ಬಳ್ಳಾರಿ | ಜೆಎಸ್‌ಡಬ್ಲ್ಯೂ ಕಾರ್ಖಾನೆ ದುರಂತ; ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯ

Date:

Advertisements

ಬಳ್ಳಾರಿಯ ಜೆಎಸ್‌ಡಬ್ಲ್ಯೂ ಉಕ್ಕಿನ ಕಾರ್ಖಾನೆ ಸಾವಿನ ಕಂಪನಿಯಾಗಿದ್ದು, ಎರಡು ವರ್ಷಗಳ ಹಿಂದೆ ವೇಸ್ಟ್ ಡಂಪಿಂಗ್ ಯಾರ್ಡ್‌ನಲ್ಲಿ ದುರಂತದಲ್ಲಿ ಸಾವಿಗೀಡಾದ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ಮಾಡಬೇಕು ಎಂದು ಜಿಂದಾಲ್ ಕಾರ್ಖಾನೆಯ ಆಡಳಿತ ಅಧಿಕಾರಿಗಳನ್ನು ವಕೀಲ ಬಾದಾಮಿ ಶಿವಲಿಂಗ ನಾಯಕ ಒತ್ತಾಯಿಸಿದರು.

ಜಿಲ್ಲೆಯ ಸಂಡೂರು ತಾಲೂಕಿನ ತುಮಟಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ರಾಮಾಂಜನಿ ಹಾಗೂ ಹೊನ್ನೂರಪ್ಪ ಅವರು ಜಿಂದಾಲ್ ಉಕ್ಕಿನ ಕಾರ್ಖಾನೆಯ ವೇಸ್ಟ್ ಡಂಪಿಂಗ್ ಯಾರ್ಡ್ ನಲ್ಲಿ ನಡೆದ ಅವಘಡದಲ್ಲಿ ಮರಣ ಹೊಂದಿದ್ದರು. ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕೆಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.

“ಬಡತನ ಹಾಗೂ ಹಸಿವು ಮನುಷ್ಯನಿಗೆ ಯಾವ ಕೆಲಸವನ್ನಾದರೂ ಮಾಡಲು ಪ್ರೇರೇಪಿಸುತ್ತದೆ. ಅದೇ ರೀತಿ ತನ್ನ ಕುಟುಂಬದ ಆರ್ಥಿಕ ಸಂಕಷ್ಟ ನೀಗಿಸಿಕೊಳ್ಳಲು ಸಂಡೂರು ತಾಲೂಕಿನ ತುಮಟಿ ಗ್ರಾಮದ ಹೊನ್ನೂರಪ್ಪ ಹಾಗೂ ರಾಮಾಂಜನಿ ಇವರುಗಳು ಹೊಟ್ಟೆಪಾಡಿಗಾಗಿ ಜಿಂದಾಲ್ ಕಾರ್ಖಾನೆಯ ಡಂಪಿಂಗ್ ಯಾರ್ಡ್ ನಲ್ಲಿ ಕಬ್ಬಿಣದ ತುಂಡುಗಳನ್ನು ಸಂಗ್ರಹಿಸಲು ಹೋಗಿ ಜೀವ ಕಳೆದುಕೊಂಡಿದ್ದು, ಕುಟುಂಬಕ್ಕೆ ಸೌಜನ್ಯಕ್ಕಾದರೂ ಮಕ್ಕಳ ವಿದ್ಯಾಭ್ಯಾಸಕ್ಕೆ ಕನಿಷ್ಠ ಸೌಲಭ್ಯವನ್ನು ಕಲ್ಪಿಸಿ ಕೊಡಬೇಕು. ಘಟನೆ ನಡೆದು ಎರಡುವರೆ ವರ್ಷ ಕಳೆದರೂ ಜಿಲ್ಲಾಧಿಕಾರಿಗಳು, ತಾಲೂಕಿನ ಶಾಸಕರು ಹಾಗೂ ಅವಳಿ ಜಿಲ್ಲೆಯ ಸಂಸದರಾಗಲಿ ಕುಟುಂಬದ ನೆರವಿಗೆ ಬಂದಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಆ ಕುಟುಂಬದ ನೆರವಿಗೆ ಬರಬೇಕು” ಎಂದು ಆಗ್ರಹಿಸಿದರು.

Advertisements

ಇದನ್ನೂ ಓದಿ: ಬಳ್ಳಾರಿ | ಖರೀದಿ ಕೇಂದ್ರದ ಜೋಳವನ್ನು ಶೀಘ್ರ ಸಾಗಾಣಿಕೆ ಮಾಡಿ: ಮೆಣಸಿನ ಈಶ್ವರಪ್ಪ

ಇಷ್ಟಾದರೂ ಜಿಲ್ಲಾಧಿಕಾರಿಗಳು ಮತ್ತು ಜಿಂದಾಲ್ ಕಾರ್ಖಾನೆಯ ಅಧಿಕಾರಿಗಳು ನಿರ್ಲಕ್ಷ ವಹಿಸಿದಲ್ಲಿ ಇದೇ ಜೂನ್ 27ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ವಿ ಎಸ್ ಶಿವಶಂಕರ್, ಮಾನವ ಬಂಧುತ್ವ ವೇದಿಕೆಯ ಸಂಗನಕಲ್ಲು ವಿಜಯಕುಮಾರ್, ಎ ಸ್ವಾಮಿ, ರತ್ನಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X