ಬಳ್ಳಾರಿ | ರಸ್ತೆಯಲ್ಲಿ ತಲೆಬುರಡೆ, ಎಲುಬುಗಳನ್ನಿಟ್ಟು ಮೌಢ್ಯಾಚರಣೆ; ಸಾರ್ವಜನಿಕರಲ್ಲಿ‌ ಆತಂಕ

Date:

Advertisements

ಬಳ್ಳಾರಿ ನಗರದ ಮಾರ್ಕಂಡೇಯ ಕಾಲೋನಿಯ ಅಂಗನವಾಡಿ ಕೇಂದ್ರದ ಸಮೀಪವಿರುವ ರಸ್ತೆಯಲ್ಲಿ ಕಿಡಿಗೇಡಿಗಳು ತಲೆಬುರಡೆ, ಎಲುಬು, ತೆಂಗಿನ ಕಾಯಿ, ಹೂವು ಸೇರಿದಂತೆ ಇತರೆ ಪರಿಕರಗಳನ್ನು ಇಟ್ಟಿದ್ದು ಸಾರ್ವಜನಿಕರಲ್ಲಿ‌ ಆತಂಕ ಸೃಷ್ಟಿಯಾಗಿದೆ.

ಕ್ಷುದ್ರಪೂಜೆಯನ್ನೋ, ಮಾಟ ಮಂತ್ರವನ್ನೋ ಮಾಡಿರುವಂತಹ ಸನ್ನಿವೇಶ ಸೃಷ್ಟಿ ಮಾಡಲಾಗಿದ್ದು, ಇದು ಜನರನ್ನು ಭಯಪಡಿಸಲು ಮಾಡಿರುವ ಕುಚೇಷ್ಟೆ ಎಂದು ಕೆಲ ಮಂದಿ ಅಭಿಪ್ರಾಯಪಟ್ಟರೆ, ಅಮವಾಸ್ಯೆಯಿ ಕಾರಣ ಮಾಟ ಮಂತ್ರ ಮಾಡಿಸಿ ತಮ್ಮ ಹಿತಾಸಕ್ತಿ ಈಡೇರಿಕೆಗಾಗಿ ಆಗಾಗ ಇಂತಹ ಘಟನೆಗಳು ನಡೆಯುತ್ತಿರುತ್ತವೆಂದು ಮತ್ತೆ ಕೆಲವರು ಆತಂಕ ವ್ಯಕ್ತಪಡಿಸಿದರು.

ಪಕ್ಕದಲ್ಲೇ ನೀರಿನ ಟ್ಯಾಂಕ್ ಇದ್ದು, ಜನ ಅದರಲ್ಲಿ ನೀರು ತೆಗೆದುಕೊಂಡು ಹೋಗಲು ಸದ್ಯ ಹಿಂಜರಿಯುತ್ತಿದ್ದು, ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಪೋಷಕರು ಭಯಪಡುತ್ತಿದ್ದಾರೆ.

Advertisements

ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಬಂದ ಬ್ರೂಸ್‌ಪೇಟೆ ಪೊಲೀಸರು ಪೌರಕಾರ್ಮಿಕರೊಬ್ಬರನ್ನು ಕರೆಸಿ ತಲೆಬುರುಡೆ, ಎಲುಬುಗಳನ್ನು ಚೀಲದಲ್ಲಿ ತುಂಬಿಸಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಟೈಲರ್ ಕಲ್ಯಾಣ ಮಂಡಳಿ ರಚಿಸುವಂತೆ ದರ್ಜಿಗಳ ಆಗ್ರಹ

ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮಿ ಮಾಧ್ಯಮದ ಜತೆಗೆ ಮಾತನಾಡಿ‌, “ದೇಶ ವೈಜ್ಞಾನಿಕವಾಗಿ ಅಭಿವೃದ್ಧಿಯಾಗಿದ್ದರೂ ಇಂತಹ ಮೂಢನಂಬಿಕೆಗಳಿಂದ ಹೊರ ಬಂದಿಲ್ಲ. ಇಲ್ಲಿ ಪದೇಪದೆ ಇಂತಹ ಮೌಡ್ಯ ಘಟನೆಗಳು ನಡೆಯುತ್ತಲೇ ಇರುತ್ತವೆ. ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. ಪೋಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X