ಬಳ್ಳಾರಿ | ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಅವಧಿ ವಿಸ್ತರಿಸಲು ರೈತರ ಆಗ್ರಹ

Date:

ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದ ಜೋಳವನ್ನು ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲು ನಿಗದಿಪಡಿಸಿದ ಅವಧಿಯ ಮಿತಿಯನ್ನು ವಿಸ್ತರಿಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಳ್ಳಾರಿ ಜಿಲ್ಲಾ ಘಟಕದ ರೈತರು ಆಗ್ರಹಿಸಿದರು.

- Advertisement -

ಬಳ್ಳಾರಿ ಜಿಲ್ಲಾಡಳಿತದ ಕಚೇರಿ ಮುಂದೆ‌ ನೂರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಜ್ಯ ಸರ್ಕಾರವು ರೈತರ ಕಣ್ಣೊರೆಸಲು ಹಿಂಗಾರು ಅವಧಿಯಲ್ಲಿನ ಜೋಳ ಖರೀದಿಗೆ ನೊಂದಣೆ ಕೇಂದ್ರಗಳನ್ನು ತೆರೆದಿದೆ. ಬಳ್ಳಾರಿ ಜಿಲ್ಲೆಗೆ ಕೇವಲ 40 ಸಾವಿರ ಕ್ವಿಂಟಲ್ ನಿಗದಿಪಡಿಸಿದ್ದರಿಂದ ಜಿಲ್ಲೆಯಲ್ಲಿ 54,740 ಎಕರೆ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದ್ದು, ಎಕರೆಗೆ 20 ಕ್ವಿಂಟಲ್‌ನಂತೆ ಗರಿಷ್ಠ 150 ಕ್ವಿಂಟಲ್ ನಿಗದಿಪಡಿಸಲಾಗಿದೆ. ಈ ಎರಡು ಮಾನದಂಡಗಳೂ ರೈತರನ್ನು ಆತಂಕಕ್ಕೀಡು ಮಾಡಿದೆ” ಎಂದು‌ ರೈತರು ಕಳವಳ ವ್ಯಕ್ತಪಡಿಸಿದರು.

ಹಿಂಗಾರಿನಲ್ಲಿ ಕಟಾವು ಮಾಡಿದ ಜೋಳವನ್ನು ಮಾರಾಟ ಮಾಡಲು ರಾಜ್ಯ ಸರ್ಕಾರ ಘೋಷಿಸುವ ಬೆಂಬಲ ಬೆಲೆಗಾಗಿ ರೈತರು ಕಾದು ಹೈರಾಣಾಗಿದ್ದಾರೆ. 4 ತಿಂಗಳ ಹಿಂದೆ ಮಾರಾಟಕ್ಕೆ ಸಿದ್ಧಪಡಿಸಿದ ಜೋಳಕ್ಕೆ ಹುಳಗಳು ಬೀಳುತ್ತಿರುವುದು ಮತ್ತಷ್ಟು ಆತಂಕಕ್ಕೀಡು ಮಾಡಿದೆ. ಸರಿಯಾದ ಸಮಯಕ್ಕೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿ ಖರೀದಿ ಕೇಂದ್ರಗಳನ್ನು ತೆರೆಯದೆ ಇರುವುದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ” ಎಂದರು.

ಇದನ್ನೂ ಓದಿ: ಬಳ್ಳಾರಿ | ನೋಟಿಸ್ ನೀಡದೆ ಮನೆ ತೆರವು; ಪ್ರತಿಭಟನೆ

ಜೋಳ ಹುಳು ಬಿದ್ದು ಕಪ್ಪು ಬಣ್ಣಕ್ಕೆ ತಿರುಗುತ್ತಿವೆ ಅಂತಹ ಆತಂಕದಲ್ಲಿರುವ ರೈತರಿಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಹೆಚ್ಚುವರಿಯಾಗಿ ಖರೀದಿ ಮಾಡುವ ಪ್ರಮಾಣವನ್ನು ಹಾಗೂ ಖರೀದಿ ಸಮಯವನ್ನು ಹೆಚ್ಚು ಮಾಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...