ಬಳ್ಳಾರಿ | ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಾರ್ವತ್ರಿಕ ಮುಷ್ಕರ; ಆಶಾ ಕಾರ್ಯಕರ್ತೆಯರ ಸಂಘ ಬೆಂಬಲ

Date:

ದೇಶದ ಅಸಂಘಟಿತ ಕಾರ್ಮಿಕರು ಹಾಗೂ ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ
ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಮತ್ತು ಮುಷ್ಕರದಲ್ಲಿ ಭಾಗವಹಿಸುತ್ತದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷೆ ಎ.ಶಾಂತ ತಿಳಿಸಿದರು.

- Advertisement -

ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, “ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಗೌರವಧನ ಪ್ರೋತ್ಸಾಹಧನಗಳನ್ನು ಹೆಚ್ಚಿಸಬೇಕು. ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.10,000 ಪಾವತಿಯಾಗುವಂತೆ ಶೀಘ್ರವಾಗಿ ಆದೇಶ ಮಾಡಬೇಕು ಹಾಗೂ ರಾಜ್ಯದಲ್ಲಿ ಕಳೆದ ಅನಿರ್ದಿಷ್ಟ ಆಶಾ ಕಾರ್ಯಕರ್ತರ ಹೋರಾಟದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ ಮಾಸಿಕ ರೂ.10,000 ನೀಡುವ ಆದೇಶವಾಗಬೇಕು. ಕೇಂದ್ರದಲ್ಲಿ ಇತ್ತೀಚಿನ ಪಾರ್ಲಿಮೆಂಟ್ ಅಧಿವೇಶನದ ಸಮಯದಲ್ಲಿ ಮಾನ್ಯ ಕೇಂದ್ರ ಆರೋಗ್ಯ ಮಂತ್ರಿಗಳು ಆಶಾ ಕಾರ್ಯಕರ್ತೆಯರಿಗೆ
ನೀಡಿದ್ದ ಪ್ರೋತ್ಸಾಹಧನ ಹೆಚ್ಚಳ ಭರವಸೆಯನ್ನು ಕೂಡಲೇ ಕಾರ್ಯಗತಗೊಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಆಶಾ, ಆಂಗನವಾಡಿ, ಬಿಸಿಯೂಟ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಿ, ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ರೂ. 36,000 ನಿಗದಿ ಮಾಡಬೇಕು ಎಂಬ ಬೇಡಿಕೆಯು ಸೇರಿದಂತೆ ಕೆಲಸದ ಅವಧಿಯನ್ನು ಪ್ರಸ್ತುತದಲ್ಲಿರುವ ದಿನಕ್ಕೆ 8 ಗಂಟೆ ಮತ್ತು ವಾರಕ್ಕೆ 48 ಗಂಟೆ ಮಿತಿಯನ್ನು ಖಾತ್ರಿಗೊಳಿಸಬೇಕು. ಮಹಿಳೆಯರಿಗೆ ರಾತ್ರಿ ಪಾಳಿ ಅವಕಾಶ ನೀಡುವ ಆದೇಶವನ್ನು ಹಿಂಪಡೆಯಬೇಕು. ಕಾರ್ಮಿಕ ವಿರೋಧಿ ಬಂಡವಾಳಶಾಹಿ ಪರ ಇರುವ 4 ಲೇಬರ್ ಕೋಡ್‌ಗಳನ್ನು ರದ್ದುಗೊಳಿಸಬೇಕು. ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ ಸಾಮಾಜಿಕ ಭದ್ರತೆ ಸವಲತ್ತುಗಳನ್ನು ಖಾತ್ರಿಪಡಿಸಿ, ಎಲ್ಲಾ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಸಾಂವಿಧಾನಿಕ ಹಕ್ಕನ್ನಾಗಿ ಮಾಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಳ್ಳಾರಿ | ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಅವಧಿ ವಿಸ್ತರಿಸಲು ರೈತರ ಆಗ್ರಹ

ಈ ವೇಳೆ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷೆ ಗೀತಾ, ನಗರಧ್ಯಕ್ಷೆ ರೇಷ್ಮಾ, ಉಮಾದೇವಿ, ಭಾಗ್ಯಮ್ಮ, ಶಶಿಕಲಾ, ಶಾಂತಕುಮಾರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...