ಬಳ್ಳಾರಿ | ಅಂಗವಿಕಲರ ಮಾಸಿಕ ಪಿಂಚಣಿ ಹೆಚ್ಚಳಕ್ಕೆ ಒತ್ತಾಯಿಸಿ ಅ.ನಲ್ಲಿ ಬೆಂಗಳೂರು ಚಲೋಗೆ ನಿರ್ಧಾರ: ಜಿ ಎನ್ ನಾಗರಾಜ್

Date:

ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂಗವಿಕಲರ ಮಾಸಿಕ ಪಿಂಚಣಿಯನ್ನು ಎರಡೂ ಸರ್ಕಾರ ₹10,000‌ಕ್ಕೆ ಹೆಚ್ಚಿಸಬೇಕು ಎಂದು ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಅಧ್ಯಕ್ಷ ಜಿ ಎನ್ ನಾಗರಾಜ್ ಸರ್ಕಾರಗಳನ್ನು ಒತ್ತಾಯಿಸಿದರು.

- Advertisement -

ಬಳ್ಳಾರಿ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಕಳೆದ ಹಲವು ದಶಕಗಳಿಂದ ಕೇಂದ್ರ ಸರ್ಕಾರ ಇಂದಿರಾಗಾಂಧಿ ಡಿಸಬಿಲಿಟಿ ಪೆನ್ಷನ್‌ ಸ್ಕೀಮ್ ಅಡಿಯಲ್ಲಿ ಕೇವಲ 30 ರೂಪಾಯಿಗಳಿಂದ ಆರಂಭವಾದ ಯೋಜನೆಯು ಕೇವಲ 100-200 ರೂಪಾಯಿಗಳಷ್ಟು ಮಾತ್ರ ಹೆಚ್ಚಳ ಮಾಡುತ್ತ ಬರುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ದೈಹಿಕವಾಗಿ ದುರ್ಬಲಗೊಂಡಿರುವ ಅಂಗವಿಕಲ ಹಾಗೂ ವಿಶೇಷವಿಕಲಚೇತನರಿಗೆ ಬರುವ ಇಂದಿನ ಪಿಂಚಣಿ ಅವರ ಆರ್ಥಿಕ ಹೊರೆಯನ್ನು ನೀಗಿಸಲಾರದು. ಆದ್ದರಿಂದ, ಕೇಂದ್ರ ಸರ್ಕಾರ 5000ದಂತೆ ಹಾಗೂ ರಾಜ್ಯ ಸರ್ಕಾರ 5000ದಂತೆ ಒಟ್ಟು 10,000 ರೂಪಾಯಿಗಳಿಗೆ ಪಿಂಚಣಿ ಹೆಚ್ಚಿಸಬೇಕು” ಎಂದು ಸರ್ಕಾರಗಳನ್ನು ಒತ್ತಾಯಿಸಿದರು.

“ನೆರೆಯ ಆಂಧ್ರಪ್ರದೇಶದಲ್ಲಿ 6000 ರೂಪಾಯಿಗಳನ್ನು ನೀಡುತ್ತಿದೆ. ಶೇ.80ರಷ್ಟು ವಿಕಲತೆ ಹೊಂದಿರುವವರಿಗೆ ಹತ್ತು ಸಾವಿರ, ನೂರರಷ್ಟು ವಿಕಲತೆ ಹೊಂದಿರುವವರಿಗೆ 15 ಸಾವಿರ ರೂಪಾಯಿಗಳನ್ನು ನೀಡುತ್ತಿದೆ. ಅದೇ ರೀತಿ ರಾಜಸ್ಥಾನದಲ್ಲಿ ಬೆಲೆ ಏರಿಕೆಯ ಸೂಚ್ಯಂಕಕ್ಕೆ ಅನುಗುಣವಾಗಿ ತುಟ್ಟಿ ಭತ್ಯೆಯ ರೂಪದಲ್ಲಿ ವಾರ್ಷಿಕ ಶೇ.15ರಷ್ಟು ಪಿಂಚಣಿಯನ್ನು ಹೆಚ್ಚಳ ಮಾಡಲು ಶಾಸನ ಸಭೆಯಲ್ಲಿ ಅಂಗೀಕರಿಸಲಾಗಿದೆ. ಅದೇ ಪ್ರಕಾರವಾಗಿ ನಮ್ಮ ರಾಜ್ಯದಲ್ಲೂ 10 ಸಾವಿರ ರೂಪಾಯಿಗಳ ಪಿಂಚಣಿಯನ್ನು ನೀಡಬೇಕೆಂದು ಒತ್ತಾಯಿಸಿ ಅಕ್ಟೋಬರ್‌ನಲ್ಲಿ ರಾಜಭವನ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಅಂಗವಿಕಲರ ರೈತ ಸಂಘ ಕಟ್ಟಲು ನಿರ್ಧಾರ

“ವಿಕಲಚೇತನರು ಕೃಷಿ ಕೆಸಲವನ್ನು ಮಾಡಲು ತೊಂದರೆಯಾಗುತ್ತಿದೆ. ತುಂಡು ಭೂಮಿಯಿರುವ ವಿಕಲಚೇತನರಿಗೆ ವಿಶೇಷವಾಗಿ ವಾತವರಣಗಳನ್ನು ಸೃಷ್ಟಿಸುವ ಸಲುವಾಗಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಇಲಾಖೆಗಳು ವಿಕಲಚೇತನ ಸ್ನೇಹಿಯಾದ ಯಂತ್ರೋಪಕರಣಗಳನ್ನು ಅಭಿವೃದ್ಧಿಪಡಿಸಬೇಕು ಅಥವಾ ಅವುಗಳನ್ನು ಹೊಂದಲು ಹೆಚ್ಚಿನ ಧನಸಹಾಯವನ್ನು ಒದಗಿಸಬೇಕು” ಎಂದು ಸರ್ಕಾರವನ್ನು ಅಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಂಗಪ್ಪ ದಾಸರ, ಆರ್‌ ಯಶಸ್ವಿ ಗುರುಸಿದ್ಧಮೂರ್ತಿ ಸತ್ಯಬಾಬು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...