ಬಳ್ಳಾರಿ | ಸರಕು ಸಾಗಾಟ ದರ ಹೆಚ್ಚಳಕ್ಕೆ ಒತ್ತಾಯಿಸಿ ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

Date:

ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ಬಳ್ಳಾರಿ ನಗರದ ಶಿಡಿಗಿನ ಮೊಳ ಬಳಿಯ ಹಲಕುಂದಿ ಬಳಿಯ ಜಾನಕಿ, ಬಸಾಯಿ ಸ್ಪಾಂಜ್ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಲಾರಿ ಸಂಘದ ಮುಖಂಡ ಅಧ್ಯಕ್ಷ ವಿ ಶ್ರೀನಿವಾಸ್ ಮಾತನಾಡಿ, “ಲಾರಿ ಸರಕು ಸಾಗಾಟದ ದರ ಹೆಚ್ಚಿಸಬೇಕು. ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು. ಓವರ್ ಲೋಡ್ ಲಾರಿಗಳನ್ನು ನಿಷೇಧಿಸಬೇಕು. ಕ್ರಮಸಂಖ್ಯೆಯ ಪ್ರಕಾರವಾಗಿ ಸ್ಥಳೀಯ ಲಾರಿಗಳಿಗೆ ಸರಕು ಸಾಗಣೆಗೆ ಅವಕಾಶ ನೀಡಬೇಕೆಂಬುದು ಎಂದು ಪ್ರತಿಭಟಿಸುತ್ತಿದ್ದೇವೆ” ಎಂದು ತಿಳಿಸಿದರು.

ಸ್ಥಳೀಯವಾಗಿ ಅಂದಾಜು ಸಾವಿರದ ಐದುನೂರು ಲಾರಿಗಳು ಇದ್ದು, ನೂರಾರು ಲಾರಿಗಳಿಗೆ ಸರಕು ಸಾಗಣೆ ಸಿಗದೇ ಲಾರಿ ಮಾಲೀಕರು ಭಾರೀ ಪ್ರಮಾಣದ ನಷ್ಟ ಎದುರಿಸುತ್ತಿದ್ದಾರೆ. ಲಾರಿಗಳ ಮಾಸಿಕ ಕಂತು ಕಟ್ಟಲಾಗದೇ, ಆರ್ಥಿಕ ಸಂಕಷ್ಟದಿಂದಾಗಿ ಈಗಾಗಲೇ ಹಲವು ಜನ ಮಾಲೀಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

ಕಳೆದ ತಿಂಗಳು ಸಂಘದ ವತಿಯಿಂದ ಐದು ದಿನಗಳ ಕಾಲ ಹಗಲು ರಾತ್ರಿ ಶಾಂತಿಯುತ ಮುಷ್ಕರ ನಡೆಸಿ, ಸ್ಪಾಂಜ್ ಕಾರ್ಖಾನೆಗಳಿಗೆ ಒಳಹೊರ ಹೋಗುವ ಲಾರಿಗಳನ್ನು ನಿಲ್ಲಿಸಲಾಗಿತ್ತು. ಆಗ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ, ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್‌ನ ಅಧ್ಯಕ್ಷರ ಮಧ್ಯಸ್ಥಿಕೆಯಲ್ಲಿ ಮಾತುಕತೆಯಲ್ಲಿ ನಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದು ಹೇಳಿದ್ದರು. ತದನಂತರ ಮಾತು ಬದಲಿಸಿ, ಈಗ ಏನಾದರೂ ಮಾಡಿಕೊಳ್ಳಿ ಎನ್ನುತ್ತಿದ್ದಾರೆ. ಹೀಗಾಗಿ ನಮಗೆ ಅನ್ಯಾಯವಾಗಿದ್ದು, ಹೋರಾಟ ಮುಂದುವರೆಸಿದ್ದೇವೆ. ಬೇಡಿಕೆಗಳು ಈಡೇರದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಿಂಚು ಶ್ರೀನಿವಾಸ್, ನೂರ್ ಮೊಹಮ್ಮದ್, ಮೆಹಬೂಬ ಬಾಷ, ಪ್ರವೀಣಕುಮಾರ್, ಎಂ.ಡಿ. ಫಯಾಜ್, ನಾಗರಾಜ, ಪೂಜಾದೇವಿ ಶ್ರೀನಿವಾಸುಲು, ರಾಮ್ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

ವರದಿ : ರಾಧಾಕೃಷ್ಣ, ಸಿಟಿಝನ್ ಜರ್ನಲಿಸ್ಟ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...