ಬಳ್ಳಾರಿ | ಕೂಡ್ಲಿಗಿಯನ್ನು ಮಾದರಿ ಕ್ಷೇತ್ರವನ್ನಾಗಿಸುವೆ; ಶಾಸಕ ಶ್ರೀನಿವಾಸ್ ಎನ್ ಟಿ ಭರವಸೆ

Date:

ಕೊಟ್ಟೂರು ತಾಲೂಕು ವ್ಯಾಪ್ತಿಯಲ್ಲಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವನ್ನು ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಕ್ಷೇತ್ರದ ಶಾಸಕ ಡಾ ಶ್ರೀನಿವಾಸ್‌ ಎನ್ ಟಿ ಭರವಸೆ ನೀಡಿದರು.

- Advertisement -

ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ, ತೂಲಹಳ್ಳಿ ಗ್ರಾಮದಲ್ಲಿ ಆರೋಗ್ಯ ಕೇಂದ್ರ ಕಟ್ಟಡ, ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ, ಹುಣಸೆಕಟ್ಟೆ ಗ್ರಾಮದಲ್ಲಿ ಶಾಲಾ ಕೊಠಡಿ, ಹಾರಕನಾಳು, ನಡುಮಾವಿನಹಳ್ಳಿ ಗ್ರಾಮಗಳಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಅಂದಾಜು ₹10 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ʼಕ್ಷೇತ್ರ ವ್ಯಾಪ್ತಿಯಲ್ಲಿನ ಹಳ್ಳಿಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಅಂತಹ ಹಳ್ಳಿಗಳನ್ನು ಗುರುತಿಸಿ ಅಗತ್ಯ ಇರುವೆಡೆ ಮೂಲಭೂತ ಸೌಕರ್ಯ ಕಲ್ಪಿಸಿ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುತ್ತೇನೆ. ಕ್ಷೇತ್ರದ ಜನರ ಆರೋಗ್ಯ, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತೇನೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ತಿಳಿಯುವುದರ ಜೊತೆಗೆ ಸಾರ್ವಜನಿಕರಿಂದಲೂ ಕುಂದು ಕೊರತೆ ಆಲಿಸುತ್ತಿರುವೆ. ಜನತೆ ಸಲ್ಲಿಸುವ ಮನವಿಗಳನ್ನು ಪರಿಶೀಲಿಸಿ ಆಯಾ ಇಲಾಖೆ ಮೂಲಕ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ.  ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ್ದು ಕ್ಷೇತ್ರದಾದ್ಯಂತ 50 ಸರ್ಕಾರಿ ಶಾಲೆಗಳಿಗೆ ನೂರು ಕೊಠಡಿಗಳ ದುರಸ್ತಿ ಹಾಗೂ ಉನ್ನತೀಕರಣಗೊಳಿಸಲು ಮುಂದಾಗಿರುವೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ₹6 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದಲ್ಲಿ ಹುಳು ಪತ್ತೆ; ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ

ಈ ವೇಳೆ ಕೂಡ್ಲಿಗಿ ತಹಸೀಲ್ದಾರ್ ಜಿ ಕೆ ಅಮರೇಶ್, ಮುಖಂಡರಾದ ಜಿ. ಗುರುಸಿದ್ದನಗೌಡ, ಸಾವಜ್ಜಿ ರಾಜೇಂದ್ರ ಪ್ರಸಾದ, ಕೆ ಎಂ ಶಶಿಧರ್, ವಿವಿಧ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...