ಬಳ್ಳಾರಿ | ಮಾನವ ಕಲ್ಯಾಣ ಕಾರ್ಯವು ವಿಶ್ವಮಾನ್ಯವಾದುದು: ಪ್ರೊ. ಎಂ ಮುನಿರಾಜು

Date:

Advertisements

ಮಾನವ ಕಲ್ಯಾಣಕ್ಕೆ ಸಹಕಾರಿಯಾಗಿರುವ ಸಮಾಜ ಕಾರ್ಯವು ವಿಶ್ವ ಮಾನ್ಯತೆಯನ್ನು ಪಡೆದಿದೆ. ಇಂದಿಗೂ ಸಾಮಾಜಿಕ ಕಾಳಜಿ ಇರುವ ವೃತ್ತಿಪರ ಸಮಾಜ ಕಾರ್ಯಕರ್ತರ ಸಾಮಾಜಿಕ ಸೇವೆಯು ಶ್ಲಾಘನೀಯ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಹೇಳಿದರು.

ವಿವಿಯ ಸಮಾಜ ಕಾರ್ಯ ವಿಭಾಗ ವತಿಯಿಂದ ನಿನ್ನೆ ಆಯೋಜಿಸಿದ್ದ ವಿಶ್ವ ಸಮಾಜ ಕಾರ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳನ್ನು ಕಾಪಾಡುವಲ್ಲಿ, ಶೋಷಿತ ಮಹಿಳೆಯರು, ಮಕ್ಕಳು, ವೃದ್ಧರು, ಅನಾಥರು ಮತ್ತು ದೀನ ದುರ್ಬಲರನ್ನು ಆರೈಕೆ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರನ್ನು ಕೃತಜ್ಞತೆಯಿಂದ ನೆನೆಯುವ ದಿನವಾಗಿ ವಿಶ್ವ ಸಮಾಜ ಕಾರ್ಯ ದಿನವನ್ನು 1983ರಿಂದ ಸಾಮಾಜಿಕ ಕಾರ್ಯಕರ್ತರ ಅಂತಾರಾಷ್ಟ್ರೀಯ ಒಕ್ಕೂಟವು ಆಚರಿಸುತ್ತಾ ಬಂದಿದೆ. ಪ್ರಪಂಚದಾದ್ಯಂತ ಪ್ರತಿ ಮಾರ್ಚ್ ತಿಂಗಳ ಮೂರನೇ ಮಂಗಳವಾರ ವಿಶ್ವ ಸಮಾಜ ಕಾರ್ಯ ದಿನವನ್ನು ಆಚರಿಸಲಾಗುವುದು” ಎಂದು ತಿಳಿಸಿದರು.

ಕುಲಸಚಿವ ಎಸ್.ಎನ್. ರುದ್ರೇಶ್ ಅವರು ಮಾತನಾಡಿ, “ಬುದ್ದ, ಬಸವ ಅಂಬೇಡ್ಕರ್, ಲೋಹಿಯಾ, ಶಾಂತವೇರಿ ಗೋಪಾಲ ಗೌಡರ ತತ್ವಾದರ್ಶಗಳು ಇಂದಿನ ವಿದ್ಯಾರ್ಥಿ ಸಮಾಜ ಕಾರ್ಯಕರ್ತರಿಗೆ ಮಾದರಿಯಾಗಿವೆ” ಎಂದರು.

Advertisements
WhatsApp Image 2025 03 18 at 6.11.04 PM 1

ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ.ಸಾಲಿ ಮಾತನಾಡಿ, “ಕರ್ನಾಟಕ ಕಂಡ ಅಪರೂಪದ ಸಮಾಜ ಸೇವಕ, ನಾಡಿಗೆ ನಾಡೇ ನೆನೆಯುತ್ತಿರುವ ಡಾ. ಪುನೀತ್ ರಾಜ್ ನಮಗೆ ಆದರ್ಶರು ಮತ್ತು ಹೊಸಪೇಟೆಯಲ್ಲಿ ತನ್ನ ಹದಿನೇಳನೇ ವಯಸ್ಸಿಗೆ ತಮ್ಮ ದುಡಿಮೆಯ ಬಹುಪಾಲನ್ನು ಅನಾಥ ಮತ್ತು ವಿಕಲ ಚೇತನ ಮಕ್ಕಳಿಗೆ ಮೀಸಲಿರಿಸಿ ಸೇವೆ ಮಾಡುತ್ತಿರುವ ಕಾವ್ಯ ನಮಗೆ ಆದರ್ಶ” ಎಂದು ಸ್ಮರಿಸಿದರು.

ಇದನ್ನೂ ಓದಿ: ಬಳ್ಳಾರಿ | ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಪ್ರೊ.ಗೌರಿ ಮಾಣಿಕ ಮಾನಸ, ಆದಿಕವಿ ಮಹರ್ಶಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ.ರಶ್ಮಿ ರಾಣಿ ಅಗ್ನಿಹೋತ್ರಿ, ಭವಿತಾ, ಡಾ.ಕುಮಾರ್ ಸೇರಿದಂತೆ ಸಮಾಜ ಕಾರ್ಯ ವಿಭಾಗದ ಬೋಧಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X