ಬಳ್ಳಾರಿ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ; ಜನಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ

Date:

Advertisements

ʼಶಿಕ್ಷಣವೇ ಶಕ್ತಿ-ಬಾಲ ದುಡಿಮೆಗೆ ಮುಕ್ತಿʼ ಎಂಬ ಧ್ಯೇಯದೊಂದಿಗೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಬಾಲಕಾರ್ಮಿಕ ಪದ್ದತಿ ನಿಷೇಧ ಮತ್ತು ನಿಯಂತ್ರಣ’ ಕಾಯ್ದೆ 1986ರ ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಜಿಲ್ಲೆಯಲ್ಲಿ 7 ದಿನಗಳ ಕಾಲ ಸಂಚರಿಸುವ ಜನಜಾಗೃತಿ ಸಂಚಾರಿ ವಾಹನಕ್ಕೆ ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನಿಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್ ಹೊಸಮನೆ ಹಾಗೂ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆಯ ಸಂಯುಕ್ತಾಶ್ರಯಲ್ಲಿ ಜಿಲ್ಲಾ ಬಾಲಕಾರ್ಮಿಕ ಸೊಸೈಟಿ ಕಚೇರಿಯಿಂದ 2024-25ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಡಿ ಜಿಲ್ಲೆಯ 05 ತಾಲೂಕಿನ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಧ್ವನಿವರ್ಧಕ ಹೊಂದಿದ ಆಟೋ ಪ್ರಚಾರ ವಾಹನವು ಮಾರ್ಚ್‌ 21ರಿಂದ 27ರವರೆಗೆ ಸಂಚರಿಸಲಿದೆ.

Advertisements
ಬಳ್ಳಾರಿಯಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಚಾಲನೆ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್ ಹೊಸಮನೆ ಮಾತನಾಡಿ, “ಮಕ್ಕಳನ್ನು ದುಡಿಮೆಗೆ ಕಳುಹಿಸಬಾರದು. ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳಿಗೆ ಬಾಲ್ಯ, ಆರೋಗ್ಯ ಮತ್ತು ಶಿಕ್ಷಣ ನೀಡಬೇಕು” ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್ ಮಾತನಾಡಿ, “ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಿಂದ ಸಮಾಜದ ಅಭಿವೃದ್ಧಿಗೆ ನಾಂದಿಯಾಗುತ್ತದೆ. ಬಾಲ ದುಡಿಮೆಗೆ ಮುಕ್ತಿ ನೀಡಲು, ಶಿಕ್ಷಣವೇ ಶಕ್ತಿಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾ. 23; ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್, ಸಂವಾದ ಸಂಸ್ಥೆಯಿಂದ ಸುಗ್ಗಿ ಸಂಭ್ರಮ

ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಎ ಮೌನೇಶ್ ಮಾತನಾಡಿ, “14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಮತ್ತು 14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಹಾಗೂ 2 ವರ್ಷದವರೆಗೆ ಕಾರಾಗೃಹ ಶಿಕ್ಷೆ ಅಥವಾ ₹20,000ದಿಂದ ₹50,000ದವರೆಗೆ ದಂಡ, ಇಲ್ಲವೇ ಎರಡನ್ನೂ ವಿಧಿಸಬಹುದಾಗಿದೆ” ಎಂದು ಕಾನೂನು ಮಾಹಿತಿ ಹೇಳಿದರು.

ಬಾಲ ಕಾರ್ಮಿಕ ಮತ್ತು ಕಿಶೋರಕಾರ್ಮಿಕರ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಕರಪತ್ರ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ತಾಲೂಕು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X