ಬಳ್ಳಾರಿ | ಮಗಳನ್ನು ದೇವದಾಸಿ ಪದ್ದತಿಗೆ ದೂಡಲು ತಾಯಿ ಯತ್ನ

Date:

ಮಹಿಳೆಯೊಬ್ಬರು ತನ್ನ ಮಗಳಿಗೆ ಮುತ್ತು ಕಟ್ಟಿಸಿ, ದೇವದಾಸಿ ಎಂಬ ಅನಿಷ್ಠ ಪದ್ದತಿಗೆ ದೂಡಲು ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕರುಗೋಡು ಎಂಬಲ್ಲಿ ನಡೆದಿದೆ. ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ಆಕೆಗೆ ಆಕೆಯ ಪ್ರತಿಕರನೊಂದಿಗೆ ಮದುವೆ ಮಾಡಿಸಿದ್ದಾರೆ.

- Advertisement -

ಯುವತಿ ತಾನು ಪ್ರೀತಿಸುತ್ತಿದ್ದ ಯವಕನೊಂದಿಗೆ ವಿವಾಹವಾಗುವುದಾಗಿ ತನ್ನ ತಾಯಿಯ ಬಳಿ ಪ್ರಸ್ತಾಪಿಸಿದ್ದರು. ಯುವತಿಯ ಪ್ರೀತಿಯನ್ನು ವಿರೋಧಿಸಿದ ತಾಯಿ, ಆಕೆಯನ್ನು ದೇವದಾಸಿ ಪದ್ದತಿಗೆ ದೂಡಲು ಮುಂದಾಗಿದ್ದರು ಎಂದು ಆರೋಪಿಸಲಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಾಯಿಯ ಧೋರಣೆಯಿಂದ ಆತಂಕಗೊಂಡ ಯುವತಿ ‘ದೇವದಾಸಿ ವಿಮೋಚನಾ ಸಂಘಟನೆ’ಯನ್ನು ಸಂಪರ್ಕಿಸಿ, ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ಕುರುಗೋಡು ಠಾಣೆಯ ಪಿಎಸ್‌ಐ ಸುಪ್ರಿತ್ ಅವರು ಯುವತಿಯ ಮನೆಗೆ ತೆರಳಿ, ಆಕೆಯನ್ನು ರಕ್ಷಿಸಿದ್ದಾರೆ. ಕುರುಗೋಡಿನ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಆಕೆಯ ಪ್ರಿಯಕರನೊಂದಿಗೆ ವಿವಾಹ ಮಾಡಿಸಿದ್ದಾರೆ.

ಗಮನಿಸಿ: ದೇವದಾಸಿ ಪದ್ದತಿ ಸಮಾಜದ ಅತ್ಯಂತ ಅನಿಷ್ಠ ಪದ್ದತಿ. ಹೆಣ್ಣು ಮಕ್ಕಳನ್ನು ದೇವದಾಸಿಯಾಗಿ ಮಾಡಿ ದೇವರ ಸೇವೆ ಸಲ್ಲಿಸುತ್ತೇವೆ ಎಂಬ ಮೌಡ್ಯ ಸಮಾಜದಲ್ಲಿ ಬೇರೂರಿದೆ. ಆದರೆ, ಅದು ದೇವರಿಗೆ ಸೇವೆ ಅಲ್ಲ. ಬದಲಾಗಿ, ಅವರ ಬದುಕು ನಾಶಮಾಡುವ ಶೋಷಣೆಯ ಪದ್ದತಿ. ಇದು ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಭಾರತ ಸರ್ಕಾರವು 1988ರಲ್ಲಿಯೇ ದೇವದಾಸಿ ಪದ್ಧತಿಯನ್ನು ನಿಷೇಧಿಸಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...