ಬಳ್ಳಾರಿ‌ | ಕೆಎಸ್‌ಆರ್‌ಟಿಸಿ ಡಿವಿಜನಲ್‌ ಸೆಕ್ಯೂರಿಟಿ ಇನ್ಸ್‌ಪೆಕ್ಟರ್‌ ಹತ್ಯೆ

ಕೆಎಸ್‌ಆರ್‌ಟಿಸಿ ಡಿವಿಜನಲ್‌ ಇನ್ಸ್‌ಪೆಕ್ಟರ್‌ ಹತ್ಯೆ

ಬಳ್ಳಾರಿ ನಗರದ ಕೇಂದ್ರ ಕಾರಾಗೃಹದಲ್ಲಿ ಕೆಎಸ್​ಆರ್​ಟಿಸಿ ಡಿವಿಜನಲ್ ಸೆಕ್ಯೂರಿಟಿ ಇನ್ಸ್​ಪೆಕ್ಟರ್​ ಹತ್ಯೆಯಾಗಿರುವ ಘಟನೆ ಸಂಭವಿಸಿದೆ.

ಹತ್ಯೆಗೀಡಾದವರು ಸೆಕ್ಯೂರಿಟಿ ಇನ್ಸ್‌ಪೆಕ್ಟರ್‌ ಹುಸೇನಪ್ಪ(54)​. ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಅವರ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ.

ಹುಸೇನಪ್ಪ ಕೆಎಸ್​​ಆರ್​ಟಿಸಿಯಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಾಳೆ ಬೀದರ್​ನಲ್ಲಿ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ಅವರು ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಕೊಲೆ ನಡೆದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದಾಯಾದಿ ಕೊಲೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಘಟನಾ ಸ್ಥಳಕ್ಕೆ ಎಸ್​ಪಿ ರಂಜಿತ್​ ಕುಮಾರ್ ಬಂಡಾರು, ಕೆಎಸ್​ಆರ್​ಟಿಸಿ ಡಿಸಿ ದೇವರಾಜ್, ಗಾಂಧಿ ನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here