ಬಳ್ಳಾರಿ | ಸರ್ಕಾರಿ ಭೂಮಿಯನ್ನು ಗೋಶಾಲೆ ನಿರ್ಮಾಣಕ್ಕೆ ಕೊಡಬಾರದು; ಒತ್ತಾಯ

Date:

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಗೋಶಾಲೆ ನಿರ್ಮಾಣಕ್ಕಾಗಿ ಕೋರಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಒತ್ತಾಯಿಸಿದೆ.

- Advertisement -

ಕಂಪ್ಲಿ ತಹಶೀಲ್ದಾರ್ ಗೌಸಿಯಾ ಬೇಗಂ ಅವರು ಭೇಟಿ ಮಾಡಿದ ಸಮಿತಿಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಮಸಾಗರ ಗ್ರಾಮದ ಮಾನಸ ಗಂಗೋತ್ರಿ ಸೇವಾ ಟ್ರಸ್ಟ್ ಗ್ರಾಮದ ವ್ಯಾಪ್ತಿಯ ಸರ್ಕಾರಿ ಭೂಮಿಯ ವಿವಿಧ ಸರ್ವೇ ನಂಬರ್‌ಗಳಲ್ಲಿ ಗೋಶಾಲೆ ನಿರ್ಮಾಣಕ್ಕಾಗಿ ಇಟ್ಟಿರುವ ಬೇಡಿಕೆಯ ಅರ್ಜಿಯನ್ನು ಈ ಕೂಡಲೇ ತಿರಸ್ಕರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಸಮಿತಿಯ ಮುಖಂಡರ ವಸಂತ ರಾಜ್ ಕಹಳೆ, “ರಾಮಸಾಗರ ಗ್ರಾಮದ ಸರ್ಕಾರ ಭೂಮಿಯ ಸರ್ವೇ ನಂ.848, 848, 794, 849, 900ಎ/2 ಮತ್ತು 9000/3 ಇನ್ನಿತರ ಸರ್ವೇ ನಂಬರ್‌ಗಳಲ್ಲಿ ವಿವಿಧ ಸಮುದಾಯದ ಭೂರಹಿತ ಕುಟುಂಬಗಳು 20 ವರ್ಷಗಳಿಂದ ಉಳುಮೆ ಮಾಡಿಕೊಂಡು ಜೀವನವನ್ನು ಸಾಗಿಸುತ್ತಿದ್ದಾರೆ. ಅವರ ಭೂಮಿಯನ್ನು ಕಸಿದುಕೊಳ್ಳಬಾರದು” ಎಂದು ಆಗ್ರಹಿಸಿದ್ದಾರೆ.

“ಸದರಿ ಕುಟುಂಬಗಳು ಅಕ್ರಮ-ಸಕ್ರಮಕ್ಕಾಗಿ ಫಾರಂ-57ನ್ನು ಕಂದಾಯ ಇಲಾಖೆಗೆ ಸಲ್ಲಿಸಿದ್ದು, ಹಕ್ಕು ಪತ್ರಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಪಟ್ಟಕ್ಕಾಗಿ ಹತ್ತಾರು ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಆದರೂ, ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಭೂರಹಿತ ಕುಟುಂಬಗಳಿಗೆ ಅಸಮಧಾನ ತಂದಿದೆ” ಎಂದಿದ್ದಾರೆ.

“ಗೋಶಾಲೆಗಳೆಲ್ಲವೂ ಹೆಸರಿಗೆ ಮಾತ್ರ ನಿರ್ಮಾಣವಾಗಿ ಈ ಯೋಜನೆಯು ಕೆಲವರಿಗೆ ಹಣ ಮಾಡುವ ದಂಧೆಯಾಗಿ ಪರಿಣಮಿಸಿದೆ. ಯಾವುದೇ ಕಾರಣಕ್ಕೂ ಗ್ರಾಮದ ವ್ಯಾಪ್ತಿಯಲ್ಲಿ ಭೂರಹಿತ ಕುಟುಂಬಗಳು ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಯಲ್ಲಿ ಗೋಶಾಲೆಗೆ ಭೂಮಿ ಮಂಜೂರಾತಿ ಮಾಡಬಾರದು” ಎಂದು ಆಗ್ರಹಿಸಿದ್ದಾರೆ.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ, ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಿ.ಗಂಗಾಧರ್, ಹಸಿರುಸೇನೆಯ ದೊಡ್ಡ ಬಸಪ್ಪ ಹಾಗೂ ಬಗರ್ ಹುಕಂ ಸಾಗುವಳಿದಾರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...