ಬಳ್ಳಾರಿ | ಸರ್ಕಾರ ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಕ: ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್

Date:

Advertisements

ದೇಶದ ಪ್ರತಿಯೊಂದು ಮಗು/ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಣೆಯ ಹೊಣೆ ಸರ್ಕಾರದ್ದಾಗಿದ್ದೇ ಆಗಿದೆ. ಅಧೀನದ ಅಧಿಕಾರಿಗಳು ಗ್ರಾಪಂ, ತಾಪಂ ಮಟ್ಟದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಹೊರಬೇಕಿದೆ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್‌ನ ಹೊಸ ನಜೀರ್ ಸಾಬ್ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ‘ಮಹಿಳೆಯರ ಹಾಗೂ ಮಕ್ಕಳ ರಕ್ಷಣಾ ಕಾವಲು ಸಮಿತಿ’ ಕುರಿತು ಒಂದು ದಿನದ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

“ಅಧಿಕಾರಿಗಳು ಹೆಣ್ಣು ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಪೋಕ್ಸೋ, ಬಾಲ್ಯವಿವಾಹ, ಬಾಲ ಗರ್ಭಿಣಿಯಂತಹ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಂಚಾಯಿತಿ ಮಟ್ಟದ ಕಾವಲು ಸಮಿತಿ ಮೂಲಕ ಕ್ರಮ ವಹಿಸಲಾಗಿದೆ. ಕಾವಲು ಸಮಿತಿಯನ್ನು ಉತ್ತೇಜಿಸಿದರೆ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಒಂದು ಹೆಣ್ಣಿಗೆ ಮದುವೆಯ ವಯಸ್ಸು 18 ವರ್ಷದ ಬಳಿಕವೇ ಎಂದು ಕಾನೂನಿದೆ. ಕೆಲವೊಂದು ಕಾರಣಗಳಿಂದ ಬಾಲ್ಯ ವಿವಾಹವಾಗಿ ಮುಂದೆ ಕಷ್ಟಪಡುತ್ತಿರುವ ಘಟನೆಗಳು ನಮ್ಮ ಕಣ್ಣ ಮುಂದಿವೆ. ಇಂತಹ ಸಮಸ್ಯೆಗಳಿಗೆ ಹೆಣ್ಣು ಮಕ್ಕಳು ಒಳಗಾಗದಂತೆ ನಾವು ನೋಡಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕು ಕಾವಲು ಸಮಿತಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಬೀಳಲಿದೆ” ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿ, “ಬೆಳೆಯುವ ಮಗುವಿಗೆ ಸುರಕ್ಷಿತ ವಾತಾವರಣ ಕಲ್ಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ನಿಮ್ಮ ಸುತ್ತ-ಮುತ್ತಲಿನಲ್ಲಿ ಬಾಲ್ಯವಿವಾಹ ನಡೆಯುವುದು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಅಥವಾ ಉಚಿತ ಕಾನೂನು ಸೇವಾ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾನಸಿಕವಾಗಿ, ದೈಹಿಕವಾಗಿ ಸಾಮರ್ಥ್ಯವಿಲ್ಲದಿರುವ ಚಿಕ್ಕ ವಯಸ್ಸಿನಲ್ಲಿ ಗರ್ಭಿಣಿಯಾಗಿ ತಾಯ್ತನಕ್ಕೆ ಒಳಗಾಗುವುದರಿಂದ ಹುಟ್ಟಿದ ಮಗುವೂ ಸಮರ್ಥವಾಗಿರುವುದಿಲ್ಲ. ಹಾಗಾಗಿ ಹೆಣ್ಣು ಮಕ್ಕಳು ಅಕಾಲಿಕ ಗರ್ಭಧಾರಣೆಗೆ ಒಳಗಾಗುವಂತಹ ಪರಿಸ್ಥಿತಿ ನಿರ್ಮಾಣವಾಗದಂತೆ, ಶೋಷಣೆಗೆ ಒಳಗಾಗದಂತೆ ಮುಂಜಾಗ್ರತೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾ ದೇವಿ ಮಾತನಾಡಿ, “ಮಕ್ಕಳ ಹಕ್ಕುಗಳು ಮತ್ತು ಬಾಧ್ಯತೆಗಳನ್ನು ರಕ್ಷಿಸುವ ಕೆಲಸವಾಗಬೇಕಿದೆ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಇಲ್ಲಿಯವರೆಗೆ 83 ಬಾಲ್ಯವಿವಾಹ ನಡೆದಿವೆ. ಅದರಲ್ಲಿ 64 ಬಾಲ್ಯವಿವಾಹಗಳನ್ನು ತಡೆಯಲಾಗಿದೆ. 19 ಪ್ರಕರಣ ಬಾಲ್ಯವಿವಾಹ ಹಾಗೂ ಪೋಕ್ಸೋ ಒಳಗೊಂಡಿದ್ದು, 9 ಪ್ರಕರಣಗಳಿಗೆ ಎಫ್‌ಐಆರ್ ದಾಖಲಿಸಲಾಗಿದೆ. 10 ಪ್ರಕರಣ ಎಫ್‌ಐಆರ್ ದಾಖಲಿಸಲು ಬಾಕಿ ಇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ವೈದ್ಯಕೀಯ ಕಾಲೇಜುಗಳ NRI ಕೋಟಾ ರದ್ದತಿಗೆ AIDSO ಆಗ್ರಹ

ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಕಾನೂನು ಸೇವೆಯ ಸಹಾಯವಾಣಿ ಸಂಖ್ಯೆ 15100 ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.

ಕೊಪ್ಪಳದ ಮಕ್ಕಳ ಸಂರಕ್ಷಣಾ ಯೋಜನೆಯ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ.ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ‘ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ ಹಾಗೂ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ’ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕಲಾವತಿ ಸೇರಿದಂತೆ ವಿವಿಧ ಗ್ರಾಪಂ ಮಹಿಳಾ ಅಧ್ಯಕ್ಷರು, ತಾಪಂ ಇಓ, ಗ್ರಾಪಂ ಪಿಡಿಓ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ, ದೊಡ್ಡನಗೌಡ್ರು ಮಂಜುನಾಥ, ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್, ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್.ಸಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X