ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಕೈಗೊಂಡರು.
ಕಳೆದ ಐಸಿಸ್ ಸಭೆಯಲ್ಲಿ ನವೆಂಬರ್ 10ರವರೆಗೆ ಮಾತ್ರ ಎಚ್‌ಎಲ್‌ಸಿ ಕಾಲುವೆ ನೀರು ಬಿಡುವಂತೆ ನಿರ್ಧಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಡಿಸೆಂಬರ್ ಮೊದಲ ವಾರದವರೆಗೆ ನೀರು ಬಿಡುವಂತೆ ರೈತರು ಆಗ್ರಹಿಸುತ್ತಿದ್ದಾರೆ.