ಬಳ್ಳಾರಿ | ಏ.1 ರಿಂದ ಮನರೇಗಾ ಕೂಲಿ ₹370ಕ್ಕೆ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್

Date:

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯನ್ನು ಏ.1 ರಿಂದ ₹370ಕ್ಕೆ ಹೆಚ್ಚಳ ಮಾಡಲಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದರು.

- Advertisement -

ಮನರೇಗಾ ಯೋಜನೆಯಡಿ ಪ್ರಸ್ತುತ ವರ್ಷದಲ್ಲಿ ₹349 ಕೂಲಿ ನೀಡುತ್ತಿದ್ದು, ಅದನ್ನು ಪರಿಷ್ಕರಿಸಿ 2025-26ನೇ ಸಾಲಿನ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಜನರು ವಲಸೆ ಹೋಗುವುದನ್ನು ತಪ್ಪಿಸಿ ಗ್ರಾಮದ ಬಡ ಕೂಲಿ ಕಾರ್ಮಿಕರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ, ತಮ್ಮ ಗ್ರಾಮದಲ್ಲೇ 100 ದಿನಗಳವರೆಗೆ ಕೆಲಸದಲ್ಲಿ ತೊಡಗಿಸಿಕೊಳ್ಳಬಹುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಈ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ. ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯತಿ ನೀಡಲಾಗುತ್ತದೆ.

ಮನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್‌ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜೊತೆಗೆ ಪಾಸ್‌ಪೋರ್ಟ್ ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ

ಅರಬ್ಬಿ ಸುಮದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಕರಾವಳಿ, ಮಲೆನಾಡು ಹಾಗೂ...

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ...

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ,...