ಬಳ್ಳಾರಿ | ಸುಪ್ರೀಂ ಕೋರ್ಟ್ ಸಿಜೆಐ ಗವಾಯಿಯವರಿಗೆ ಅಪಮಾನ: ಸೂಕ್ತ ಕ್ರಮಕ್ಕೆ ಅಂಬೇಡ್ಕರ್ ಸಂಘ, ಡಿಎಸ್ಎಸ್ ಆಗ್ರಹ

Date:

ಮಧ್ಯಪ್ರದೇಶದ ಖಜರಾಹೋ ದೇವಸ್ಥಾನದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಿಜೆಐ ಗವಾಯಿಯವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ಮನುವಾದಿ ವಕೀಲ ರಾಕೇಶ್ ಕಿಶೋರ್‌ನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ(ಡಿ ಜಿ ಸಾಗರ್ ಬಣದ) ಜಿಲ್ಲಾ ಸಂಚಾಲಕ ಎ ಮಾನಸಯ್ಯ ಅಗ್ರಹಿಸಿದರು.

- Advertisement -

ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, “ಆರ್‌ಎಸ್ಎಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿರಾಕರಿಸಿದ ಗವಾಯಿಯವರ ಮೇಲೆ ದ್ವೇಷದಿಂದ ಈ ರೀತಿಯ ಘಟನೆಗೆ ಕಾರಣವಾಗಿದೆ. ಘಟನೆಗೆ ಕಾರಣವಾದ ಮನುವಾದಿ ರಾಕೇಶ ಕಿಶೋರ್ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದು ‘ಸನಾತನ ಧರ್ಮಕ್ಕೆ ಅವಮಾನ ಮಾಡಿದರೆ ಸಹಿಸುವುದಿಲ್ಲ’ ಎಂಬ ಉದ್ಧಟತನದ ಹೇಳಿಕೆಯನ್ನು ನೀಡಿದ್ದಾನೆ. ಇಂತ ಹೀನಕೃತ್ಯ ಎಸಗಿದ ದೇಶದ್ರೋಹಿ, ಸಂವಿಧಾನ ದ್ರೋಹಿ ಕಿಶೋರ್‌ನನ್ನು ಕಠಿಣ ಶಿಕ್ಷೆಗ ಗುರಿಪಡಿಸಿಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಜಿಲ್ಲಾ ಅಂಬೇಡ್ಕರ್ ಸಂಘದ ವತಿಯಿದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸಿ, “ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳು ಕೇವಲ ದಲಿತ ಎಂಬ ಕಾರಣದಿಂದ ಅವರ ಮೇಲೆ ಸನಾತನಿ ವಕೀಲನೊಬ್ಬ ಶೂ ಎಸೆದು ಅವಮಾನ ಎಸಗಿದ್ದಾನೆ. ಬಿ ಆರ್ ಗವಾಯಿ ಏಕಾಂಗಿಯಲ್ಲ ಅವರ ಹಿಂದೆ ದೇಶದ ಜನತೆ ಇದೆ. ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿದ ವಕೀಲನಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ; ಆಸ್ಪತ್ರೆಗೆ ಭೇಟಿ ನೀಡಿದ ಎ ಎಸ್ ಪೊನ್ನಣ್ಣ

ಪಿ ಎಲ್ ಗಾದಿಲಿಂಗನಗೌಡ, ವಿ ಎಸ್ ಶಿವಶಂಕರ್, ನರಸಪ್ಪ, ರಾಮನಾಯ್ಕ್, ಇಮಾಮ್ ಗೋಡೇಕರ್, ಗೋವಿಂದ ಬಾಬು, ಡಾ. ಟಿ ಎ ದುರುಗಪ್ಪ, ರಾಜೇಶ್ ಹುಲಿಯಪ್ಪ, ಅನಂತಕುಮಾರ್, ರಮೇಶ್, ಡಿಎಸ್‌ಎಸ್ ಸಾಗರ ಬಣದ ಹಲವರು ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ಜನರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...