ಶಾಲಾ ಕಲಿಕಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಅವಶ್ಯಕತೆಯಿದೆ ಎಂದು ಎನ್‌ಎಸ್‌ಎಸ್ ಅಧಿಕಾರಿ ಕುಬೇರ್ ಸುಗುಟ್ ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಅರೋಗ್ಯ ಕೇಂದ್ರ ನಿಮ್ಹಾನ್ಸ್ ಅಡಿಯಲ್ಲಿ ಬರುವ ಬಳ್ಳಾರಿಯ ಯುವಸ್ಪಂದನ ಕೇಂದ್ರದಿಂದ ಹಮ್ಮಿಕೊಂಡಿದ್ದ ಜೀವನ ಕೌಶಲ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.
“ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ವೃತ್ತಿ, ವ್ಯಕ್ತಿತ್ವ ಮತ್ತು ಬೆಳವಣಿಗೆ, ಜೀವನ ಶೈಲಿ, ಸುರಕ್ಷತೆ, ಲಿಂಗ ಮತ್ತು ಲೈಂಗಿಕತೆ ಹಾಗೂ ಸಂಬಂಧಗಳಂತಹ ಆರು ವಿಷಯಗಳ ಬಗ್ಗೆ ತಿಳಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ತುಂಬಾ ಅವಶ್ಯಕತೆ ಇದೆ” ಎಂದು ತಿಳಿಸಿಕೊಟ್ಟರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಲ್ಡೋಟಾ ಕೈಗಾರಿಕೆ ವಿಸ್ತರಣೆಗೆ ಜನರ ವಿರೋಧ; ಕಾರ್ಖಾನೆ ಸಿದ್ಧತೆ ನಿಲ್ಲಿಸುವಂತೆ ಸಿಎಂ ಸೂಚನೆ
ಯುವಸ್ಪಂದನ ಕೇಂದ್ರದ ತಾಲೂಕು ಯುವ ಪರಿವರ್ತಕ ಖಾಸಿಮ್ ಹಳೇಕೋಟೆಯವರು ಯುವಸ್ಪಂದನದ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು, ಶಿಕ್ಷಕರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.