ಬಳ್ಳಾರಿ | ಜೂ.25ರೊಳಗೆ ತುಂಗಭದ್ರಾ ಜಲಾಶಯದ ಮೂರೂ ಕಾಲುವೆಗಳಿಗೆ ನೀರು ಬಿಡಿ: ಕರೂರ್ ಮಾಧವ ರೆಡ್ಡಿ

Date:

ತುಂಗಾಭದ್ರಾ ಜಲಾಶಯದಲ್ಲಿ ಈ ಹಿಂದೆ ಸಂಗ್ರಹಿಸಿದಂತೆ 100 ಟಿಎಂಸಿ ನೀರನ್ನು ಸಂಗ್ರಹಿಸಲು ಸಾಧ್ಯವಿಲ್ಲ. ಕೇವಲ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹಿಸಬಹುದು. ಜಲಾಶಯದಲ್ಲಿ 25-30 ಟಿಎಂಸಿ ನೀರು ಸಂಗ್ರಹವಾದರೆ ಜೂನ್ 25ರೊಳಗೆ ಜಲಾಶಯದ ಮೂರೂ ಕಾಲುವೆಗಳಿಗೆ ನೀರನ್ನು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಆರ್  ಕರೂರು ಮಾಧವ ರೆಡ್ಡಿ ತುಂಗಭದ್ರಾ ಮಂಡಳಿಯ ಅಧ್ಯಕ್ಷರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದರು.

- Advertisement -

ನಗರದ ಮುಂಡ್ಲೂರು ರಾಮಪ್ಪ ಸಭಾಂಗಣದಲ್ಲಿ ರೈತ ಸಂಘಟನೆಗಳೊಂದಿಗೆ ಪತ್ರಿಕಾಗೋಷ್ಟಿ ನಡೆಸಿ, ರೈತರ ಸಂಕಷ್ಟಗಳ ಕುರಿತು ಜಲಾಶಯ ಮಂಡಳ ಹಾಗೂ ಅಧ್ಯಕ್ಷರಿಗೆ ಮನದಟ್ಟು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಮಾಧವರೆಡ್ಡಿ ಮಾತನಾಡಿ, “ತುಂಗಭದ್ರಾ ಜಲಾಶಯದ 33 ಗೇಟ್‌ಗಳು ಶಿಥಿಲಗೊಂಡಿದ್ದು, ಅದರಲ್ಲಿ ಕಳೆದ ವರ್ಷ 19ನೇ ಗೇಟ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಇದು ಸಂಬಂಧಿಸಿದ ಅಧಿಕಾರಿಗಳಿಗೆ ಗೊತ್ತಿದ್ದರೂ, ಗೇಟನ್ನು ಈವರೆಗೆ ದುರಸ್ತಿ ಮಾಡಿಲ್ಲ, ಹೊಸ ಗೇಟನ್ನೂ ಅಳವಡಿಸಿಲ್ಲ. ಜಲಾಶಯಕ್ಕೆ ಅಂದು ಅಳವಡಿಸಿದ ತಾತ್ಕಾಲಿಕ ಗೇಟ್‌ನ್ನೇ ಇಂದಿಗೂ ಉಳಿಸಿಕೊಂಡು ಹೋಗಲಾಗುತ್ತಿದೆ” ಎಂದರು.

“ತುಂಗಭದ್ರಾ ಜಲಾಶಯದ ಹಾಳಾಗಿರುವ ಗೇಟ್‌ಗಳನ್ನು ಬದಲಾಯಿಸುವ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆಯೆಂದು ಮಂಡಳಿಯ ಅಧ್ಯಕ್ಷ ಶಿವರಾಜ್ ತಂಗಡಿಗಿ ತಿಳಿಸಿದ್ದಾರೆ. ಟೆಂಡರ್ ಕರೆದರೂ ಕೂಡಾ ಇಂದಿಗೂ ಗೇಟ್ ಅಳವಡಿಸುವ ಕಾರ್ಯ  ಆರಂಭವಾಗಿಲ್ಲ. ಇದರಿಂದ ಜಲಾಶಯದ ಮೂರು ಕಾಲುವೆಗಳ ಮತ್ತು ನದಿ ಪಾತ್ರದ ಜನರು ಕೃಷಿ ಚಟುವಟಿಕೆ ನಡೆಸಲು ಆತಂಕಗೊಂಡಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

