ಬಳ್ಳಾರಿ | ಒಳಮೀಸಲಾತಿಯಲ್ಲಿ ಅನ್ಯಾಯ; ಅ.2ರಂದು ಅಲೆಮಾರಿಗಳಿಂದ ‘ಬುತ್ತಿ ಕಟ್ಟಿ ದೆಹಲಿಗೆ ಹತ್ತಿ’ ಆಂದೋಲನ

Date:

ಅಲೆಮಾರಿ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಆದ ಅನ್ಯಾಯವನ್ನು ಸರಿಪಡಿಸುವಂತೆ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ರಾಜ್ಯ ಹಾಗೂ ದೇಶದಿಂದ ಸಾವಿರಾರು ಅಲೆಮಾರಿ ಸಮುದಾಯದವರಿಂದ ಅಕ್ಟೋಬರ್ 2ರಂದು ‘ಬುತ್ತಿ ಕಟ್ಟಿ ದೆಹಲಿಗೆ ಹತ್ತಿ’ ಎಂಬ ದೆಹಲಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಲೆಮಾರಿ ಸಮುದಾಯಗಳ ಒಕ್ಕೂಟದ ಮುಖಂಡ ಶಿವಕುಮಾರ್ ತಿಳಿಸಿದರು.

- Advertisement -

ಬಳ್ಳಾರಿ ನಗರದ ಬಾಲ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಲೆಮಾರಿ ಸಮುದಾಯಗಳು ಅಂತಿಮ ಭರವಸೆಯೊಂದಿಗೆ ಗಾಂಧಿ ಜಯಂತಿಯಂದು, ‘ದೆಹಲಿ ಚಲೋʼ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ಈ ಕಾರ್ಯಕ್ರಮದ ಸ್ಥಳಕ್ಕೆ ಕೇಂದ್ರ ಸರ್ಕಾರದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗುವುದು. ರಾಹುಲ್ ಗಾಂಧಿಯವರು ಸಂವಿಧಾನವನ್ನು ಯಾವಾಗಲೂ ಕೈಯಲ್ಲಿ ಹಿಡಿದುಕೊಂಡು ತಿರುಗುತ್ತಾರೆ. ಸಂವಿಧಾನದ ಪ್ರಕಾರ ಮತ್ತು ನಾಗಮೋಹನ್ ದಾಸ್ ವರದಿಯ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಶೇಕಡ ಒಂದರಷ್ಟು ಮೀಸಲಾತಿಯನ್ನು ಜಾರಿಗೊಳಿಸಬೇಕು. ಅಲೆಮಾರಿಗಳು ಬೋವಿ, ಲಂಬಾಣಿ, ಹಾಗೂ ಕೊರಚ ಕೊರಮ ಮುಂದುವರೆದ ಜಾತಿಗಳ ಜೊತೆ ಸ್ಪರ್ಧಿಸಲು ಆಗುವುದಿಲ್ಲ. ಪ್ರತ್ಯೇಕವಾಗಿ ನಮಗೆ ಶೇಕಡ ಒಂದರಷ್ಟು ಮೀಸಲಾತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯಧೀಶರಾದ ಡಾ. ನಾಗಮೋಹನ್ ದಾಸ್ ಏಕಸದಸ್ಯ ಸಮಿತಿಯನ್ನು ನೇಮಿಸಿತು. ಈ ಆಯೋಗವು ಬಹಳ ವೈಜ್ಞಾನಿಕವಾಗಿ ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ದತ್ತಾಂಶಗಳನ್ನು ಸಂಗ್ರಹಿಸಿ. ಒಂದು ವಸ್ತುನಿಷ್ಟವಾದ ವರದಿಯನ್ನು ಸರಕಾರಕ್ಕೆ ನೀಡಿತು. ಸಾಮಾಜಿಕ ನ್ಯಾಯ ಮತ್ತು ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಶಯಗಳನ್ನು ಇಟ್ಟುಕೊಂಡು ವೈಜ್ಞಾನಿಕವಾದ ವರದಿಯನ್ನು ಸಿದ್ಧಪಡಿಸಿದ್ದರು. ಅದನ್ನಾಧರಿಸಿ 2025ರ ಆಗಸ್ಟ್ 19 ರಂದು ನಡೆದ ಮಂತ್ರಿಮಂಡಲದ ಸಭೆಯಲ್ಲಿ ಈ ವರದಿಯನ್ನು ಕರ್ನಾಟಕ ಸರಕಾರ ಅಂಗೀಕರಿಸಿತು. 49 ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳನ್ನು ಒಳಗೊಂಡಂತೆ 59 ಸಮುದಾಯಗಳಿಗೆ ಶೇ 1 ರಷ್ಟು ಮೀಸಲಾತಿ ಪ್ರಮಾಣವನ್ನು ನಿಗದಿ ಮಾಡಿದೆ. 59 ಸಮುದಾಯಗಳನ್ನು ಸಿ ಗುಂಪಿನ ಬಲಾಡ್ಯ ಸ್ಪ್ರಶ್ಯ ಸಮುದಾಯಗಳ ಜೊತೆಗೆ ಸೇರಿಸಿದೆ. ಈ ಬಲಾಡ್ಯ ಜಾತಿಗಳ ಜೊತೆಗೆ ಈ ಚಿಕ್ಕಚಿಕ್ಕ ಸಮುದಾಯಗಳನ್ನು ಸೇರಿಸಿರುವುದು ಭಾರತದ ಸರ್ವೋಚ್ಚ ನ್ಯಾಯಾಲಯವು ಒಳ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ತೀರ್ಪಿಗೆ ವಿರುದ್ಧವಾಗಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಬಳ್ಳಾರಿ | ಸರ್ಕಾರ ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಕ: ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್

