ಬಳ್ಳಾರಿ | ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ: ಎಸ್‌ಕೆಎಂನಿಂದ ಪ್ರತಿಭಟನೆ

Date:

ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ  ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿ ದಹನ ಮಾಡಲಾಯಿತು.

ಈ ಸಂದರ್ಭದಲ್ಲಿ ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್, ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ , ಕರ್ನಾಟಕ ಜನಶಕ್ತಿಯ  ವಸಂತ್ ಕಾಳೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ 1942 ರ ಸಮಯದಲ್ಲಿ ನಡೆದ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಐತಿಹಾಸಿಕ ಹೋರಾಟ ನಡೆದ ದಿನ ಇಂದು. ಈ ಹಿನ್ನೆಲೆಯಲ್ಲಿ ದೇಶದ  ದುಡಿಯುವ ಜನರಿಗೆ ಸೇರಬೇಕಾದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂಬ ದೇಶವ್ಯಾಪಿ ಬೃಹತ್ ಹೋರಾಟ ನಡೆಯುತ್ತಿದೆ. ಇಂದು ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ಈ ಬಂಡವಾಳಶಾಹಿಗಳ ಪರವಾಗಿ ನೀತಿಗಳನ್ನು ಜಾರಿಗೆ ತಂದು, ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಇಂದು ಕೃಷಿಯ – ಕಾರ್ಪೋರೇಟಿಕರಣ ನಿಲ್ಲಿಸಬೇಕು ರೈತ ವಿರೋಧಿ – ವಿದ್ಯುತ್ ಖಾಸಗೀಕರಣ ಮಸೂದೆ ಹಿಂಪಡೆಯಬೇಕು, ಭಾರತದ ಕೃಷಿ ಉತ್ಪಾದನೆ- ಮಾರುಕಟ್ಟೆ-ಸಂಗ್ರಹಣೆ ಮತ್ತು ವಿತರಣೆ ರೈತರು ಮತ್ತು ಸರಕಾರದ ಅಧೀನದಲ್ಲಿಯೇ ಇರುವಂತೆ ಜೋಪಾನ ಮಾಡಬೇಕು, ಕೃಷಿಭೂಮಿ ರೈತರಲ್ಲೇ ಉಳಿಯುವಂತೆ ಸಂರಕ್ಷಿಸಬೇಕು, ಕೈಗಾರಿಕೆ- ರಾಷ್ಟ್ರೀಯ ಹೆದ್ದಾರಿ- ರಾಜ್ಯ ಹೆದ್ದಾರಿ ಹೆಸರಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸುವುದನ್ನು ನಿಲ್ಲಿಸಿ, ಕೃಷಿ ಉತ್ಪಾದನೆಯನ್ನು ವಿಶ್ವ ವಾಣಿಜ್ಯ ಒಪ್ಪಂದದಿಂದ ಹೊರಗಿಡಿ, ಕೃಷಿ ಉತ್ಪನ್ನಗಳಿಗೆ ಡಾ. ಸ್ವಾಮಿನಾಥನ್ ನೇತೃತ್ವದ ಸಮಿತಿಯ ಶಿಪಾರಸ್ಸಿನಂತೆ ಉತ್ಪಾದನಾ ವೆಚ್ಚ 50% ಬೆಂಬಲ ಬೆಲೆಯನ್ನು ಕಾನೂನಾತ್ಮಕ ಗೊಳಿಸಿ, ಕೃಷಿ ಒಳಸುರಿಗಳ ಮೇಲಿನ ಜಿಎಸ್ಟಿ ಹಿಂಪಡೆಯಿರಿ, ಕೃಷಿಗೆ ಅಂತರಿಕ ಸಹಾಯಧನವನ್ನು ಹೆಚ್ಚು ನೀಡಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೃಷಿ ಉತ್ಪನ್ನಗಳ ಸಂರಕ್ಷಣೆಗೆ ಕೋಲ್ಡ್ ಸ್ಟೋರೇಜ್ ಗಳನ್ನು ಸಹಕಾರಿ ಸಂಘಗಳ ಮೂಲಕ ನಿರ್ಮಿಸಲು ಸಹಾಯಧನ ನೀಡಬೇಕು, ಅಂತಾರಾಜ್ಯ ನೀರಾವರಿ ಸಮಸ್ಯೆಗಳನ್ನು ಕಾಲಮಿತಿಯೊಳಗಡೆ ಬಗೆಹರಿಸಬೇಕು, ಅರಣ್ಯ ಸಂಪತ್ತನ್ನು ರಕ್ಷಿಸಲು ಪಶ್ಚಿಮಘಟ್ಟದ ರಕ್ಷಣೆಗಾಗಿ ಮಾಧವ ಗಾಡ್ಗೀಳ್ ವರದಿಯನ್ನು ಅನುಷ್ಠಾನ ಗೊಳಿಸಬೇಕು, ಬರ ಹಾಗೂ ಅತಿವೃಷ್ಟಿಯಿಂದ ಕೃಷಿ ಕ್ಷೇತ್ರಕ್ಕಾದ ನಾಶ ನಷ್ಟಕ್ಜೆ ವೈಜ್ಞಾನಿಕ ಪರಿಹಾರ ನೀಡಬೇಕು, ಕೇರಳದ ವಯನಾಡು ಸೇರಿದಂತೆ ಈ ಬಾರಿಯ ಮೇಘಸ್ಪೋಟವನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಪುನರ್ವಸತಿ ಕಲ್ಪಿಸಬೇಕು,  ಸರಕಾರಗಳ ಕೃಷಿ ವಿರೋಧಿ ನೀತಿಯಿಂದಾಗಿ ಸಾಲಗಾರರಾದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಫಸಲ್ ಭೀಮಾ ಯೋಜನೆಯಿಂದಾಗಿ ರೈತರಿಗಾದ ಮೋಸ ಹಾಗೂ ಖಾಸಗಿ  ವಿಮಾ ಕಂಪನಿಗಳ ಹಗಲು ದರೋಡೆ ನಿಲ್ಲಿಸಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳನ್ನು ಸರ್ಕಾರ  ಈಡೇರಿಸಬೇಕು, ಇಲ್ಲದಿದ್ದರೆ ಬೃಹತ್ ಹೋರಾಟಗಳಿಗೆ ರೈತ ಕೃಷಿ ಕಾರ್ಮಿಕರು ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ  ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ,  ರಾಜ್ಯ ರೈತ ಸಂಘದ  ದ್ಯಾವಣ್ಣ ಜನಶಕ್ತಿಯ ಜಿಲ್ಲಾ ಸದಸ್ಯ ಅಪ್ಪಾಜಿ, ಹೊನ್ನೂರಪ, ಸೇರಿದಂತೆ ಇತರರು ಇದ್ದರು

1000014001
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...