ಬಳ್ಳಾರಿ | ಎನ್‌ಇಪಿ ವಿರುದ್ಧ ಹೋರಾಟ ಮುಂದುವರೆಯಲಿ: ಕೆ ದೊರೈರಾಜು

Date:

Advertisements

ಪ್ರಜಾಪ್ರಭುತ್ವದ ಆಶಯಗಳಿಗೆ ವಿರೋಧವಾಗಿರುವ, ಅವಕಾಶ ವಂಚಿತರ ಸಮುದಾಯಗಳನ್ನು – ಬಡಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಯುವಂತೆ‌ ಮಾಡುತ್ತಿರುವ‌ ಎನ್‌ಇಪಿ ವಿರುದ್ಧ ವಿದ್ಯಾರ್ಥಿಗಳ ಹೋರಾಟ ಮುಂದುವರೆಯಲಿ ಎಂದು ಪ್ರಗತಿಪರ ಚಿಂತಕ ದೊರೈರಾಜು ಹೇಳಿದರು.

ತುಮಕೂರಿನಲ್ಲಿ ನಡೆದ ಎಐಡಿಎಸ್‌ಒದ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನದ ಬಹಿರಂಗ ಅಧಿವೇಶನ ಉದ್ಘಾಟಿಸಿ ಮಾತನಾಡಿದರು. “ಇಂದು ಸರ್ಕಾರಗಳು ಕಾರ್ಪೊರೇಟ್ ಬಂಡವಾಳಶಾಹಿಗಳ ಕೈಗೊಂಬೆಗಳಂತೆ ನೀತಿಗಳನ್ನು ಜಾರಿಗೆ ತರುತ್ತಿವೆ. ಹೋರಾಟಗಳಿಲ್ಲದೆ ಇದನ್ನು ಸರಿದಾರಿಗೆ ತರಲು ಸಾಧ್ಯವಿಲ್ಲ. ವಿದ್ಯಾರ್ಥಿ ಯುವಜನರೇ ಈ ಹೋರಾಟಗಳ ಜೀವಾಳ ಎಂಬುದನ್ನು ಇತಿಹಾಸವೇ ಸಾಬೀತು ಮಾಡಿದೆ” ಎಂದು ಅಭಿಪ್ರಾಯಪಟ್ಟರು.

ಸಂಘಟನೆಯ ಅಖಿಲ ಭಾರತ ಅಧ್ಯಕ್ಷ ವಿ ಎನ್ ರಾಜಶೇಖರ್ ಮಾತನಾಡಿ, “ಸಾರ್ವಜನಿಕ ಶಿಕ್ಷಣ ಉಳಿಸಿ ಎಂಬ ಘೋಷಣೆಯೊಂದಿಗೆ ಇಡೀ ರಾಜ್ಯಾದ್ಯಂತ ನಡೆದ ಬೃಹತ್ ಚಳುವಳಿಯ ಪ್ರತಿಫಲವಾಗಿ ಪ್ರಸ್ತುತ ರಾಜ್ಯ ಸರ್ಕಾರವು ಎನ್‌ಇಪಿಯನ್ನು ರದ್ದುಗೊಳಿಸಿದೆ. ಆದರೆ ಇದೇ ಸರ್ಕಾರ ಎನ್‌ಇಪಿ ಭಾಗವಾಗಿರುವ ಸರ್ಕಾರಿ‌ ಶಾಲೆಗಳನ್ನು ವಿಲೀನಗೊಳಿಸುವ ಮೂಲಕ ಖಾಸಗಿಯವರಿಗೆ‌ ದತ್ತು ನೀಡಬೇಕೆಂದು ಪ್ರಸ್ತಾಪಿಸಿರುವುದು‌ ಆತಂಕಕಾರಿಯಾಗಿದೆ. ಇದರ ವಿರುದ್ದ ಮತ್ತೆ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಬೃಹತ್ ಚಳವಳಿ ಕಟ್ಟುವ ತುರ್ತು ಅವಶ್ಯಕತೆ‌ ಎದುರಾಗುತ್ತಿದೆ. ವಿದ್ಯಾರ್ಥಿಗಳು ಇದಕ್ಕೆ ಸಜ್ಜಾಗಬೇಕಾಗಿದೆ” ಎಂದು ಕರೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಸರ್ಕಾರಿ ಶಾಲೆಗಳ ವಿಲೀನದ ಪ್ರಸ್ತಾಪ ಅಂಗೀಕರಿಸದಂತೆ ಎಐಡಿಎಸ್‌ಒ ಆಗ್ರಹ

ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, “ಈ ದೇಶದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿಯವರು ದೇಶದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಿಷ್ಠವಾಗಿರಬೇಕೆಂದು ಆಶಿಸಿದ್ದರು. ಅವರ ಈ ಕನಸನ್ನು ನನಸಾಗಿಸುವ ಸಂಕಲ್ಪವನ್ನು ತೆಗೆದುಕೊಳ್ಳುವುದೇ 75ನೇ ಸ್ವಾತಂತ್ರ್ಯ ವರ್ಷಾಚರಣೆಯ ಸಮಾರೋಪದ ನೈಜ ಆಶಯವಾಗಬೇಕಿದೆ” ಎಂದರು.

ಎಐಡಿಎಸ್ಒ ರಾಜ್ಯಾಧ್ಯಕ್ಷೆ ಅಶ್ವಿನಿ ಕೆ ಎಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಐಡಿಎಸ್ಒ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಸೌರವ್ ಘೋಷ್, ರಾಜ್ಯ ಸಮಿತಿಯ ಉಪಾಧ್ಯಕ್ಷ ಹಣಮಂತು, ಖಜಾಂಚಿ‌ ಅಭಯಾ ದಿವಾಕರ್ ಹಾಗೂ ಬಳ್ಳಾರಿ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಸೇರಿದಂತೆ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ವಿದ್ಯಾರ್ಥಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X