ಬಳ್ಳಾರಿ | ಸರ್ಕಾರಿ ಶಾಲೆಗಳ ನಿರ್ವಹಣೆ; ಕಾರ್ಪೊರೇಟ್‌ ದಾನಿಗಳಿಗೆ ನೀಡದಂತೆ ಆಗ್ರಹ

Date:

ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು, ಸರ್ಕಾರ ಕಾರ್ಪೊರೇಟ್ ದಾನಿಗಳಿಗೆ ನೀಡಿರುವುದು ಖಂಡನೀಯ ಎಂದು ಎಐಡಿಎಸ್‌ಒ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.

“ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಖಾಸಗಿ ಕಂಪನಿಗಳು ನೀಡುವ ಸಿಎಸ್ಆ‌ರ್ ಅನುದಾನ ಹೆಚ್ಚಿಸಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಉನ್ನತೀಕರಿಸಿ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾ ಯೋಜನೆ ರೂಪಿಸುವುದಕ್ಕೆ ಸಮಿತಿ ರಚಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವವುದು ಖಂಡನೀಯ” ಎಂದರು.‌

“ಕಾರ್ಪೊರೇಟ್ ದಾನಿಗಳ ಮೇಲೆ ಅವಲಂಬಿತರಾಗಿ ಸರ್ಕಾರಿ ಶಾಲೆಗಳಿಗೆ ಹಣಕಾಸು ನೀಡುವ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ಸರ್ಕಾರದ ಈ ಧೋರಣೆ ಒಳ್ಳೆಯ ಬೆಳವಣಿಗೆಯಂತೆ ಕಾಣುತ್ತಿಲ್ಲ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೇಶದ ಮಕ್ಕಳಿಗೆ ಶಿಕ್ಷಣ ಒದಗಿಸುವುದು ಸರ್ಕಾರದ ಮೂಲ ಜವಾಬ್ದಾರಿ. ಶಿಕ್ಷಣಕ್ಕೆ ಹಣಕಾಸು ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಪರಿಸ್ಥಿತಿ ಕಳೆದ ತಿಂಗಳು ಮಳೆಯ ಪ್ರಭಾವಕ್ಕೆ ಮತ್ತಷ್ಟು ದಯನೀಯ ಸ್ಥಿತಿ ತಲುಪಿದೆ. ಶಾಲೆಗಳ ದುರಸ್ತಿಗೆ ಹಣ ಬೇಕು. ಆದರೆ ಕಾರ್ಪೋರೇಟ್ ಕಂಪನಿಗಳು ಕೊಡುವ ದಾನದ ಹಣವಲ್ಲ. ಈ ರಾಜ್ಯದ ಜನಸಾಮಾನ್ಯರು ಕಟ್ಟುವ ತೆರಿಗೆ ಹಣದಿಂದ ಸರ್ಕಾರಿ ಶಾಲೆಗಳ ನಿರ್ವಹಣೆ ನಡೆಯಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ಅಕ್ರಮ ಆಸ್ತಿ ವಶಕ್ಕೆ

“ಕಾರ್ಪೋರೇಟ್ ಕಂಪನಿಗಳು ಹಣ ನೀಡಿ ಸರ್ಕಾರಿ ಶಾಲೆಗಳ ಮೇಲೆ ಹಕ್ಕು ಸಾಧಿಸುವ ಕನಿಷ್ಠ ಅವಕಾಶವನ್ನೂ ರಾಜ್ಯ ಸರ್ಕಾರ ನೀಡಬಾರದು. ಸರ್ಕಾರಿ ಸಂಸ್ಥೆಗಳಿಗೆ ನೀಡುವ ಹಣಕಾಸನ್ನು ಕ್ರಮೇಣವಾಗಿ ಕಡಿತಗೊಳಿಸಿ ಸ್ವಯಂ-ಹಣಕಾಸು ಸಂಸ್ಥೆಗಳನ್ನಾಗಿ ಮಾಡುವುದು ಎನ್‌ಇಪಿ-2020ರ ಮುಖ್ಯ ಶಿಫಾರಸುಗಳಲ್ಲೊಂದು. ಎನ್‌ಇಪಿ 2020ನ್ನು ರಾಜ್ಯದಲ್ಲಿ ತಿರಸ್ಕರಿಸುತ್ತಿರುವ ಸರ್ಕಾರ ಈ ನೀತಿಯನ್ನೂ ಕೈಬಿಡಬೇಕು” ಎಂದು ಎಐಡಿಎಸ್ಒ ರಾಜ್ಯ ಸಮಿತಿ ಪರವಾಗಿ ಆಗ್ರಹಿಸಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಪ್ರಕಟಣೆಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...