ಬಳ್ಳಾರಿ | ಮಕ್ಕಳಿಗೆ ತಪ್ಪದೇ ದಡಾರ ಲಸಿಕೆ ಹಾಕಿಸಬೇಕು: ಡಾ.ಹನುಮಂತಪ್ಪ

Date:

ಮಗುವಿಗೆ ಒಂಬತ್ತು ತಿಂಗಳು ತುಂಬಿದ ಬಳಿಕ ತಪ್ಪದೇ ರುಬೆಲ್ಲಾ ಅಥವಾ ದಡಾರ ಲಸಿಕೆ ಹಾಕಿಸುವ ಮೂಲಕ ಅಪಾಯಕಾರಿ ದಡಾರವನ್ನು ತಡೆಯಬಹುದು ಎಂದು ಬಳ್ಳಾರಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಹನುಮಂತಪ್ಪ ಹೇಳಿದರು.

- Advertisement -

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನ ಮಾರ್ಗದರ್ಶನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾದ್ಯಂತ ದಡಾರ ಪ್ರಕರಣಗಳು ಈ ಪೂರ್ವದಲ್ಲಿ ವರದಿಯಾದ ಗ್ರಾಮ, ಬಡಾವಣೆಗಳನ್ನು ಗುರಿಯಾಗಿಟ್ಟುಕೊಂಡು ಹಮ್ಮಿಕೊಂಡಿದ್ದ ವಿಶೇಷ ಲಸಿಕಾ ಅಭಿಯಾನದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸಾಮಾನ್ಯವಾಗಿ ಬೇಸಿಗೆಯಲ್ಲಿ ಬೆವರುಸಾಲೆಯಿಂದ ದೇಹದ ಮೇಲೆ ನುಚ್ಚು ಗುಳ್ಳೆಗಳು ಕಂಡುಬರುವುದು ಸಹಜವಾಗಿದ್ದು, ಇದೇ ರೀತಿ ಕಂಡುಬರುವ ದಡಾರ ಸೋಂಕು ಹರಡುವ ಮೈತುಂಬಾ ನುಚ್ಚು ಗುಳ್ಳೆಗಳ ಹಾಗೂ ಅಂತಹ ಮಕ್ಕಳಿಗೆ ಕೆಮ್ಮು, ಜ್ವರ, ಮೂಗಿನಿಂದ ಸುರಿಯುವುದು ಕಂಡುಬಂದು ಆರೋಗ್ಯದಲ್ಲಿ ಗಂಭೀರ ಪರಿಣಾಮ ಉಂಟಾಗಬಹುದು. ಮುಂಜಾಗೃತೆಗಾಗಿ ಮಕ್ಕಳಿಗೆ ದಡಾರ/ರುಬೆಲ್ಲಾ ಲಸಿಕೆ ಹಾಕಿಸಬೇಕು” ಎಂದು ತಿಳಿಸಿದರು.

ಮಕ್ಕಳಿಗೆ ದಡಾರ ಲಸಿಕೆ

“ಸಮುದಾಯದಲ್ಲಿ ಅಮ್ಮ, ತಟ್ಟು ಎಂದು ಕರೆಯಲ್ಪಡುವ ದಡಾರ ರೋಗವು ವೈರಸ್‌ನಿಂದ ಹರಡುತ್ತದೆ. ಸೋಂಕು ಹೊಂದಿದ ವ್ಯಕ್ತಿಯಿಂದ ವ್ಯಕ್ತಿ ಸಂಪರ್ಕದ ಮೂಲಕ ಕೆಮ್ಮು ಮತ್ತು ಸೀನುವಿಕೆಯಿಂದ ಇನ್ನೊಬ್ಬರಿಗೆ ಹರಡುತ್ತದೆ. ರೋಗವನ್ನು ನಿರ್ಲಕ್ಷಿಸಿದಲ್ಲಿ ಮಾರಣಾಂತಿಕವಾಗಬಹುದು. ಹಾಗಾಗಿ ಸಾರ್ವಜನಿಕರು ತಮ್ಮ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಹಾಗೂ ಒಂದೂವರೆ ವರ್ಷದ ಅವಧಿಯಲ್ಲಿ ತಪ್ಪದೇ ಲಸಿಕೆ ಹಾಕಿಸಿ” ಎಂದು ವಿನಂತಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ. ಆರ್ ಎಸ್ ಶ್ರೀಧರ ಮಾತನಾಡಿ, “ದಡಾರ ಸೋಂಕಿತ ವ್ಯಕ್ತಿಗೆ ಸುಮಾರು 10 ದಿನಗಳ ನಂತರ ದಡಾರದ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ದಡಾರದ ಅತ್ಯಂತ ಪ್ರಮುಖ ಲಕ್ಷಣವೆಂದರೆ ಕೆಂಪು ಬಣ್ಣದ ದದ್ದು(ಗುಳ್ಳೆ), ಆದರೆ ಇದು ಸಾಮಾನ್ಯವಾಗಿ ಮೊದಲ ಲಕ್ಷಣವಲ್ಲ. ದಡಾರವು ಸಾಮಾನ್ಯವಾಗಿ ಜ್ವರ ತರಹದ ಕಾಯಿಲೆಯಾಗಿ ಪ್ರಾರಂಭವಾಗುತ್ತದೆ. 2 ರಿಂದ 4 ದಿನಗಳವರೆಗೆ ಇರುತ್ತದೆ” ಎಂದು ತಿಳಿಸಿದರು.

