ಬಳ್ಳಾರಿ | ಮೋದಿಯವರಿಗೆ ಕಣ್ಣು ಕಾಣುತ್ತಿಲ್ಲ: ಶಾಸಕ ನಾರಾ ಭರತ್‌ ರೆಡ್ಡಿ

Date:

ಮೂರು ಬಾರಿ ಗೆದ್ದು ಪ್ರಧಾನಿಯಾಗಿರುವ ನರೇಂದ್ರ ಮೋದಿಯವರಿಗೆ ಕಣ್ಣು ಕಾಣುತ್ತಿಲ್ಲ. ಹೀಗೇ ಆದಲ್ಲಿ ದೇಶದ ಯುವಜನರು ಅವರಿಗೆ ಪಾಠ ಕಲಿಸುವ ದಿನ ದೂರ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಇಂದು ಬಳ್ಳಾರಿಯಲ್ಲಿ ಆಯೋಜಿಸಿದ್ದ ಬೃಹತ್​ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಕೇವಲ ಮುಸ್ಲಿಮರ ಹೋರಾಟ ಅಲ್ಲ. ಇದು ನಮ್ಮೆಲ್ಲರಿಗೆ ಸೇರಿದ ವಿಷಯ. ನಾವೆಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ಮುಸ್ಲಿಮರ ತ್ಯಾಗ ಇದೆ. ಇಂದು ನಾವು ಹಿಂದೂ, ಕ್ರೈಸ್ತ, ದಲಿತ, ಲಿಂಗಾಯತ ಎಂಬ ಧರ್ಮಾಧಾರಿತ ಸಮಾಜದಲ್ಲಿ ಬದುಕುತ್ತಿದ್ದೇವೆ. ಮುಸ್ಲಿಮರ ಮಾತ್ರವಲ್ಲದೆ ಎಲ್ಲಾ ಜನರ ಹಕ್ಕುಗಳ ರಕ್ಷಣೆ ಮಾಡಲು ಎಲ್ಲ ಧರ್ಮಗಳ ಜನರು ಒಗ್ಗಟ್ಟಾಗಬೇಕು” ಎಂದು ಕರೆ ನೀಡಿದರು.

“ಬಿಜೆಪಿ ಸರ್ಕಾರ ಮುಸ್ಲಿಮರ ಹಕ್ಕು ಕಿತ್ತುಕೊಂಡರೆ ನಮ್ಮ ಹಕ್ಕು ಕಿತ್ತುಕೊಂಡಂತೆ ಎಂಬುದನ್ನು ಮರೆಯಬಾರದು ಎಂದ ಅವರು,
ಮಹಾತ್ಮ ಗಾಂಧಿ, ಜವಹರಲಾಲ್ ನೆಹರೂ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಶಕ್ತಿಯೇ ನಮ್ಮ ಇಂದಿನ ಹೋರಾಟಕ್ಕೆ ಪ್ರೇರಣೆಯಾಗಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗದಂತಹ ದೇಶ ಕಾಡುತ್ತಿರುವ ಸಮಸ್ಯೆಗಳಿಂದ ಜನರನ್ನು ಮೂರ್ಖರನ್ನಾಗಿಸಲು ಬಿಜೆಪಿ ಯತ್ನ ನಡೆಸಿದೆ. ಆದರೆ ಜನರು ಮೂರ್ಖರಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 04 21 at 4.07.24 PM

“ಈ ದೇಶದ ಮೇಲೆ ಹಿಂದೂಗಳಿಗೆ ಎಷ್ಟು ಹಕ್ಕಿದೆಯೋ ಮುಸ್ಲಿಮರಿಗೂ ಕೂಡ ಅಷ್ಟೇ ಹಕ್ಕಿದೆ. ಹೋರಾಟ ಮಾಡುವ ಹಕ್ಕು ಕೂಡ ಮುಸ್ಲಿಮರಿಗಿದೆ. ಸಿಎಎ, ಎನ್‌ಆರ್‌ಸಿ, ಹಿಜಾಬ್ ನಂತಹ ವಿಷಯ ಮುಂದಿಟ್ಟು ಮುಖ್ಯ ವಿಷಯಗಳನ್ನು ಮರೆ ಮಾಚಲಾಗುತ್ತಿದೆ. ವಕ್ಫ್ ಬಿಲ್ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಿದೆ” ಎಂದು ಹೇಳಿದರು.

