ಬಳ್ಳಾರಿ | ಜೋಳ ಖರೀದಿ ಕೇಂದ್ರ ತೆರೆಯಲು ಕನ್ನಡ ನಾಡು ರೈತ ಸಂಘ ಮನವಿ

Date:

ಕಳೆದ ವರ್ಷ ಕಟಾವು ಮಾಡಿರುವ ಜೋಳ ರೈತರ ಮನೆ ಮುಂದೆ ಒಣಗುತ್ತಿದೆ. ಕೂಡಲೇ ಹಿಂಗಾರು ಜೋಳ ಖರೀದಿಸಲು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕನ್ನಡ ನಾಡು ರೈತ ಸಂಘ ಬಳ್ಳಾರಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

- Advertisement -

ಸಂಘದ ಅಧ್ಯಕ್ಷ ಈಶ್ವರಪ್ಪ ಮೆಣಸಿನ ಮಾತನಾಡಿ, “ಜೋಳ, ಬಳ್ಳಾರಿ ಜಿಲ್ಲಾ ಹಾಗೂ ತಾಲೂಕಿನ ಪ್ರಮುಖ ಬೆಳೆಯಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಕಟಾವು ಮಾಡಿರುವ ಕ್ವಿಂಟಲ್‌ಗಟ್ಟಲೆ ಜೋಳವನ್ನು ರೈತರು ಮನೆ ಮುಂದೆ ಹಾಕಿಕೊಂಡಿದ್ದಾರೆ. ಅಲ್ಲದೇ, ಮುಂಗಾರು ಬೆಳೆ ಪ್ರಾರಂಭಗೊಂಡಲ್ಲಿ ಬೆಳೆಯು ಸಂಪೂರ್ಣ ನಾಶವಾಗುತ್ತದೆ. ಸಾಲ ಮಾಡಿ ಬೆಳೆದಿರುವ ಒಂದೇ ಬೇಳೆ ಹೀಗೆ ನೀರು ಪಾಲಾದರೆ ರೈತರ ನೋವು ಕೇಳುವವರಾರು? ಆದರೆ, ಇನ್ನೂ ಖರೀದಿ ಕೇಂದ್ರ ಸ್ಥಾಪಿಸಿಲ್ಲ. ಜೋಳದ ನೋಂದಣಿ ಮಾಡುವ ಕೆಲಸವೂ ನಡೆದಿಲ್ಲ. ಆದ್ದರಿಂದ, ಜೋಳವನ್ನು ಗೋದಾಮಿಗೆ ತೆಗೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
WhatsApp Image 2025 03 25 at 12.42.17 PM

ಸಂಘದ ಉಪಾಧ್ಯಕ್ಷ ಜಿ.ಭಾಸ್ಕರ್ ರೆಡ್ಡಿ, “ಮಾರ್ಚ್ 10ರಿಂದ 24ರವರೆಗೆ ಸುಮಾರು 150 ರೈತರು 10,000 ಕ್ವಿಂಟಲ್ ಜೋಳವನ್ನು ತೂಕ ಹಾಕಿರುತ್ತಾರೆ. ಇನ್ನುಳಿದ 935 ರೈತರು ಇನ್ನು 90,000 ಕ್ವಿಂಟಲ್ ಜೋಳವನ್ನು ತರಲಿದ್ದಾರೆ. ಆದ್ದರಿಂದ, ಆದಷ್ಟು ಬೇಗನೇ ಜೋಳವನ್ನು ತೂಕ ಮಾಡಿ ಲಾರಿಗಳಲ್ಲಿ ಲೋಡ್ ಮಾಡಿಸಬೇಕು. ಜಿ.ಪಿ.ಎಸ್. ಗಾಡಿಗಳು 3-4 ಲಾರಿಗಳು ಬಂದರೆ ಜೋಳವನ್ನು ಖರೀದಿ ಮಾಡಲು ವಿಳಂಬವಾಗುತ್ತದೆ. ಈಗಾಗಲೇ ಜೋಳ ಕಟಾವು ಆಗಿ 3 ತಿಂಗಳುಗಳು ಮೇಲೆ ಆಗಿದೆ. ಇನ್ನೂ ಬಿಟ್ಟರೆ ಜೋಳಕ್ಕೆ ಹುಳು ಬೀಳುವ ಸಾಧ್ಯತೆ ಇರುತ್ತದೆ. ನಂತರ ಸಂಕಷ್ಟಕ್ಕೀಡಾದ ರೈತ ಆತ್ಮಹತ್ಯೆ ಹಾದಿ ಹಿಡಿಯುತ್ತಾನೆ. ಅದರ ನೇರ ಹೊಣೆ ಸರ್ಕಾರದ್ದೇ ಆಗಿರುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಪಿ.ಮಂಜುನಾಥ, ಈರಣ್ಣ .ಬಿ, ಎಸ್,. ಚಂದ್ರಣ್ಣ, ಎನ್.ನಾಗೇಂದ್ರ, ಗಡಿಗೆ ರುದ್ರಗೌಡ, ಶಿವಮೂರ್ತಿ ಕಣ್ಣಿ, ಎಲ್.ಮಂಜುನಾಥಗೌಡ, ಆರ್.ಪ್ರದೀಪ್, ರುದ್ರಪ್ಪ, ಶಿವಶಂಕರಪ್ಪ, ಎನ್.ವಿಶ್ವನಾಥ, ಎಂ.ಎರ್ರಿಸ್ವಾಮಿ, ಚಂದ್ರಾರೆಡ್ಡಿ, ಗೋವಿಂದಪ್ಪ, ಪಿ.ಮನೋಜ್ ಕುಮಾರ್ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...