ಬಳ್ಳಾರಿ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಶೋಧಕ್ಕೆ ತಂಡ ರಚನೆ

Date:

Advertisements

ಅಪರಿಚಿತನೊಬ್ಬ ಐದು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಸೋಮವಾರ ನಡೆದಿದ್ದು, ಆರೋಪಿ ವಿರುದ್ಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆ ಪ್ರಕರಣ ದಾಖಲಾಗಿದೆ.

ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಜಾರ್ಖಂಡ್ ಮೂಲದ ದಂಪತಿಯ ಮಗು ಸೋಮವಾರ ಮನೆ ಬಳಿ‌ ಮಕ್ಕಳೊಂದಿಗೆ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ಅತ್ಯಾಚಾರ ದೌರ್ಜನ್ಯ ಎಸಗಿದ್ದಾನೆ.

“ಜಿಲ್ಲಾ ವರಿಷ್ಠಾಧಿಕಾರಿಗಳು ಈಗಾಗಲೇ ಕಾರ್ಯಾಚರಣೆಗೆ ಎರಡು ತಂಡಗಳನ್ನು ರಚನೆ ಮಾಡಿದ್ದು, ಸಿಸಿ ಟಿವಿಯ ಸೆರೆಯಾದ ಸುಳಿವಿನ ಮೂಲದಿಂದ ಆರೋಪಿ ಪತ್ತೆ ಕಾರ್ಯಾಚರಣೆ ಚುರುಕಾಗಿ ನಡೆಯುತ್ತಿದೆ” ಎಂದು ತೋರಣಗಲ್ಲು ಪಿಎಸ್‌ಐ ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಹೆರಿಗೆಗಾಗಿ ಪತ್ನಿಯನ್ನು ಕರೆತಂದಿದ್ದ ಪತಿ ಆಸ್ಪತ್ರೆ ಆವರಣದಲ್ಲೇ ಸಾವು

ಲೈಂಗಿಕ ದೌರ್ಜನ್ಯದಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿದ್ದು, ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಕೂಡಲೇ ಮಗುವನ್ನು ದಾಖಲಿಸಲಾಗಿತ್ತು.

ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು, ಮಗು ಅಪಾಯದಿಂದ ಪಾರಾಗಿದೆ. ಮಗುವಿನ ಮೇಲೆ ಅತ್ಯಾಚಾರ ನಡೆದಿರುವುದನ್ನು ಆಸ್ಪತ್ರೆ ಮೂಲಗಳು ದೃಢಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X