ಬಳ್ಳಾರಿ | ಜೂ.16 ರಂದು ಅಕ್ಕಿ, ಗೋಧಿ ಬಹಿರಂಗ ಹರಾಜು

Date:

Advertisements

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾದ 4550.74 ಕ್ವಿಂಟಾಲ್ ಅಕ್ಕಿ ಮತ್ತು 63.20 ಕ್ವಿಂಟಾಲ್ ಗೋಧಿಯನ್ನು ಜೂ.16 ರಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಸಗಟು ಗೋದಾಮುನಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಆಸಕ್ತಿಯುಳ್ಳ ಬಿಡ್ಡುದಾರರು ಷರತ್ತುಗಳೊಂದಿಗೆ ಪಾಲ್ಗೊಳ್ಳಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಷರತ್ತುಗಳು:

1.ಪ್ರತಿಯೊಬ್ಬ ಬಿಡ್ಡುದಾರರು ರೂ.15,00,000/- ಮುಂಗಡ ಭದ್ರತಾ ಠೇವಣಿ ಮೊತ್ತವನ್ನು ಸಹಾಯಕ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಅನೌಪಚಾರಿಕ ಪಡಿತರ ಪ್ರದೇಶ, ಬಳ್ಳಾರಿ ಇವರ ಹೆಸರಲ್ಲಿ ಡಿಡಿಯನ್ನು ಜೂ.13 ರಂದು ಸಂಜೆ 05.30 ರೊಳಗೆ ಪಾವತಿಸಿ, ಹರಾಜಿನಲ್ಲಿ ಭಾಗವಹಿಸಬೇಕು. ನಂತರ ಬಂದ ಡಿಡಿ ಗಳನ್ನು ಸ್ವೀಕರಿಸುವುದಿಲ್ಲ.

Advertisements

      2.ಈ ಹರಾಜಿನಲ್ಲಿ ಸರ್ಕಾರ ಖರೀದಿ ಮಾಡುವ ಓ.ಎಂ.ಎಸ್(ಡಿ) ದರ ನಿಗಧಿಪಡಿಸಲಾಗಿದೆ. ಈ ಮೊತ್ತಕ್ಕಿಂತ ಕಡಿಮೆ ಮೊತ್ತ ಕೂಗಿದಲ್ಲಿ ಹಾಗೂ ಹರಾಜು ಸಮಯದಲ್ಲಿ ಬಿಡ್ಡುದಾರರ ಸಂಖ್ಯೆ ಕಡಿಮೆ ಇದ್ದಲ್ಲಿ ಹರಾಜು ಮಾಡುವ ಅಥವಾ ಹರಾಜು ಮಾಡುವ ಪ್ರಕ್ರಿಯೆಯನ್ನು ಮುಂದೂಡುವ ಅಧಿಕಾರ ಹೊಂದಿರುತ್ತದೆ. ಎಂದು ತಿಳಿಸಲಾಗಿದೆ.

      3.ಸವಾಲುದಾರರು ಹರಾಜಿನಲ್ಲಿ ಗೊತ್ತುಪಡಿಸಿದ ಸಮಯಕ್ಕಿಂತ ಅರ್ಧಗಂಟೆ ಮುಂಚಿತವಾಗಿ ಭಾಗವಹಿಸಬೇಕು. ಅಗತ್ಯ ವಸ್ತುಗಳು ಸಗಟು, ಚಿಲ್ಲರೆ ವ್ಯಾಪಾರಸ್ಥರು, ಕಮಿಷನ್ ಏಜೆಂಟರು, ಅಕ್ಕಿ ಗಿರಣಿ ಮಾಲಿಕರು ಹಾಗೂ ದೊಡ್ಡ ಪ್ರಮಾಣದ ಬಳಿಕೆದಾರರ ಸಂಸ್ಥೆಗಳು ಹರಾಜಿನಲ್ಲಿ ಭಾಗವಹಿಸಬಹುದು.

      4.ಪಧಾರ್ಥಗಳನ್ನು ಎಲ್ಲಿದಿಯೋ ಅಲ್ಲೆ ಹಾಗೂ ಹೇಗಿವೆಯೋ ಹಾಗೇ ಷರತ್ತಿನಡಿ ಹರಾಜು ಮಾಡಲಾಗುತ್ತಿರುವುದರಿಂದ ಹರಾಜಿನಲ್ಲಿ ಭಾಗವಹಿಸುವವರು ಅದಕ್ಕೂ ಮುನ್ನ ಜೂ.16ರಂದು 10 ಗಂಟೆಗೆ ಕೆಎಫ್‌ಸಿಎಸ್‌ಸಿ ಸಗಟು ಕೇಂದ್ರ, ಬಳ್ಳಾರಿಗೆ ಭೇಟಿ ನೀಡಿ ಅಕ್ಕಿಯ ಪರಿಶೀಲನೆ ಮಾಡಿಕೊಳ್ಳಬಹುದು. ಹರಾಜಿನಲ್ಲಿ ಭಾಗವಹಿಸುವವರು ತಮ್ಮ ವ್ಯಾಪಾರ ನೋಂದಣಿ ಪತ್ರ,‌ ಸಂಸ್ಥೆಯ ನೋಂದಣಿ ಪತ್ರ, ಆಧಾರ್ ಹಾಗೂ ಜಿಎಸ್‌ಟಿ ದಾಖಲೆಗಳನ್ನು ನೋಂದಣಿ ಸಮಯದಲ್ಲಿ ಹಾಜರುಪಡಿಸತಕ್ಕದ್ದು ಹಾಗೂ ಇಲಾಖೆಯ ಕಾನೂನಿಗೆ ಒಳಪಟ್ಟಿರಬೇಕು.