ದಡಾರ ಲಕ್ಷಣಗಳ ಕುರಿತು ಮಾತನಾಡಿ, “ಜ್ವರ, ಆಯಾಸ, ತೀವ್ರ ಕೆಮ್ಮು, ಕಾಂಜಂಕ್ಟಿವಿಟಿಸ್(ಕೆಂಪು ಕಣ್ಣುಗಳು), ಸ್ರವಿಸುವ ಮೂಗು, ಬಾಯಿಯಲ್ಲಿ ಬಿಳಿ ಚುಕ್ಕೆಗಳು(ಕೊಪ್ಲಿಕ್ ಚುಕ್ಕೆಗಳು ಎಂದು ಕರೆಯಲಾಗುತ್ತದೆ) ಇವು ಅನಾರೋಗ್ಯದ 3 ರಿಂದ 7 ದಿನಗಳಲ್ಲಿ ದದ್ದು ಕಾಣಿಸಿಕೊಳ್ಳುತ್ತದೆ. ಇದು ಸಾಮಾನ್ಯವಾಗಿ ಕೆಂಪು ಮತ್ತು ಮಚ್ಚೆಯಿಂದ ಕೂಡಿರುತ್ತದೆ. ಆದರೆ ತುರಿಕೆ ಇರುವುದಿಲ್ಲ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್‌ ಸತ್ಯಾಗ್ರಹ

“ದಡಾರದ ದದ್ದು ಸಾಮಾನ್ಯವಾಗಿ ತಲೆಯ ಮೇಲೆ ಪ್ರಾರಂಭವಾಗುತ್ತದೆ ಮತ್ತು ನಂತರ ದೇಹದ ಉಳಿದ ಭಾಗಗಳಿಗೆ ಹರಡುತ್ತದೆ. ಇದು ಸಾಮಾನ್ಯವಾಗಿ 4 ರಿಂದ 7 ದಿನಗಳವರೆಗೆ ಇರುತ್ತದೆ. ಒಂದು ವೇಳೆ ನಿರ್ಲಕ್ಷಿಸಿದರೆ ವಾಂತಿ-ಭೇದಿ, ನ್ಯುಮೋನಿಯಾ ಉಂಟಾಗಿ ಮಗು ಮರಣ ಹೊಂದಬಹುದು. ಈ ಹಿನ್ನಲೆಯಲ್ಲಿ ಪ್ರಸ್ತುತ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಹೆಚ್ಚುವರಿಯಾಗಿ ಒಂದು ಡೋಸ್ ಲಸಿಕೆ ಹಾಗೂ ಇದರೊಂದಿಗೆ ವಿಟಾಮಿನ್-ಎ ಅನ್ನಾಂಗ ದ್ರಾವಣವನ್ನೂ ನೀಡಲಾಗುತ್ತಿದ್ದು, ತಪ್ಪದೇ ಹಾಕಿಸಬೇಕು” ಎಂದು ಹೇಳಿದರು.

ಇದೇ ವೇಳೆ ನಗರದ ಗುಗ್ಗರಹಟ್ಟಿ, ಕಾರ್ಕಲತೋಟ ಕೌಲ್‌ಬಜಾರ್, ಆಶ್ರಯ ಕಾಲೋನಿಗಳಲ್ಲಿ ಲಸಿಕಾ ಕಾರ್ಯ ಪರಿಶೀಲಿಸಿದರು.

ಡಾ. ಕಾಶಿಪ್ರಸಾದ್, ಡಾ.ಶಗುಪ್ತಾ ಶಾಹೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್ ದಾಸಪ್ಪನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂಜುಳಾ, ನಾಗಲಕ್ಷ್ಮಮ್ಮ, ಜ್ಯೋತಿ, ಆರೋಗ್ಯ ನಿರೀಕ್ಷಣಾಧಿಕಾರಿ ಈರಯ್ಯ, ಮುದಸ್ಸೀರ್ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...