ಬಳ್ಳಾರಿ | ಸುಳ್ಳು ಹೆಸರಿನಲ್ಲಿ ತಲೆಮರೆಸಿಕೊಂಡಿದ್ದ ಪಿಎಫ್‌ಐ ಮುಖಂಡ ಬಂಧನ

Date:

ಪಿಎಫ್‌ಐ ಕಾರ್ಯಕರ್ತರಿಗೆ ಸಶಸ್ತ್ರ ತರಬೇತಿ ನೀಡುತ್ತಿದ್ದ ಆರೋಪದ ಮೇಲೆ ಪಿಎಫ್‌ಐ ಮುಖಂಡ ನೊಸಂ ಮಹಮದ್ ಯೂನುಸ್ (33)ನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬಳ್ಳಾರಿಯ ಕೌಲ್‌ಬಜಾರ್‌ ಪ್ರದೇಶದಲ್ಲಿ ಸುಳ್ಳು ಹೆಸರಿನಲ್ಲಿ ಹಲವು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮೂಲತಃ ಆಂಧ್ರಪ್ರದೇಶದ ನಂದ್ಯಾಲದವರಾದ ನೊಸಂ ಮಹಮದ್ ಯೂನುಸ್ ನಿಜಾಮಾಬಾದ್ ಭಯೋತ್ಪಾದನೆ ಪಿತೂರಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನೂ ಎದುರಿಸುತ್ತಿದ್ದಾರೆ. ಆ ಪ್ರಕರಣ ಸಂಬಂಧ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆತನ ನಿವಾಸದ ಮೇಲೆ ಎನ್ಐಎ ದಾಳಿ ನಡೆಸಿತ್ತು. ಆಗ, ಆತ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಳಿಕ ತನ್ನ ಕುಟುಂಬದೊಂದಿಗೆ ಬಳ್ಳಾರಿಗೆ ಬಂದು ಕೌಲ್‌ಬಜಾರ್ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದರು. ತನ್ನ ಹೆಸರನ್ನು ಬಷೀರ್‌ ಎಂದು ಬದಲಿಸಿಕೊಂಡು ಪ್ಲಂಬರ್ ಕೆಲಸ ಮಾಡುತ್ತಿದ್ದರು. ಪಿಎಫ್‌ಐ ಸಂಘಟನೆಗೆ ಸೇರಿಕೊಂಡಿರುವ ಅಮಾಯಕ ಯುವಕರಿಗೆ ಸಶಸ್ತ್ರ ತರಬೇತಿ ನೀಡುತ್ತಿದ್ದರೆಂದು ಆರೋಪಿಸಲಾಗಿದೆ.

ವಿಚಾರಣೆ ಸಮಯದಲ್ಲಿ ಬಂಧಿತ ಯೂನುಸ್‌, ಇದೇ ಪ್ರಕರಣದ ಮತ್ತೊಬ್ಬ ಆರೋಪಿ ಇಲಿಯಾಸ್ ಎಂಬಾತನ ಬಗ್ಗೆ ಸುಳಿವು ನೀಡಿದ್ದಾರೆ. ಇಲಿಯಾಸ್‌ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಪ್ರಕರಣದ ಸಂಬಂಧ ತೆಲಂಗಾಣ ಪೊಲೀಸರು 2022ರ ಜುಲೈ 4ರಂದು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ತನಿಖೆಯನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಎನ್ಐಎ ಮರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈವರಗೆ 16 ಆರೋಪಿಗಳ ವಿರುದ್ಧ 2 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆಗೆ ಚೂರಿ ಇರಿದ ಅಳಿಯ

ನಿಜಾಮಾಬಾದ್‌ ಪ್ರಕರಣದಕ್ಕೆ ಸಂಬಂಧಿಸಿ ಈಗಾಗಲೇ ಶೇಕ್ ಶಾದುಲ್ಲಾ (40), ಮೊಹಮ್ಮದ್ ಇಮ್ರಾನ್ (22) ಮತ್ತು ಮೊಹಮ್ಮದ್ ಅಬ್ದುಲ್ ಮೊಬಿನ್ (27) ಎಂಬ ಮೂವರನ್ನು ಬಂಧಿಸಲಾಗಿದೆ. ಇವರು ಸ್ಥಳೀಯ ಮುಸ್ಲಿಂ ಯುವಕರನ್ನು ಗುರುತಿಸಿ, ಅವರನ್ನು ದುರ್ಬೋಧನೆಯ ಮೂಲಕ ಪ್ರೇರೇಪಿಸಿ ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದ್ದುದು ಗೊತ್ತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...