ಬಳ್ಳಾರಿ | ಜೀತ ಪದ್ಧತಿ ನಿರ್ಮೂನೆಗೆ ಪ್ರತಿಯೊಬ್ಬರೂ ಪಣತೊಡಬೇಕು: ನ್ಯಾ. ಕೆ ಜಿ ಶಾಂತಿ ಕರೆ

Date:

ಸಮಾಜದಲ್ಲಿ ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಶಿಕ್ಷಾರ್ಹ ಅಪರಾಧವಾಗಿದ್ದು, ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ ಜಿ ಶಾಂತಿ ಕರೆ ನೀಡಿದರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಜೀತ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಅಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, “ಆರ್ಥಿಕ ಸ್ಥಿತಿ ಕಡಿಮೆಯಾದಾಗ ಜೀತ ಪದ್ಧತಿಯು ಉಲ್ಬಣಗೊಳ್ಳುತ್ತದೆ. ಪೂರ್ವಜರ ಕಾಲದಲ್ಲಿ ಜೀತ ಪದ್ದತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯದ ನಂತರ ಗಣನೀಯವಾಗಿ ಕಡಿಮೆಯಾಗಿದೆ‌. 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಂವಿಧಾನವು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕು ನೀಡಿದೆ. ಸರ್ಕಾರವು ಶಿಕ್ಷಣ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳ ಸದ್ಬಳಕೆಯಾಗಬೇಕು. ಜೀತ ಪದ್ಧತಿ ನಿರ್ಮೂಲನೆಗಾಗಿಯೇ ವಿವಿಧ ಇಲಾಖೆಗಳ ಜೊತೆಗೂಡಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಿದ್ಯಾರ್ಥಿಗಳು ಸಹ ಜೀತ ಪದ್ಧತಿಯ ನಿಷೇಧದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಬೇಕು. ಮನೆಯ ಅಕ್ಕ-ಪಕ್ಕದ ನೆರೆಹೊರೆಯವರೊಂದಿಗೂ ಮಾಹಿತಿ ಹಂಚಿಕೊಳ್ಳಬೇಕು. ಜೀತ ಪದ್ಧತಿ ಇರುವುದು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು” ಎಂದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, “14 ವರ್ಷದೊಳಗಿನ ಎಲ್ಲಾ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಬೇಕು. ಜಿಲ್ಲೆಯಲ್ಲಿ ಜೀತ ಪದ್ಧತಿ ಇಲ್ಲ. ಅನಿರ್ದಿಷ್ಟ ವಲಯ ಹಾಗೂ ಇತರೆ ಕೈಗಾರಿಕಾ ವಲಯಗಳಲ್ಲಿ ಜೀತ ಪದ್ಧತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಬಗರ್ ಹುಕುಂ ಬಡ ಸಾಗುವಳಿದಾರರ ತಿರಸ್ಕೃತ ಅರ್ಜಿಗಳ ಪುನರ್‌ ಪರಿಶೀಲಿಸಲು ಮನವಿ

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ್‌ ನಿಕಟಪೂರ್ವ ಸದಸ್ಯ ಎಚ್‌ ಸಿ ರಾಘವೇಂದ್ರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ ಮೌನೇಶ್, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು, ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...