ಬಳ್ಳಾರಿ | ಗುಬ್ಬಿಯಲ್ಲಿ ದಲಿತ ಯುವಕರ ಮೇಲೆ ಹಲ್ಲೆ; ರೈಲ್ವೆ ಪೊಲೀಸ್‌ ಚಂದ್ರಶೇಖರ್‌ ಬಂಧನಕ್ಕೆ ರೈತ ಸಂಘ ಒತ್ತಾಯ

Date:

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ‌ಗಿಡದ ಮುದ್ದೇನಹಳ್ಳಿಯಲ್ಲಿ ಟಾಟಾ ಎಸಿ ವಾಹನದಲ್ಲಿ ‘ಜೈಭೀಮ್‌’ ಹಾಡು ಹಾಕಿದ್ದರೆಂಬ ಕಾರಣಕ್ಕೆ ದಲಿತ ಯುವಕರ ಮೇಲೆ ಹಲ್ಲೆ ಮಾಡಿದ ರೈಲ್ವೆ ಪೊಲೀಸ್ ಚಂದ್ರಶೇಖರ್‌ ಅವರನ್ನು ಸೇವೆಯಿಂದ ಅಮಾನತು ಮಾಡಿ ಬಂಧಿಸಬೇಕು ಎಂದು ದೇವದಾಸಿ ಮಹಿಳಾ ವಿಮೋಚನಾ ಸಂಘ, ಮಕ್ಕಳ ಹೋರಾಟ ಸಮಿತಿ ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿತು.

- Advertisement -

ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದ ಸಂಘಟನಾಕಾರರು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದ್ದು, ಇದೇ ವೇಳೆ ದುರಗಮ್ಮ ಮಾತನಾಡಿ, “ವಾಹನದಲ್ಲಿ ಅಂಬೇಡ್ಕರ್ ಅವರ ಹಾಡು ಹಾಕಿದ್ದಕ್ಕೆ ಮನಸೋ ಇಚ್ಛೆ ಹೊಡೆಯುವ ಹಕ್ಕು ಕೊಟ್ಟವರಾರು? ಅದರಿಂದ ಸಾರ್ವಜನಿವಾಗಿ ತೊಂದರೆಯಾಗಿದ್ದರೆ ತಿಳಿಹೇಳಬೆಕಿತ್ತು‌. ಅವರ ಮೇಲೆ ಕೈ ಮಾಡುವುದು ಮತ್ತು ದಲಿತರ ಯುವಕರ ಜಾತಿ ನಿಂದನೆ ಮಾಡುವುದು, ದೌರ್ಜನ್ಯ ಮಾಡುವುದು ಜಾತಿತಾರತಮ್ಯ ಹಾಗೂ ಅಸ್ಪೃಶ್ಯಾಚರಣೆ ಅಸಹನೆಯ ಪರಾಕಾಷ್ಠೆಯಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಈ ಸುದ್ದಿ ಓದಿದ್ದೀರಾ? ಜಾತಿ ಕ್ರೌರ್ಯ | ಬೀದರ್: ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಪೊಲೀಸ್ ಚಂದ್ರಶೇಖರ್ ಕೇವಲ ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ್ದಲ್ಲ. ಬದಲಿಗೆ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಅಪಮಾನಿಸಿದ್ದಾನೆ. ಆದ್ದರಿಂದ ಆತನ ಮೇಲೆ ಕೂಡಲೇ ಕಾನೂನು ಕ್ರಮ ಜರುಗಿಸಬೇಕು. ಅದೇ ರೀತಿ, ತೀವ್ರ ಹಲ್ಲೆಗೊಳಗಾಗಿರುವ ಯುವಕರ ಶುಶ್ರೂಷೆಯ ವೆಚ್ಚ ಸೇರಿದಂತೆ ಪರಿಹಾರವನ್ನೂ ಕೂಡಲೇ ಒದಗಿಸಬೇಕು” ಎಂದು ಆಗ್ರಹಿಸಿದರು.

ಕೆಪಿಆರ್‌ಎಸ್ ಸಂಘದ ಖಂದ‌ರ್ ಬಾಷ, ಶಿವಶಂಕರ್, ಜಿ ಪಂಪಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...