ಬಳ್ಳಾರಿ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಸಣ ಕಾರ್ಮಿಕರು, ದೇವದಾಸಿಯರ ಪ್ರತಿಭಟನೆ

Date:

ರಾಜ್ಯದ ದೇವದಾಸಿ ಮಹಿಳೆಯರು ಹಾಗೂ ಮಸಣ ಕಾಯುವ ಕೂಲಿ ಕಾರ್ಮಿಕರ‌ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

- Advertisement -

“ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ/ಸಹಾಯಧನವನ್ನು 2025ರ ಈ ಬಜೆಟ್‌ನಲ್ಲಿ ಕನಿಷ್ಠ 3000 ರೂಗಳಿಗೆ ಹೆಚ್ಚಿಸಬೇಕು. ಸ್ವಯಂ ಉದ್ಯೋಗದಡಿ ನೀಡಲಾಗುವ ಸಹಾಯಧನವನ್ನು ಕನಿಷ್ಠ 1.50 ಲಕ್ಷ ರೂಗಳಿಗೆ ಹೆಚ್ಚಿಸಲು ಅಗತ್ಯ ಕ್ರಮ ವಹಿಸಬೇಕು. ಉಚಿತ ನಿವೇಶನದ ಜೊತೆ ರಾಜೀವ ಗಾಂಧಿ ವಸತಿ ಯೋಜನೆಯಡಿ ಅಳವಡಿಸಿ ಸುಸಜ್ಜಿತ ಮನೆಯನ್ನು ಕಟ್ಟಿಸಿಕೊಡಲು ಕ್ರಮ ವಹಿಸಬೇಕು. ಇದರಲ್ಲೂ ರಾಜೀವ್ ಗಾಂಧಿ ವಸತಿ ನಿಗಮವು ಈ ದುರ್ಬಲ ಮಹಿಳೆಯರಿಂದ ವಂತಿಗೆಯನ್ನು ತೆಗದುಕೊಳ್ಳುತ್ತಿದೆ. ವಂತಿಗೆ ತೆಗೆದುಕೊಳ್ಳುತ್ತಿರುವವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಬ್ಯಾಂಕಗಳು ಸಾಲ ಸೌಲಭ್ಯ ಒದಗಿಸಲು ನಿರಾಕರಿಸುತ್ತಿವೆ. ಇಂತ ಕೊರತೆಯನ್ನು ನಿವಾರಿಸಲು ಸರಕಾರವೇ ಈ ಮಹಿಳೆಯರ ಪರವಾಗಿ ವಂತಿಗೆ ನೀಡಲು ಅಗತ್ಯ ಕ್ರಮ ವಹಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2025 03 06 at 8.11.27 PM

ರಾಜ್ಯದ ಮಸಣ ಕಾರ್ಮಿಕರನ್ನು ಗುರುತಿಸಿ ಅವರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರವರ್ಗದಡಿ ಶಿಕ್ಷಣದಲ್ಲಿ ಮೀಸಲಾತಿ ಹಾಗೂ ಅವರಿಗೆ ಇತರೆ ಸರ್ಕಾರಿ ಸೌಲಭ್ಯಗಳ ಒದಗಿಸಲು ಕ್ರಮವಹಿಸಿರುವುದು ಸ್ವಾಗತಾರ್ಹ ಹಾಗೂ ಅವರ ಗಣತಿ ಮಾಡಿ ಅವರಿಗೆ ಪೆನ್ನನ್ ಜಾರಿಗೊಳಿಸಬೇಕು. ತಮಗೆ ಸೌಲಭ್ಯಗಳನ್ನು ಒದಗಿಸಬೇಕಾದಲ್ಲಿ ನಮ್ಮ ಕುಟುಂಬದಿಂದ ಸರ್ಕಾರದ ವಿವಿಧ ಇಲಾಖೆಗಳು ನಮ್ಮಿಂದ ‘ನಾವು ಮಸಣ ಕಾರ್ಮಿಕರು’ ಎಂಬುದಕ್ಕೆ ಪ್ರಮಾಣಪತ್ರ ಕೇಳುತ್ತಿವೆ. ಆದ್ದರಿಂದ, ಗಣತಿಗೆ ಕ್ರಮ ವಹಿಸಬೇಕೆಂದು ಒತ್ತಾಯ ಮಾಡಿದರು. ಕನಿಷ್ಟ 45 ವಯೋಮಾನದವರಿಂದ ಮಾಸಿಕ 3000 ಪಿಂಚಣಿಯನ್ನು ಘೋಷಿಸಲು ಮತ್ತು ನಮ್ಮ ಕುಣಿ ತೆಗೆಯುವ ಹಾಗೂ ಶವ ಹೂಳುವ ಕೆಲಸವನ್ನು ಉದ್ಯೋಗ ಖಾತ್ರಿಯಡಿ ತಂದು ಅದನ್ನು ಉದ್ಯೋಗ ಖಾತ್ರಿ ಕೆಲಸವೆಂದು ಪರಿಗಣಿಸಿ, ಸುರಕ್ಷಿತ ಕ್ರಮಗಳನ್ನು ಮತ್ತು ಪರಿಕರಗಳನ್ನು ಒದಗಿಸಲು ಕ್ರಮವಹಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದುರ್ಗಮ್ಮ,‌ ಯಂಕಮ್ಮ, ಈರಮ್ಮ, ನಾಗವ್ವ‌, ನಾಗರಾಜ್, ಸ್ವಾಮಿ‌ ವಿಕಾಸ, ಹುಲಗವ್ವ,‌ ಯಮನೂರಪ್ಪ, ದುರ್ಗಪ್ಪ ಹಾಗೂ ಹಲವರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...