ಬಳ್ಳಾರಿ | ಒಣಮೆಣಸಿನಕಾಯಿ ಮಾರಾಟ: ರೈತರು ನೋಂದಾಯಿಸಿಕೊಳ್ಳಲು ಆಹ್ವಾನ

Date:

Advertisements

ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಒಣಮೆಣಸಿನಕಾಯಿ ಮಾರಾಟ ಮಾಡಲು ಜಿಲ್ಲೆಯ ರೈತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

2024-25ನೇ ಸಾಲಿನಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಒಣಮೆಣಸಿನಕಾಯಿ ಮಾರುಕಟ್ಟೆ ಮಧ್ಯಪ್ರವೇಶ ದರ ₹10,589.20 ಪ್ರತಿ ಕ್ವಿಂಟಲ್‌‌‌ಗೆ ನಿಗದಿಪಡಿಸಿದೆ. ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಾರ್ಯಾಲಯವು ನೋಂದಣಿ ಸ್ಥಳವಾಗಿದೆ. ರೈತರು ಒಣಮೆಣಸಿನಕಾಯಿ ಉತ್ಪನ್ನವನ್ನು ಕಡ್ಡಾಯವಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇ-ಟೆಂಡರ್ ಮೂಲಕ ಮಾರಾಟ ಮಾಡಿದಾಗ ಮಾತ್ರ ಈ ಯೋಜನೆ ಅನ್ವಯವಾಗಲಿದೆ ಎಂದು ತಿಳಿಸಿದರು.

ನೋಂದಣಿ ಮಾಡಿಕೊಳ್ಳಲು ಪ್ರಕಟಗೊಂಡ ದಿನದಿಂದ 15 ದಿನಗಳವರೆಗೆ ಕಾಲಾವಕಾಶ ಇರುತ್ತದೆ. ಇ-ಆಡಳಿತ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೀಡಿರುವ ವಿವರಗಳನ್ನು ಭೂಮಿ, ಯುಐಡಿಎಐ ಹಾಗೂ ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ಹೊಂದಾಣಿಕೆ ಮಾಡಿ, ಅರ್ಹ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಯುಎಂಪಿ ತಂತ್ರಾಂಶದ ಇ-ಟೆಂಡರ್ ಮೂಲಕ ಮಾರಾಟ ಪ್ರಕ್ರಿಯೆ ಕೈಗೊಳ್ಳಲಾಗುವುದು. ಈ ಯೋಜನೆಯಡಿ ಪ್ರತಿ ಎಕರೆಗೆ 15 ಕ್ವಿಂಟಲ್ ಇಳುವರಿಯಂತೆ ಪ್ರತಿ ರೈತರಿಂದ ಗರಿಷ್ಠ 30 ಕ್ವಿಂಟಲ್‌ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತ ನೀಡಲಾಗುವುದು.

Advertisements

ಬಳ್ಳಾರಿ ಜಿಲ್ಲೆಯಲ್ಲಿ ಯಾವ ಮಾರುಕಟ್ಟೆಯಲ್ಲಿಯೂ ಒಣಮೆಣಸಿನಕಾಯಿ ಹುಟ್ಟುವಳಿಗೆ ಇ-ಟೆಂಡರ್ ಪದ್ಧತಿ ಜಾರಿಯಲ್ಲಿಲ್ಲದಿರುವುದರಿಂದ ಜಿಲ್ಲೆಯ ರೈತರು ಎನ್‌ಇಎಂಎಲ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ರಾಜ್ಯದ ಯಾವುದೇ ಇ-ಟೆಂಡರ್ ಪದ್ಧತಿ ಜಾರಿಯಲ್ಲಿರುವ ವಿವಿಧ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಒಣಮೆಣಸಿನಕಾಯಿ ಮಾರಾಟ ಮಾಡುವ ಸಂದರ್ಭದಲ್ಲಿ ಆನ್ ಲೈನ್‌ನಲ್ಲಿ ನೋಂದಣಿ ಮಾಡಿದ ರಶೀದಿ ಪಡೆದಿದ್ದಲ್ಲಿ ಈ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹಾಗಾಗಿ ರೈತರು ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್, ಪಹಣಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡು ಒಣಮೆಣಸಿನಕಾಯಿ ಮಾರಾಟ ಮಾಡಿ ಸರ್ಕಾರದ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ದಲಿತ ಸಂಘರ್ಷ ಸಮಿತಿ ಧರಣಿ

ಹೆಚ್ಚಿನ ಮಾಹಿತಿಗಾಗಿ ದೂ.08392-250435ಕ್ಕೆ ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X