ಬಳ್ಳಾರಿ ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿಸಿರುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಶಾಲೆಯ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.
ಪ್ರವೇಶ ಪತ್ರಗಳನ್ನು WWW.schooleducation.kar.nic.in ಅಥವಾ WWW.vidyavahini.karnataka.gov.in ಅಂತರ್ಜಾಲದ(ಆನ್‌ಲೈನ್) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮಾರ್ಚ್ 15 ಕೊನೆಯ ದಿನವಾಗಿದೆ.
ಕಡ್ಡಾಯವಾಗಿ ದೃಢೀಕರಿಸಿದ ಪ್ರವೇಶ ಪತ್ರವನ್ನು ಪ್ರವೇಶ ಪರೀಕ್ಷೆಗೆ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಆದರ್ಶ ವಿದ್ಯಾಲಯ ಅಥವಾ ಮೊ.9740738762ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.