ಬಳ್ಳಾರಿ | ಬೇಸಿಗೆಯಲ್ಲಿ ಮನರೇಗಾ ಕಾರ್ಮಿಕರಿಗೆ ನಿರಂತರ ಕೆಲಸ, ಕೂಲಿ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆಸ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಜನರಿಗೆ ಏಪ್ರಿಲ್‌ 01 ರಿಂದ ₹370ಕ್ಕೆ ಕೂಲಿ ಹೆಚ್ಚಳವಾಗಿದ್ದು, ಬೇಸಿಗೆಯಲ್ಲಿಯೂ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್‌ ತಿಳಿಸಿದ್ದಾರೆ.

“ಮಹಾತ್ಮಗಾಂಧಿ ಮನರೇಗಾ ಯೋಜನೆಯಡಿ ಕೂಲಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ ₹349ರಿಂದ ₹370ಕ್ಕೆ ಪರಿಷ್ಕರಿಸಿ ಆರ್ಥಿಕ ವರ್ಷ 2025-26ನೇ ಸಾಲಿಗೆ ಅನ್ವಯವಾಗುವಂತೆ ಏಪ್ರಿಲ್‌ 01ರಿಂದ ₹370 ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ” ಎಂದು ಹೇಳಿದರು.

“ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6ರ ಅರ್ಜಿಯನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿ, ಮನರೇಗಾ ಯೋಹನೆಯಡಿ ಪ್ರತಿ ಕುಟುಂಬವು ತಮ್ಮ ಗ್ರಾಮದಲ್ಲೇ 100 ದಿನಗಳವರೆಗೆ ಕೂಲಿ ಕೆಲಸದಲ್ಲಿ ಭಾಗವಹಿಸಬೇಕು” ಅವರು ತಿಳಿಸಿದ್ದಾರೆ.

Advertisements

ವಿಶೇಷ ಚೇತನರು ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು:

ಮಹಾತ್ಮಗಾಂಧಿ ಮನರೇಗಾ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ. ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10ರಷ್ಟು ರಿಯಾಯತಿ ನೀಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗ್ಯಾರಂಟಿ ಯೋಜನೆಗಳ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ: ರೆಡ್ಡಿ ಶ್ರೀನಿವಾಸ

ಮನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್‌ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.

ನಮೂನೆ-1 ರಲ್ಲಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜತೆಗೆ ಪಾಸ್ ಪೋಟ್ ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯಿತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X