ಬಳ್ಳಾರಿ | ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿ-ಶಿಶು ಸಾವು; ವೈದ್ಯ, ದಾದಿ ವರ್ಗಾವಣೆ

Date:

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಶಿಶು ಸಾವನಪ್ಪಿರುವ ಘಟನೆ ಬಳ್ಳಾರಿ ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಆರೋಪಿ ವೈದ್ಯ ಹಾಗೂ ದಾದಿಯನ್ನು ವರ್ಗಾವಣೆ ಮಾಡಲಾಗಿದೆ. ತಾಲೂಕಿನ ರಾಮಸಾಗರ ಗ್ರಾಮದ ನಿವಾಸಿ ಚಂದ್ರಮ್ಮ (28) ಮೃತ ಬಾಣಂತಿ.

- Advertisement -

ಏನಿದು ಘಟನೆ: ರಾಮಸಾಗರ ಗ್ರಾಮದ ಚಂದ್ರಮ್ಮ ಸೆ. 25ರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡದ್ದರಿಂದ ತವರು ಮನೆ ಬೆಳಗೋಡಹಾಳದಿಂದ ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ. ತಜ್ಞ ವೈದ್ಯರು ಇಲ್ಲದ ಕಾರಣ ಅಲ್ಲಿನ ದಾದಿ ಗರ್ಭಿಣಿಯನ್ನು ದಾಖಲಿಸಿಕೊಂಡು ಪರೀಕ್ಷೆ ನಡೆಸಿದ್ದಾರೆ. ನಂತರ ಖಾಸಗಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿ ರಿಪೋರ್ಟ್ ತಂದು ತೋರಿಸಿದ ಮೇಲೆ ವೈದ್ಯರು ಇದರಲ್ಲಿ ಮಗು ಚೆನ್ನಾಗಿದೆ ಮತ್ತು ನಾರ್ಮಲ್ ಡೆಲಿವರಿಯಾಗಲಿದೆ ಎಂದು ಹೇಳಿದ್ದಾರೆ. ಸಂಜೆವರೆಗೂ ಗರ್ಭಿಣಿ ಕಡೆಗೆ ಗಮನ ಹರಿಸಿಲ್ಲ. ನಂತರ ಹೆರಿಗೆಗೆ ಕರೆದುಕೊಂಡು ಹೋಗಿ ಸಂಜೆ ಹೆರಿಗೆ ಮಾಡಿಸಿದಾಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗು ಸಾವನ್ನಪ್ಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಗು ಜನಿಸಿದಾಗಲೇ ಸಾವನ್ನಪ್ಪಿತ್ತು. ಆದರೆ, ವೈದ್ಯರು ಮಗುವನ್ನು ಕೆಲ ಹೊತ್ತು ಐಸಿಯುನಲ್ಲಿ ಇರಿಸಿ, ನಂತರ ‘ಮಗುವಿನ ಉಸಿರಾಟ ಇಲ್ಲ’ ಎಂದು ಕುಟುಂಬಸ್ತರನ್ನು ಕರೆಸಿ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಬಾಣಂತಿ ಕಡೆಗೆ ಗಮನ ಹರಿಸದ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ತೀವ್ರ ರಕ್ತಸ್ರಾವದಿಂದ ನರಳುವಂತಾಗಿದೆ. ಇನ್ನೇನು ಬಾಣಂತಿಯು ಬದುಕುವುದಿಲ್ಲ ಎಂಬುದು ಅರಿವಿಗೆ ಬಂದಾಗ ಕೇಂದ್ರದ ವೈದ್ಯರು ರಾತ್ರಿ 8ಗಂಟೆ ಸುಮಾರಿಗೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಸರ್ಕಾರ ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಕ: ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್

ಕಂಪ್ಲಿಯಿಂದ ಬಳ್ಳಾರಿ ಬಿಮ್ಸ್‌ಗೆ ರಾತ್ರಿ 9:30ಕ್ಕೆ ದಾಖಲಿಸಿದ ನಂತರ ಬಳ್ಳಾರಿ ಆಸ್ಪತ್ರೆಯ ವೈದ್ಯರು ತಡವಾಗಿ ಬಂದಿದ್ದಕ್ಕೆ ಕುಟುಂಬಸ್ಥರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ, ಕಂಪ್ಲಿಯ ಸಮುದಾಯ ಆರೋಗ್ಯ ಕೇಂದ್ರದ ನಿರ್ಲಕ್ಷ್ಯ ಎಂದು ಬಾಣಂತಿ ಕುಟುಂಬಸ್ಥರು ಹೇಳುತ್ತಿದ್ದಾರೆ. ನಂತರ ಚಿಕಿತ್ಸೆ ನೀಡಿದರೂ ರಕ್ತಸ್ರಾವ ನಿಲ್ಲದ ಪರಿಣಾಮ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3:40 ಗಂಟೆಗೆ ಬಾಣಂತಿ ಚಂದ್ರಮ್ಮ ಸಾವನಪ್ಪಿದ್ದಾರೆ.

ಕಂಪ್ಲಿ ಶಾಸಕ ಜೆ.ಎನ್.ಗಣೇಶ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಶಿಶು ಸಾವನಪ್ಪರುವ ವಿಷಯ ತಿಳಿದು, ರಾಮಸಾಗರದ ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಜತೆಗೆ ನಿರ್ಲಕ್ಷ್ಯವಹಿಸಿದ ವೈದ್ಯ ಹಾಗೂ ನರ್ಸ್‌ಗಳ ವರ್ಗಾವಣೆ ಮಾಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...