ಬಳ್ಳಾರಿ | ಅಂಬೇಡ್ಕರ್‌ಗೆ ಅವಮಾನ: ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಸಂಸತ್‍ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಅಮಿತ್ ಶಾ ವಿರುದ್ಧ ಸ್ಥಳೀಯ ವಿವಿಧ ಸಂಘಟನೆ ಪದಾಧಿಕಾರಿಗಳು ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಗಂಗಾ ನಗರದ ಗಂಗಾ ಕಮಾನ್‍ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಯ ಮೂಲಕ ಸಾಗಿ ಡಾ. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಳಿಕ ಕರ್ನಾಟಕ ಜನಶಕ್ತಿಯ ರಾಜ್ಯ ಸಮಿತಿ ಸದಸ್ಯ ವಸಂತರಾಜ ಕಹಳೆ ಮಾತನಾಡಿ, ಗೃಹ ಸಚಿವರು ತಮ್ಮ ಸ್ಥಾನದ ಘನತೆ ಮರೆತು ಜನರ ಭಾವನೆಗಳಿಗೆ ಧಕ್ಕೆಯಾಗುವಂತೆ ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದು ಖಂಡನಾರ್ಹ. ಅಮಿತ್‍ ಷಾ ಅವರು ಅಂಬೇಡ್ಕರ್ ನೀಡಿದ ಸಂವಿಧಾನದಡಿ ಅಧಿಕಾರಗ್ರಹಣ ಮಾಡಿ ಅಂಬೇಡ್ಕರ್ ವಿರುದ್ಧವೇ ಮಾತನಾಡಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ದಲಿತ ಮುಖಂಡ ಸಣಾಪುರ ಮರಿಸ್ವಾಮಿ ಮಾತನಾಡಿ, ಅಮಿತ್ ಶಾ ಅವರನ್ನು ಗೃಹ ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

63 1

ಕರ್ನಾಟಕ ಜನಶಕ್ತಿ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ, ಭೀಮ್ ಆರ್ಮಿ, ದಲಿತ ಸಂಘರ್ಷ ಸಮಿತಿ, ಆದಿ ಜಗದ್ಗುರು ರೇಣುಕಾಚಾರ್ಯ ಸೇವಾ ಟ್ರಸ್ಟ್, ಅಸ್ಪೃಶ್ಯ ವಿಮೋಚನಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನೇತೃತ್ವ ವಹಿಸಿದ್ದರು. ನಂತರ ತಹಶೀಲ್ದಾರ್ ಎಸ್.ಶಿವರಾಜ ಅವರಿಗೆ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ರಾಜೀನಾಮೆಗೆ ಸಂವಿಧಾನ ಸಂರಕ್ಷಣಾ ವೇದಿಕೆ ಆಗ್ರಹ

ಮುಖಂಡರಾದ ಕೆ.ಲಕ್ಷ್ಮಣ, ಶಾಂತಪ್ಪ ಪೂಜಾರಿ, ಈ.ಧನಂಜಯ, ರವಿ ಮಣ್ಣೂರು, ಸಿ.ಬಸವರಾಜ, ಟಿ.ಎಚ್.ಎಂ. ರಾಜಕುಮಾರ್, ಎನ್.ಬುಜ್ಜಿಕುಮಾರ್, ಮುದ್ದಾಪುರ ಗೋಪಾಲ, ಎಸ್.ಬಸವರಾಜ, ಎಚ್.ಕುಮಾರಸ್ವಾಮಿ, ಮೆಟ್ರಿ ಬಸಪ್ಪ, ಯಲ್ಲಪ್ಪ, ಸಾಮಿಲ್ ವಿ.ಶೇಖಪ್ಪ, ವಿ.ಗೋವಿಂದಪ್ಪ, ಸಿ.ರಾಮಪ್ಪ, ಶ್ರೀನಿವಾಸ್ ಹಾಜರಿದ್ದರು.

333 6
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...