“5 ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಬೋರ್ಡ್‌ನ ಅಧ್ಯಕ್ಷರು ಸದಸ್ಯರುಗಳು ಸೇರಿ ಮೂರೂ ಕಾಲುವೆಗಳಿಗೆ ಯಾವಾಗ ನೀರು ಬಿಡಲಾಗುತ್ತದೆ, ಎಲ್ಲಿಯವರೆಗೆ ನೀರು ಬಿಡಲಾಗುತ್ತದೆ? ಎಂಬುದನ್ನು ಖಚಿತಪಡಿಸಬೇಕು. ಇದರಿಂದ ಮೂರು ಕಾಲುವೆಗಳ ಐದು ಜಿಲ್ಲೆಗಳ ರೈತರಿಗೆ, ನೀರು ಲಭ್ಯವಾಗುವ ಆಧಾರದ ಮೇಲೆ ಬೆಳೆಗಳನ್ನು ಬಿತ್ತಲು ಅನುಕೂಲವಾಗುತ್ತದೆ. ತುಂಗಭದ್ರಾ ಜಲಾಶಯದ ಮಂಡಳಿ ಶೀಘ್ರದಲ್ಲೇ ನೀರು ಬಿಡುವ ಮತ್ತು ಬಂದ್ ಮಾಡುವ ದಿನಾಂಕವನ್ನು ರೈತರಿಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಬೇಕು” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಏಳು ತಿಂಗಳಿಂದ ಕೈಸೇರದ ವೇತನ; ನ್ಯೂ ಮಿನರ್ವ ಮಿಲ್ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

“ಕಳೆದ ವರ್ಷ ಈ ಜಲಾಶಯ ಪಾತ್ರದ ರೈತರು 2 ಲಕ್ಷ ಕ್ವಿಂಟಲ್ ಒಣ ಮೆಣಸಿನಕಾಯಿ ಬೆಳೆಯನ್ನು ಬೆಳೆದಿದ್ದರು. ಆದರೀಗ ಈವರೆಗೂ ಮೆಣಸಿನಕಾಯಿ ಬೀಜವನ್ನು ಖರೀದಿಸಿರುವುದಿಲ್ಲ ಹಾಗೂ ಸಸಿಯನ್ನೂ ಹಾಕಿರುವುದಿಲ್ಲ. ಇದರಿಂದ ರೈತರು ಆತಂಕಗೊಂಡು ಮೆಕ್ಕೆಜೋಳ ಮತ್ತು ಜೋಳವನ್ನು ಬಿತ್ತುವ ಯೋಚನೆಯಲ್ಲಿದ್ದಾರೆ. ದಯವಿಟ್ಟು ಮಂಡಳಿಯ ಅಧಿಕಾರಿಗಳು ಯಾವಾಗ ಕಾಲುವೆಗಳಿಗೆ ನೀರು ಬಿಡಲಾಗುತ್ತದೆ ಹಾಗೂ ಎಲ್ಲಿವರೆಗೂ ಬಿಡಲಾಗುತ್ತದೆ” ಎಂದು ಪತ್ರಿಕಾ ಮಾಧ್ಯಮದಲ್ಲಿ ಪ್ರಕಟಿಸಲು ಒತ್ತಾಯಿಸಿದರು.

ಲೇಪಾಕ್ಷಿ ಪಂಪನಗೌಡ, ಬಸವರಾಜ ಸ್ವಾಮಿ, ಉಮಾಪತಿ ಗೌಡ, ವಿಶ್ವನಾಥ್ ಕೆ ವಿ, ತಿಮ್ಮಾರೆಡ್ಡಿ ಓಂಕಾರಪ್ಪ, ಪಂಪನಗೌಡ, ಸುರೇಂದ್ರ, ಸಂಜೀವ ರೆಡ್ಡಿ ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...