ಬಳ್ಳಾರಿ | ಒಣ ಮೆಣಸಿನಕಾಯಿ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

Date:

Advertisements

ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಒಣಮೆಣಸಿನಕಾಯಿ ಬೆಳೆಯಲಾಗುತ್ತಿದ್ದು, ವಾರ್ಷಿಕ 2.50 ಲಕ್ಷ ಟನ್ ಉತ್ಪಾದನೆ ಆಗುತ್ತದೆ. ಬಳ್ಳಾರಿ ಜಿಲ್ಲೆಯೊಂದರಲ್ಲೇ 1.96 ಲಕ್ಷ ಟನ್ ಉತ್ಪಾದನೆಯಾಗುತ್ತದೆ. ಸರ್ಕಾರವು ಆಯಾ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕರೂರು ಮಾಧವ ರೆಡ್ಡಿ ಆಗ್ರಹಿಸಿದರು.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, “ಕಳೆದ ವರ್ಷ ಬ್ಯಾಡಗಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹40 ಸಾವಿರದಿಂದ ₹50 ಸಾವಿರದವರೆಗೆ ಮಾರಾಟವಾಗಿತ್ತು. ಈ ವರ್ಷ ದರ ಕನಿಷ್ಠ ₹6 ಸಾವಿರಕ್ಕೆ ಕುಸಿದಿದೆ. ರೈತರ ಸಮಸ್ಯೆಗೆ ಸ್ಪಂದಿಸುವಂತೆ ಆಂಧ್ರಪ್ರದೇಶ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ಕೊರತೆ ಪಾವತಿ ಯೋಜನೆ ಜಾರಿಗೊಳಿಸಲು ಶ್ರಮಿಸಿತ್ತು. ಅದರಂತೆ ಕೇಂದ್ರ ಸರ್ಕಾರವು ರೂ 11,781 ಕನಿಷ್ಠ ಮಧ್ಯಂತರ ಬೆಲೆ ನಿಗದಿಪಡಿಸಿದೆ. ಇದಕ್ಕೆ ಪೂರಕವಾಗುವಂತೆ ಕರ್ನಾಟಕವೂ ಒಣಮೆಣಸಿನಕಾಯಿ ಖರೀದಿ ಕೇಂದ್ರ ಆರಂಭಿಸಿ ರೈತರಿಗೆ ಸಹಾಯ ಮಾಡಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಬಳ್ಳಾರಿ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಸಣ ಕಾರ್ಮಿಕರು, ದೇವದಾಸಿಯರ ಪ್ರತಿಭಟನೆ

Advertisements

“ಕರ್ನಾಟಕಕ್ಕೂ ಪಿಡಿಪಿ ಯೋಜನೆ ವಿಸ್ತರಿಸಬೇಕು. ಕೇಂದ್ರ ಸರ್ಕಾರವು ರಾಜ್ಯದ ಮೆಣಸಿನಕಾಯಿ ದರವನ್ನು ಕ್ವಿಂಟಲ್‌ಗೆ ₹13,500 ನಿಗದಿ ಮಾಡಬೇಕು” ಎಂದು ಅಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X