೋಷ್ ಕುಡಿದ ಅಮಲಿನಲ್ಲಿ ಬೆದರಿಕೆ ಸಂದೇಶ ಕಳುಹಿಸಿರುವುದು ಮೇಲ್ನೋಟಕ್ಕೆ ಕಂಡು ಬಂದರೂ ಯಾಕಾಗಿ ಈ ರೀತಿ ಸಂದೇಶ ಕಳುಹಿಸಿದ್ದಾನೆ ಎಂಬುದರ ಕುರಿತು ಹೆಚ್ಚಿನ ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...