ಬಳ್ಳಾರಿ | ಗುಗ್ಗರಹಟ್ಟಿ ಹತ್ಯೆ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ: ಎಸ್‌ಪಿ

Date:

ಬಳ್ಳಾರಿ ನಗರದ ಗುಗ್ಗರಹಟ್ಟಿ ಪದೇಶದಲ್ಲಿ ಬುಧವಾರ ರಾತ್ರಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ವಿಚಾರಗಳು ಕಂಡುಬಂದಿಲ್ಲ. ಬದಲಾಗಿ ವೈಯಕ್ತಿಕ ಮನಸ್ತಾಪಗಳಿಂದ ಮೆಹಬೂಬ್ ಬಾಷಾ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಎಸ್‌ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಳ್ಳಾರಿ ನಗರದ ಗುಗ್ಗರಹಟ್ಟಿ ಪದೇಶದಲ್ಲಿ ಜುಲೈ 19ರಂದು ಮನೆಯ ಹತ್ತಿರ ಸುಮಾರು ನೂರು ಮೀಟರ್ ಅಂತರದಲ್ಲಿ ಮೆಹಬೂಬ್ ಬಾಷಾ ಅಲಿಯಾಸ್ ಕಾರ್ಪೆಂಟರ್ ಬಾಷಾ ಎಂಬ ವ್ಯಕ್ತಿಯ ಹತ್ಯೆಯಾಗಿತ್ತು. ಕೋಳಿ ಅನ್ವ‌ರ್‌, ಅಲ್ತಾಫ್ ಮತ್ತು ಸಿರಾಜ್ ಎಂಬ ಮೂವರು ವ್ಯಕ್ತಿಗಳು ಸೇರಿ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದರು” ಎಂದು ತಿಳಿಸಿದರು.

“ಈ ಘಟನೆಯ ಹಿಂದೆ ಯಾವುದೇ ರಾಜಕೀಯದ ದುರುದ್ದೇಶವಿರುವುದು ಕಂಡು ಬಂದಿಲ್ಲ. ಈ ಹಿಂದೆ ನಾಲ್ವರು ಸೇರಿ ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದರು. ವೈಯಕ್ತಿಕ ಮನಸ್ತಾಪಗಳಿಂದ ಎಲ್ಲರೂ ಬೇರೆಯಾಗಿ ವ್ಯವಹಾರ ಮಾಡುತ್ತಿದ್ದರು. ಮೆಹಬೂಬ್‌ ಬಾಷಾನ ವ್ಯವಹಾರ ಕ್ಷಿಪ್ರಗತಿಯಲ್ಲಿ ಏರುಮುಖವಾದದ್ದನ್ನು ಸಹಿಸದ ದುಷ್ಕರ್ಮಿಗಳು ದ್ವೇಷದಿಂದ ಹತ್ಯೆ ಮಾಡಿದ್ದಾರೆ. ಇವರ ನಡುವೆ ಯಾವುದೇ ರಾಜಕೀಯ ವಿಚಾರ ಕಂಡುಬಂದಿಲ್ಲ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಶ್ರೀನಿವಾಸಪುರ l ದಲಿತ ವಿದ್ಯಾರ್ಥಿ ಕೊಲೆ; ಇಬ್ಬರ ಬಂಧನ

“ಮೆಹಬೂಬ್ ಬಾಷಾ ಎಂಬುವವರ ಮಗನ ಹುಟ್ಟುಹಬ್ಬ ಇದ್ದ ಕಾರಣ ಕೇಕ್ ತಂದು ಮನೆಯಲ್ಲಿಟ್ಟು ಹೊರಗಡೆ ಬಂದ ಸಯಮದಲ್ಲಿ ಹೊಂಚಿ ಹಾಕಿ ಕುಳಿತ್ತಿದ್ದ ದುಷ್ಕರ್ಮಿಗಳು ಏಕಾಏಕಿ ಮುಗಿಬಿದ್ದು ಮೊದಲು ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ಮೆಹಬೂಬ್ ಬಾಷಾ ನೆಲಕ್ಕೆ ಬೀಳುತ್ತಲೇ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾರೆ. ಸ್ಥಳೀಯರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಷಾನನ್ನು ಟಾಮಾ ಕೇರ್ ಸೆಂಟರ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೆಹಬೂಬ್ ಬಾಷಾ ಅಂದು ರಾತ್ರಿ 12ಕ್ಕೆ ಮೃತಪಟ್ಟಿದ್ದರು” ಎಂದು ಅವರು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...