ಪ್ರತಿಭಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಬಿ ನಾಗೇಂದ್ರ, “ವಕ್ಫ್ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರು ಅಷ್ಟೇ ಅಲ್ಲ‌, ಹಿಂದೂಗಳು ಬಂದಿದ್ದಾರೆ. ಇಷ್ಟೊಂದು ಬಿಸಿಲಿನಲ್ಲಿ ಇಷ್ಟೊಂದು ಜನರು ಸೇರಿದ್ದೀರಾ ಅಂದ್ರೆ ಇದು ಎಷ್ಟು ಕರಾಳವಾಗಿದೆ ಎಂದು ಅರ್ಥವಾಗುತ್ತದೆ. ಕಾಂಗ್ರೆಸ್​ನ ಎಲ್ಲಾ ನಾಯಕರು ನಿಮ್ಮ ಜೊತೆ ಇದ್ದೇವೆ. ನಿಮಗೆ ಶಕ್ತಿ ನೀಡಲು ನಾವು ಬಂದಿದ್ದೇವೆ. ಕಾಯ್ದೆಯ ಪ್ರತಿ ಹರಿದು ಹಾಕೋಣ. ಇದನ್ನು ನಾವು ಒಪ್ಪುವುದಿಲ್ಲ. ಇದು ಯಾವುದೇ ಧರ್ಮದ ವಿರುದ್ಧದ ಹೋರಾಟವಲ್ಲ. ಕಾಯ್ದೆ ವಿರುದ್ಧದ ಹೋರಾಟ. ಬಳ್ಳಾರಿಯಲ್ಲಿ ಹಿಂದೂ-ಮುಸ್ಲಿಂ ಅಣ್ಣ ತಮ್ಮಂದಿರಂತೆ ಇದ್ದೇವೆ. ಕಾಯ್ದೆಯನ್ನು ಅನುಷ್ಠಾನ ಮಾಡಲು ಬಿಡಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಳ್ಳಾರಿ | ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಅವಧಿ ವಿಸ್ತರಿಸಲು ರೈತರ ಆಗ್ರಹ

WhatsApp Image 2025 04 21 at 4.07.24 PM 1

ಪ್ರತಿಭಟನೆಯಲ್ಲಿ ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷ ಹುಮಾಯೂನ್ ಖಾನ್, ಮೇಯರ್ ಮುಲ್ಲಂಗಿ ನಂದೀಶ್, ಎ.ಮಾನಯ್ಯ, ಖಾಜಿ ಗುಲಾಂ ಸಿದ್ದೀಕಿ, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಹುಸೇನ್ ಪೀರಾ, ಭಂ ಭಂ ದಾದಾ, ಕಣೇಕಲ್ ಮೆಹಬೂಬಸಾಬ, ಅಲ್ಲಾಬಕಷ್, ಕಾಂಗ್ರೆಸ್ ವಕ್ತಾರ ವೆಂಕಟೇಶ ಹೆಗಡೆ, ಪಾಲಿಕೆಯ ಸದಸ್ಯರಾದ ಜಬ್ಬಾರ್, ನೂರ್ ಮೊಹಮ್ಮದ್, ಆಸಿಫ್, ನಾಜು, ಮಿಂಚು ಸೀನಾ, ಕುಬೇರಾ, ಪೇರಂ ವಿವೇಕ್, ಗಾದೆಪ್ಪ, ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಅಯಾಜ್, ಶಿವರಾಜ್, ಬಿಆರೆಲ್ ಸೀನಾ, ಗೋವಿಂದ ಸೇರಿದಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...