      5.ಹರಾಜಿನಲ್ಲಿ ಹೆಚ್ಚಿನ ದರದಲ್ಲಿ ಕೂಗಿದ ಬಿಡ್ಡುದಾರರ ದರಗಳನ್ನು ಜಿಲ್ಲಾಧಿಕಾರಿಯವರು ಅನುಮೋದಿಸಿದ ನಂತರ ಬಿಡ್ ಒಟ್ಟು ಮೌಲ್ಯವನ್ನು ಸರ್ಕಾರದ ಲೆಕ್ಕ ಶಿರ್ಷಿಕೆಗೆ ನಿಗಧಿತ ಅವಧಿ ಒಳಗಾಗಿ ಜಮಾ ಮಾಡಿ ಚಲನ್ ನ್ನು ಹಾಜರು ಪಡಿಸಿದ ನಂತರ ಹರಾಜಾದ ಅಕ್ಕಿಯನ್ನು ಎತ್ತುವಳಿಗೆ ಅವಕಾಶ ನೀಡಲಾಗುವುದು.

      6.ಅಂತಿಮ ಹರಾಜನ್ನು ಒಪ್ಪಿಕೊಳ್ಳುವುದು ಅಥವಾ ತಿರಸ್ಕರಿಸುವ ಹಕ್ಕನ್ನು ಅಧಿಕಾರಿಗಳು ಹೊಂದಿರುತ್ತಾರೆ. ಬಹಿರಂಗ ಹರಾಜು ಆದ ಅಕ್ಕಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಆದೇಶ ನೀಡಿದ ಮೂರು ದಿನಗಳಲ್ಲಿ ಕೆಎಫ್‌ಸಿಎಸ್‌ಸಿ, ಬಳ್ಳಾರಿ ಇವರರಿಂದ ಎತ್ತುವಳಿ ಮಾಡಬೇಕು. ಎತ್ತುವಳಿ ಮಾಡಲು ವಿಳಂಬವಾದಲ್ಲಿ ತಮ್ಮ ಇಎಂಡಿ ಮೊತ್ತವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಲಾಗುವುದು ಎಂದು ತಿಳಿಸಲಾಗಿದೆ.

      ಇದನ್ನೂ ಓದಿ: ಬಳ್ಳಾರಿ | ಪಾಲಿಕೆ ಅವ್ಯವಸ್ಥೆ ವಿರುದ್ಧ ನಾಗರಿಕ ಸಮಿತಿ ಪ್ರತಿಭಟನೆ

      ವಿಶೇಷ ಸೂಚನೆ:

      ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3, 6(ಎ) ಮತ್ತು 7 ರಡಿ ಯಾವುದೇ ಬಿಡ್ಡುದಾರರ ಹೆಸರಿನಲ್ಲಿ ಪೊಲೀಸ್ ಪ್ರಕರಣ ದಾಖಲಾಗಿರಬಾರದು. ಒಂದು ವೇಳೆ ಪೊಲೀಸ್ ಪ್ರಕರಣ ದಾಖಲಾಗಿದ್ದಲ್ಲಿ ಅಂತಹ ಬಿಡ್ಡುದಾರರು (ವ್ಯಕ್ತಿ)/ಸಂಸ್ಥೆ ಹಾಗೂ ಸಾರ್ವಜನಿಕ ವಿತರಣ ವ್ಯವಸ್ಥೆಯಡಿ ಕೆಲಸ ನಿರ್ವಹಿಸುತ್ತಿರುವವರು ಹರಾಜಿನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಒಂದು ವೇಳೆ ಅಂತಹ ವ್ಯಕ್ತಿಗಳು/ಟ್ರೇಡ್‌ಗಳ ಭಾಗವಹಿಸಿದ್ದು ಕಂಡು ಬಂದಲ್ಲಿ ಅಂತವರ ಇಎಂಡಿ ಮೊತ್ತವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

      ಹೆಚ್ಚಿನ ಮಾಹಿತಿಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂರ್ಪಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

      eedina
      ಈ ದಿನ ಡೆಸ್ಕ್‌
      Website |  + posts

      ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

      ಪೋಸ್ಟ್ ಹಂಚಿಕೊಳ್ಳಿ:

      LEAVE A REPLY

      Please enter your comment!
      Please enter your name here

      ಪೋಸ್ಟ್ ಹಂಚಿಕೊಳ್ಳಿ:

      ಈ ಹೊತ್ತಿನ ಪ್ರಮುಖ ಸುದ್ದಿ

      ವಿಡಿಯೋ

      ಇದೇ ರೀತಿಯ ಇನ್ನಷ್ಟು ಲೇಖನಗಳು
      Related

      ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

      ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

      ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

      ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

      ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

      ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

      ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

      ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

      Download Eedina App Android / iOS

      X