ಬಳ್ಳಾರಿ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಒಬಿಜಿ ವಾರ್ಡ್ ಹತ್ತಿರ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಕೌಲ್ ಬಜಾರ್ ಪೋಲಿಸ್ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕಪ್ಪು ಮತ್ತು ಬಿಳಿ ಕೂದಲು, ಹಾಗೂ ಎದೆಯ ಮೇಲೆ ಹಳೆಗಾಯದ ಗುರುತು ಇರುತ್ತದೆ. ಬೂದು ಬಣ್ಣದ ಚಕ್ಸ್ ಶರ್ಟ್, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಮರಕ್ಕೆ ಕಟ್ಟಿ ಮಹಿಳೆ ಮೇಲೆ ಹಲ್ಲೆ, ತನಿಖೆ ನಡೆಸಿ, ಸೂಕ್ತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿಎಸ್‌ಐ ಮೊ.9480803084, ಪಿಐ ಮೊ.9480803047 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.