ಬಳ್ಳಾರಿ | ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹ; ಪಂಜಿನ ಮೆರವಣಿಗೆ

Date:

Advertisements

ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದ ಹಳೆ ತರಕಾರಿ ಮಾರುಕಟ್ಟೆಯಿಂದ ಪ್ರಾರಂಭವಾಗಿ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಗಳ ಮೂಲಕ ಶಾಸಕರ ಕಚೇರಿವರೆಗೆ ಪಂಜಿನ ಮೆರವಣಿಗೆ ನಡೆಸಿದರು.

ಭೂಮಿ ವಸತಿ ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಭೂಮಿ, ವಸತಿ ಇಲ್ಲದೆ ಬೀದಿಗಳಲ್ಲಿ ಜೀವನ ಸಾಗುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಶಾಸಕರನ್ನು ಭೇಟಿ ಮಾಡಿದಾಗ, ʼಈ ಬಾರಿ ನಮ್ಮನ್ನು ವಿಧಾನಸಭೆಗೆ ಕಳುಹಿಸಿದರೆ ಭೂಮಿ ವಸತಿ ಹಕ್ಕು ವಂಚಿತರಿಗೆ ಹಕ್ಕುಪತ್ರ ನೀಡಲಾಗುವುದುʼ ಎಂದು ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ರೀತಿಯ ಸಮಸ್ಯೆ ಬಗೆಹರಿಸಿಲ್ಲ. ನಮಗೆ ನ್ಯಾಯ ದೊಕಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಆಗ್ರಹಿಸಿದರು.

Advertisements

“ಕೋಮುವಾದಿ ಪಕ್ಷ ಬಿಜೆಪಿಯಿಂದ ಮನನೊಂದ ಕಾರಣ ಆ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರಲಾಗಿದೆ. ನಮ್ಮ ಸಮಸ್ಯೆಗೆ ನೆರವಾಗಬಹುದೆಂದು ಬೇಡಿಕೆ ಮಂಡಿಸಿದರೆ, ʼಬಜೆಟ್ ಇಲ್ಲ, ಗ್ಯಾರಂಟಿ ಯೋಜನೆಗೆ ದುಡ್ಡು ಹಾಕಬೇಕುʼ ಎಂಬ ನೆಪ ಹೇಳುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಆಚರಣೆ ಅದ್ದೂರಿ: ಸಚಿವ ಡಾ ಎಚ್ ಸಿ ಮಹದೇವಪ್ಪ

“ದಶಕಗಳಿಂದ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ಹಾಗೂ ಅರ್ಜಿ ಸಲ್ಲಿಸಿದ ಫಾರಂ 53, 50, 57 ಭೂಮಿ ಪಂಚನಾಮೆ ಜಿಪಿಎಸ್ ಸರ್ವೇ ಮಾಡಿಸಬೇಕು ಮತ್ತು ಭೂ ಮಂಜೂರಾತಿ ಹೆಸರಲ್ಲಿ ಭ್ರಷ್ಟಾಚಾರ ನಡೆಸುವವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ ದುರುಗೆಶ್, ಭೂಮಿ ವಸತಿ ಮುಖಂಡ ವಸಂತರಾಜ್ ಕಹಳೆ, ನೀಲಪ್ಪ ಪೇಂಟರ್, ಪ್ರಗತಿ, ಶರಣು ಸೇರಿದಂತೆ ಇತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X