“ಅಲೆಮಾರಿ/ಅರೆಅಲೆಮಾರಿ ಪರವಾಗಿ ಯಾವ ರಾಜಕೀಯ ಲಾಬಿಯೂ ಇಲ್ಲ. ನಮಗೆ ನ್ಯಾಯ ದೊರಕಿಸಿ ಕೊಡುವಂತೆ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಧರಣಿ ಕೈಗೊಳ್ಳುತ್ತಿದ್ದೇವೆ. ಜೊತೆಗೆ, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಉದ್ದೇಶಿಸಿದ್ದೇವೆ. ಕಾಂಗ್ರೆಸ್ ಹೈಕಮಾಂಡ್ ನಮ್ಮ ನೋವನ್ನು ಆಲಿಸಿ ನ್ಯಾಯವನ್ನು ಕೊಡಬೇಕೆಂದು ಕಾಂಗ್ರೆಸ್‌ನ ಈ ಮುಖಂಡರಲ್ಲಿ ನಾವು ಮನವಿ ಮಾಡಿಕೊಳ್ಳಲಿದ್ದೇವೆ. ಬೀದಿಯಲ್ಲಿ ಮತ್ತು ಬೆಂಗಳೂರಿನಲ್ಲಿ ಸಿಗದ ನ್ಯಾಯವನ್ನು ಅರಸುತ್ತಾ ದೆಹಲಿಗೆ ಬರುತ್ತಿದ್ದೇವೆ. ನಿರಾಶೆಗೊಳಿಸುವುದಿಲ್ಲ ಎಂಬ ಭರವಸೆಯೂ ಇದೆ ನಿರಾಶಗೊಳಿಸಬೇಡಿ” ಎಂದು ಮನವಿ ಮಾಡಿದರು.

ಪ್ರಜಾ ಪರಿವರ್ತನೆ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ್ ಕುಮಾರ್. ಸಿಳ್ಳೆಕ್ಯಾತ ಸಮುದಾಯದ ಸುಬ್ಬಣ್ಣ, ಗಂಗಾಧರ, ಜಂಬಣ್ಣ, ರಾಮಾಂಜಿನಿ, ಸಂಪತ್ ಕುಮಾರ್, ಸೇರಿದಂತೆ ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...