ಬಳ್ಳಾರಿ | ಎರಡನೇ ಬೆಳೆಗೆ ನೀರು ಬಿಡಲು ಒತ್ತಾಯ; ಕಂಪ್ಲಿ ಬಂದ್ ಮಾಡಿ ಪ್ರತಿಭಟನೆ

Date:

ಬಳ್ಳಾರಿ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಎರಡನೇ ಬೆಳೆಗೆ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳು ಕಂಪ್ಲಿ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದವು.

- Advertisement -

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಹಲವು ರೈತ ಸಂಘಟನೆಯೊಂದಿಗೆ ಎರಡನೇ ಬಾರಿ ನೀರು ಬಿಡಲು ಆಗ್ರಹಿಸಿ ಕಂಪ್ಲಿ ಬಂದ್ ಮಾಡಿ ಪ್ರತಿಭಟಿಸಲಾಯಿತು. ಇದಕ್ಕೆ ನಗರದ ಅಂಗಡಿ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬೆಂಬಲ‌ ಸೂಚಿಸಿದರು. ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರೈತ ಸಂಘದ ಮುಖಂಡ ಬಿ.ವಿ.ಗೌಡ ಮಾತನಾಡಿ, “2025ರ ಜೂನ್ 27 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸರಕಾರ ತೀರ್ಮಾನಿಸಿದಂತೆ ಜುಲೈ ತಿಂಗಳ ಕೊನೆಗೆ ಅಥವಾ ಆಗಸ್ಟ್ ಮೊದಲನೇ ವಾರದಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಭಾಗದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳನ್ನು ಒಳಗೊಂಡಂತೆ ಕರ್ನಾಟಕ ಮತ್ತು ಟಿ ಬಿ ಬೋರ್ಡ್‌ ಎಲ್ಲಾ ಅಧಿಕಾರಿಗಳು ಸಮುಖದಲ್ಲಿ ‘ತುಂಗಾಭದ್ರಾ ಜಲಾಶಯದ ಗೇಟ್‌ಗಳ ದುರಸ್ಥಿ ವಿಷಯ, ಬೇಸಿಗೆ ಬೆಳೆಯ ವಿಷಯವನ್ನು ತೀರ್ಮಾನಿಸುತ್ತೇವೆ’ ಎಂದು ಹೇಳಲಾಗಿತ್ತು. ಆದರೆ, ಇಲ್ಲಿವರೆಗೂ ಸಭೆ ಕರೆದಿಲ್ಲ. ಈಗ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಎಲ್ಲಾ ಭಾಗದ ರೈತರು, ಈ ಕೂಡಲೇ ತುಂಗಾಭದ್ರಾ ಕೇಂದ್ರಸ್ಥಾನದಲ್ಲಿ ಸಭೆ ಕರೆದು ಬೇಸಿಗೆ ಬೆಳೆಗೆ ನೀರು ಬಿಡಬೇಕು” ಎಂದು ಅಗ್ರಹಿಸಿದರು.

“ಈ ಬಾರಿಯ ಭತ್ತದ ಬೆಳೆಯಲ್ಲಿ ದುಂಡಾಣು ಮಚ್ಚೆ ರೋಗ (ವೈರಸ್ ಪೀಡಿತ ಎಲೆ ಒಣಗುವ ರೋಗ) ಹೆಚ್ಚಾಗಿದ್ದು, ಇಳುವರಿ ಬಹಳ ಕುಂಠಿತವಾಗಿದೆ ಮತ್ತು ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಎಂಎಸ್‌ಪಿ ಗಿಂತ ಬಹಳ ಕಡಿಮೆ ದರದಲ್ಲಿ ಮಾರಾಟವಾಗುತ್ತಿದೆ. ಇದರಿಂದ ರೈತರಿಗೆ ತುಂಬಲಾರದ ನಷ್ಟ ಉಂಟಾಗುತ್ತಿದೆ. ಈಗ ತುಂಗಭದ್ರಾ ಜಲಾಶದಲ್ಲಿ ಅಂದಾಜು 80 ಟಿಎಂಸಿ ನೀರು ಇದ್ದು, ಎರಡನೇ ಬೆಳೆಗೆ ರೈತರಿಗೆ ನೀರು ಬಿಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಳ್ಳಾರಿ | ಬಿಡಿಸಿಸಿ ಬ್ಯಾಂಕ್‌ನಲ್ಲಿ ಅವ್ಯವಹಾರ ಆರೋಪ; ಪಿಎಸಿ ಸದಸ್ಯರ ಆಕ್ರೋಶ

“ಕೂಡಲೇ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಮುನಿರಾಬಾದ್ ಕೇಂದ್ರ ಕಚೇರಿಯಲ್ಲಿ ಸಭೆ ಕರೆಯಬೇಕು. ಮತ್ತು ಸಭೆಯಲ್ಲಿ ಎಲ್ಲಾ ರೈತ ಮುಖಂಡರಿಗೆ ಮತ್ತು ರೈತರಿಗೆ ಅವಕಾಶ ಕಲ್ಪಿಸಬೇಕು. ಪ್ರಸ್ತುತ ಜಲಾಶಯದಲ್ಲಿರುವ ಅಂದಾಜು 80 ಟಿ.ಎಂ.ಸಿ ನೀರು ಇದ್ದು, ಬೇಸಿಗೆ ಬೆಳೆಗೆ ನೀರು ಒದಗಿಸಬೇಕು. ಫೆಬ್ರವರಿ-2026 ರ ವರೆಗೆ ಜಲಾಶಯದಲ್ಲಿರುವ ನೀರನ್ನು ಎರಡನೇ ಬೆಳೆಗೆ ಸದ್ಬಳಕೆ ಮಾಡಬೇಕು. ನಂತರ ತಜ್ಞರ ಪ್ರಕಾರ ಗೇಟ್‌ಗಳ ದುರಸ್ಥಿ ಕಾರ್ಯ ಬೇಗ ಮುಗಿಸಲು ಪ್ರಯತ್ನಿಸಬೇಕು. ಆಯೋಗದ ವರದಿಯಲ್ಲಿ ಇರುವಂತೆ ಟಿ.ಬಿ ಬೋರ್ಡ್ ಸೆಕ್ರೆಟರಿಯವರು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಈ ಮೂರು ರಾಜ್ಯದಲ್ಲದವರನ್ನು ನೇಮಿಸಬೇಕು” ಎಂದು ರೈತರು ಹಕ್ಕೊತ್ತಾಯ ಮಂಡಿಸಿದರು.

ಈ ವೇಳೆ ಹೇಮಯ್ಯ ಸ್ವಾಮಿ, ಆನಂದ ರೆಡ್ಡಿ, ವಿ. ವೀರೇಶ್, ಕೊಟ್ಟೂರ್ ರಮೇಶ್, ಮುರಾರಿ, ತಿಮ್ಮಪ್ಪ ನಾಯಕ, ಗಂಗಣ್ಣ, ಸುಧೀರ್, ಬಸವರಾಜ್ ಗೌಡ, ಆಳಲ್ಲಿ ವೀರೇಶ್, ಪಂಪಾಪತಿ, ನಾರಾಯಣ ರೆಡ್ಡಿ, ನಾರಾಯಣಪ್ಪ, ವೆಂಕಟರಮಾರಾಜು, ಸುಗಪ್ಪ, ಸದಾಶಿವಪ್ಪ, ಕನಕಗಿರಿ ಬಸವರಾಜ್, ನೂರಾರು ರೈತರು ಹಾಗೂ ಇತರರು.‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...